Breaking News

ರಾಜ್ಯ

ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ

ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More »

ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಈಗಾಗಲೇ 6 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಈ ಲಾಕ್ ಡೌನ್ ಅವಧಿ …

Read More »

ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್

ಬೆಳಗಾವಿ – ಕೊರೋನಾ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಲೇ ಹೋಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ಡಾ.ಮಾಧವ ಪ್ರಭು ಡೈಯೆಟ್ ಚಾರ್ಟ್ ಮನೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುವುದಾದರೆ ಕೊರೋನಾ ಪಾಸಿಟಿವ್ ಬಂದವರ ಆಹಾರ ಹೇಗಿರಬೇಕು? ಬೆಳಗಾವಿಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಕೊರೋನಾ ಕೇರ್ ಸ್ಪೆಷಲಿಸ್ಟ್, ಕೆ.ಎಲ್.ಇ ಆಸ್ಪತ್ರೆಯ ವೈದ್ಯ ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್ ನೀಡಿದ್ದಾರೆ. ಸ್ಥಳೀಯವಾಗಿ ಸಿಗುವ ಆಹಾರಗಳ ಮೇಲೆ ಕೆಲವು …

Read More »

ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ

ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …

Read More »

ಪಾರ್ಕ್ ಗಳಲ್ಲಿ ನಡೆಯಲಿದೆ ಅಂತ್ಯಸಂಸ್ಕಾರ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ಸ್ಮಶಾನಗಳಲ್ಲಿ ಅಂತ್ಯಕ್ರಿಯೆಗೆ ಸ್ಥಳ ಇಕ್ಕಟ್ಟಾದ ಹಿನ್ನೆಲೆ ಅಂತ್ಯಸಂಸ್ಕಾರಕ್ಕೆ ಪಾರ್ಕ್ ಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ದೆಹಲಿಯ ಸರಾಯ ಕಾಲೇಂ ಖಾಂ ಪಾರ್ಕ್ ಸ್ಮಶಾನವಾಗಿ ಬದಲಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹ ಬರುತ್ತಿರೋದರಿಂದ ಜನರು ಕ್ಯೂ ಹಚ್ಚುವಂತಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವ ದೆಹಲಿ ಸರ್ಕಾರ ಅಲ್ಲಿರುವ ಪಾರ್ಕ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಸರಾಯ ಕಾಲೇಂ ಖಾಂನಲ್ಲಿ ಏಕಕಾಲದಲ್ಲಿ …

Read More »

ಭಾರತ; 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 25; ಭಾರತದಲ್ಲಿ 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751.   ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖಗೊಂಡಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,92,311. ಇದುವರೆಗೂ …

Read More »

ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’

ದೇಶದ ಜನತೆಯನ್ನು ತಲುಪಲು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ (ಏಪ್ರಿಲ್ 24)ವಾದ ಶನಿವಾರದಂದು ಚಾಲನೆ ನೀಡಲಾಗಿದೆ. ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ನೂತನ ಟಿವಿ ಚಾನೆಲ್ …

Read More »

ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಸಿಎಂ ಕೇಜ್ರಿವಾಲ್ ಆದೇಶ

ನವದೆಹಲಿ: ದೆಹಲಿಯಲ್ಲಿ ಕೊರೋನಾ ಹೆಚ್ಚುತ್ತಿದ್ದು, ಮತ್ತೊಂದೆಡೆ ಇಲ್ಲಿನ ಆಸ್ಪತ್ರೆಗಳನ್ನು ಆಮ್ಲಜನಕದ ಕೊರತೆೆ ಅತಿಯಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 3ರ ವರೆಗೂ ಲಾಕ್‌ಡೌನ್‌ ವಿಸ್ತರಿಸಿ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ‘ಆಮ್ಲಜನಕ ಪೂರೈಕೆಗೆ ಸಹಾಯವಾಗಲು ಪೋರ್ಟಲ್‌ ಆರಂಭಿಸಲಾಗಿದೆ. ಉತ್ಪಾದಕರು, ವಿತರಕರು ಹಾಗೂ ಆಸ್ಪತ್ರೆಗಳಿಂದ ಪ್ರಸ್ತುತ ಆಮ್ಲಜನಕ ಪೂರೈಕೆ ಮತ್ತು ಸಂಗ್ರಹದ ಮಾಹಿತಿ ಅಪ್‌ಡೇಟ್‌ ಆಗಲಿದೆ. ಪ್ರತಿ 2 ಗಂಟೆಗಳಿಗೊಮ್ಮೆ ಅಪ್‌ಡೇಟ್‌ ಮಾಡಲಾಗುತ್ತದೆ. ಕೇಂದ್ರ …

Read More »

ಪ್ರೀತಿಸಿದ ‘ಯುವ ಜೋಡಿ’ಗೆ ಕುಟುಂಬಸ್ಥರೇ ವಿಲನ್ : ‘ಯುವ ಪ್ರೇಮಿ’ಗಳು ಆತ್ಮಹತ್ಯೆಗೆ ಶರಣು

ಹಾವೇರಿ : ನಾಲ್ಕು ವರ್ಷಗಳಿಂದ ಪ್ರೀತಿಸಿದ್ದ ಆ ಇಬ್ಬರು ಯುವ ಪ್ರೇಮಿಗಳು, ಮದುವೆ ಆಗೋದಕ್ಕೂ ನಿರ್ಧರಿಸಿದ್ದರು. ಆದ್ರೇ.. ಕುಟುಂಬಸ್ಥರೇ ವಿಲನ್ ಆಗಿ ಪರಿಣಮಿಸಿ, ಯುವತಿಗೆ ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದರು. ಇದರಿಂದ ಮನನೊಂದು ಇಬ್ಬರು ಯುವ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹಾವೇರಿ ತಾಲೂಕಿನ ನಾನೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಇರ್ಷಾದ್ ಕುಡಚಿ ಹಾಗೂ ವಿದ್ಯಾಶ್ರೀ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇರ್ಷಾದ್ ಡಿಪ್ಲೋಮಾ …

Read More »

ಭಾರತಕ್ಕೆ ಆಮ್ಲಜನಕ ಸಿಲಿಂಡರ್ ಪೂರೈಸಲು ನೆರವಾಗುವಂತೆ ಅಖ್ತರ್ ಮನವಿ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತಕ್ಕೆ ನೆರವಾಗುವಂತೆ ಪಾಕಿಸ್ತಾನ ಸರ್ಕಾರ ಹಾಗೂ ಅಭಿಮಾನಿಗಳಲ್ಲಿ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಮನವಿ ಮಾಡಿದ್ದಾರೆ. ಏಪ್ರಿಲ್ 24 ಶನಿವಾರದಂದು ಭಾರತದಲ್ಲಿ ಗರಿಷ್ಠ 3,46,786 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇದು ದಿನವೊಂದರಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಹಾಗೆಯೇ ಕಳೆದ 24 ತಾಸಿನಲ್ಲಿ 2,624 ಮಂದಿ ಮೃತಪಟ್ಟಿದ್ದಾರೆ. ‘ಈಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವುದು ಯಾವುದೇ ಸರ್ಕಾರಕ್ಕೆ ಕಷ್ಟಕರವಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ …

Read More »