Breaking News

ರಾಜ್ಯ

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ …

Read More »

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭ

ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ …

Read More »

ಧಾರವಾಡ : ಗ್ರಾಮಗಳ ತುಂಬಾ ಕೊರೊನಾಯಣ

ಧಾರವಾಡ: ಅಮ್ಮ ಮೈಗೆ ಹಚ್ಚುವ ಸೋಪುಗಳು ಯಾಕೆ ವಾಸನೆ ಬರುತ್ತಿಲ್ಲ? ಎಂದು ಪ್ರಶ್ನೆ ಕೇಳುತ್ತಿರುವ ಹಳ್ಳಿಯ ಮಕ್ಕಳು. ಗುಟಕಾವೂ ರಚಿಸುತ್ತಿಲ್ಲವಲ್ಲೋ ಎಂದು ಪರಸ್ಪರ ಸ್ನೇಹಿತರನ್ನು ಕೇಳಿಕೊಳ್ಳುತ್ತಿರುವ ಹಳ್ಳಿಯ ಪಡ್ಡೆ ಹುಡುಗರು. ಮೈ ಕೈ ನೋವು, ನೆಗಡಿ, ಕೆಮ್ಮಿನಿಂದ ಬಳಲುತ್ತಿರುವ ರೈತ ಸಮೂಹ. ಒಟ್ಟಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶವನ್ನು ಕೋವಿಡ್‌ ಸಣ್ಣಗೆ ಪ್ರವೇಶ ಮಾಡಿಯಾಗಿದ್ದು, ಇನ್ನೇನಿದ್ದರೂ ಅದನ್ನು ಎದುರಿಸುವುದೊಂದೇ ದಾರಿ. ಹೌದು, ಇದು ವಾಸ್ತವ. ಹೆಚ್ಚು ಕಡಿಮೆ ಒಂದು ತಿಂಗಳ ಮೊದಲು …

Read More »

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್‌ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್‌ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್‌ ಇಲಾಖೆಯಿಂದ ಅನುಮತಿ …

Read More »

ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ

ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …

Read More »

ವಿಜಯಪುರ : ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ವಿಜಯಪುರ: ರಾಜ್ಯಾದ್ಯಂತ ಹಲವೆಡೆ ಬುಧವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ನಾಲ್ಕು ಆಡುಗಳು ಸಿಡಿಲಿನಿಂದ ಸಾವನಪ್ಪಿವೆ. ಅಶೋಕರಾಮ ಕಾರಜೋಳ(48), ಬಾಷಾಸಾಬ್‌ ಕರಜಗಿ(40) ಮತ್ತು ಜಾವಿದ್‌ ಹಾಜಿಸಾಬ್‌ ಜಾಲಗೇರಿ(33) ಸಾವಿಗೀಡಾಗಿದ್ದಾರೆ. ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಟಕ್ಕೆ ದರ್ಗಾ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ಕೊರೊನಾ ಸೋಂಕಿಗೆ ಇಬ್ಬರು ಪೊಲೀಸರು ಬಲಿ; ಜಿಲ್ಲೆಯಾದ್ಯಂತ 25 ಸಿಬ್ಬಂದಿಗಳಿಗೆ ಕೊವಿಡ್ ಧೃಡ

ಚಿಕ್ಕಬಳ್ಳಾಪುರ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಸದ್ಯ ಜನ ಸಾಮಾನ್ಯರ ಮಧ್ಯದಲ್ಲಿ ನಿಂತು ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಕೊರೊನಾ ಸಂಕಷ್ಟ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಪೊಲೀಸರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಪೊಲೀಸರಲ್ಲಿ ಕೊವಿಡ್ …

Read More »

ದೇಶದಲ್ಲಿ 3.82 ಲಕ್ಷ ಹೊಸ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ . ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 3.82 ಲಕ್ಷ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3780 ಮಂದಿ ಮೃತಪಟ್ಟಿದ್ದಾರೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 …

Read More »

ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

ಲಕ್ನೋ, ಮೇ 05: ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 …

Read More »