ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ. ಜನವರಿ 26 ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಜಾಮೀನು ನೀಡಿದೆ. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ …
Read More »ಹೆಚ್‍ಡಿಕೆಗೆ ಕೊರೊನಾ ಸೋಂಕು
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ …
Read More »ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್ ಬೂತ್’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. …
Read More »ಉಪಚುನಾವಣೆ: ಬೆಳಗಾವಿ ಮತ್ತು ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ ಆರಂಭ
ಬೆಳಗಾವಿ/ರಾಯಚೂರು: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ …
Read More »ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ
ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದೂರು ಗ್ರಾಮಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡಿರುವ ಇತರ …
Read More »ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ವಿಧಿವಶ
ಚೆನ್ನೈ: ನಿನ್ನೆ (ಏಪ್ರಿಲ್ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್ 17) ವಿಧಿವಶರಾಗಿದ್ದಾರೆ. ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …
Read More »ರೈಲು ಇಳಿಯುತ್ತಿದ್ದಂತೆ ನಿಲ್ದಾಣದಿಂದ ಎದ್ನೋ ಬಿದ್ನೋ ಎಂದು ಓಡಿದ ಜನರು: ಕಾರಣ ಕೇಳಿದ್ರೆ ದಂಗಾಗ್ತೀರಾ!
ಪಟನಾ: ಎಲ್ಲಿ ನಮ್ಮನೆಲ್ಲ ಹಿಡಿದು ಕರೊನಾ ವೈರಸ್ ಟೆಸ್ಟ್ ಮಾಡಿಸುತ್ತಾರೋ ಎಂಬ ಭಯದಲ್ಲಿ ಮಕ್ಕಳು, ಯುವಕರು ಸೇರಿದಂತೆ ಅನೇಕರು ರೈಲು ನಿಲ್ದಾಣದಲ್ಲಿ ಯರ್ರಾಬಿರ್ರಿ ಓಡಿದ ಘಟನೆ ಬಿಹಾರದ ಬುಕ್ಸರ್ನಲ್ಲಿ ಗುರುವಾರ ನಡೆದಿದೆ. ರೈಲು ಇಳಿದು ನಿಲ್ದಾಣದಿಂದ ಹೊರ ಹೋಗುವ ಮುಂಚೆ ಕರೊನಾ ಟೆಸ್ಟ್ ಮಾಡಿಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಕೇಳಿದಾಗ, ಟೆಸ್ಟ್ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಜನರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲು …
Read More »ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಲು ಆಗ್ರಹ
ಲಿಂಗಸುಗೂರು: ‘ಬೀದಿಬದಿ ವ್ಯಾಪಾರಿಗಳಿಗೆ ಜೀವನ ಭದ್ರತೆ ಒದಗಿಸಲು ಸ್ಥಳೀಯ ಸಂಸ್ಥೆಗಳು ವ್ಯಾಪಾರ ಘಟಕಗಳನ್ನು ರಚಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳ ಮಹಾಮಂಡಲ ತಾಲ್ಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು. ‘ರಸ್ತೆ ಬದಿ ವ್ಯಾಪಾರಿಗಳ ಅನುಕೂಲಕ್ಕೆ ಮಾರುಕಟ್ಟೆ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರನ್ನು ಕನಿಷ್ಠ ಮೂರು ತಿಂಗಳಿಗೊಮ್ಮೆ ಏಳು ದಿನಗಳ ನೋಟಿಸ್ ನೀಡಿ ಸಭೆ ಕರೆದು ಕುಂದುಕೊರತೆ ವಿಚಾರಣೆ ಮಾಡುವುದನ್ನು …
Read More »ರಸ್ತೆ ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ- KSRTC ಕಚೇರಿ ವಸ್ತುಗಳು ಜಪ್ತಿ
ಗದಗ: ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕೆ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಏನಿದು ಪ್ರಕರಣ? 2009ರಲ್ಲಿ …
Read More »ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ. ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್‍ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್‍ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ …
Read More »
Laxmi News 24×7