Breaking News

ರಾಜ್ಯ

ಪಶ್ಚಿಮ ಬಂಗಾಳದ ಜನರು ಹೇಳಿದರೆ ರಾಜಿನಾಮೆ ನೀಡಲು ಸಿದ್ದ: ಅಮಿತ್ ಷಾ

ಕೊಲ್ಕತ್ತಾ:ಪಶ್ಚಿಮ ಬಂಗಾಳದ ಜನರು ಹಾಗೆ ಕೇಳಿದರೆ ಮಾತ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಆದಾಗ್ಯೂ, ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇ 2 ರಂದು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಅಮಿತ್ ಷಾ ಪ್ರತಿಪಾದಿಸಿದರು. ಕೂಚ್ ಬೆಹಾರ್ ಜಿಲ್ಲೆಯ ಸಿಟಾಲ್ಕುಚಿಯಲ್ಲಿ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ …

Read More »

ಮೋದಿ ಗಡ್ಡಬಿಟ್ಟರೆ ಟ್ಯಾಗೋರ್ ಆಗೋದಿಲ್ಲ: ಖರ್ಗೆ

ಮಸ್ಕಿ (ರಾಯಚೂರು): ‘ಪ್ರಧಾನಿ ನರೇಂದ್ರ ಮೋದಿ ಗಡ್ಡಬಿಟ್ಟರೆ ರವೀಂದ್ರನಾಥ ಟ್ಯಾಗೋರ್ ಆಗೋದಿಲ್ಲ.‌ ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡಿರುವ ನಕಲು ಇದಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ‌ ಮಲ್ಲಿಕಾರ್ಜುನ ‌ಖರ್ಗೆ ಹೇಳಿದರು. ಮಸ್ಕಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪರ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಪಶ್ಚಿಮ ‌ಬಂಗಾಳಕ್ಕೆ ಹೋಗಿದ್ದ ಪ್ರಧಾನಿ ಪಕ್ಷದ ನೀತಿ‌ಗಳನ್ನು ಹೇಳುವ ಬದಲಾಗಿ, ಮಮತಾ‌ ಬ್ಯಾನರ್ಜಿ‌ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಪ್ರಧಾನಿ ಜೋಕರ್ ರೀತಿ‌ ವರ್ತನೆ ತೋರಿಸಿದ್ದಾರೆ’ …

Read More »

ಮೇ 24ರಿಂದ PUC, ಜೂನ್ 20ರಿಂದ SSLC ಪರೀಕ್ಷೆಗಳು ಆರಂಭ: ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಹಾಗೂ ಜೂನ್ 20ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳು ಸುರಕ್ಷತಾ ಕೇಂದ್ರಗಳು ಆಗಿರುತ್ತೆ. ಎಸ್‍ಎಸ್‍ಎಲ್‍ಸಿಗೆ 8,75,798 ಜನ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಪಿಯುಸಿಗೆ 7,01,651 ಮಂದಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲಾಗಿದೆ ಎಂದು ವಿವರಿಸಿದರು. ಸಿಲೇಬಸ್ ನಲ್ಲಿ ಶೇ.30ರಷ್ಟು …

Read More »

ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಇನ್ನೆರಡು ದಿನಗಳಲ್ಲಿ ಪಾಲ್ಗೊಳ್ಳುವುದಾಗಿ ತಮಗೆ ತಿಳಿಸಿದ್ದಾರೆಂದ ಉಮೇಶ್ ಕತ್ತಿ

ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಮತದಾರರಲ್ಲಿ ಮನವಿ ಮಾಡಿದರು. ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥ ಸಭೆಯಲ್ಲಿ …

Read More »

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಗಣಿ ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅವಘಡ ಸಂಭವಿಸದಂತೆ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಸ್ಪೋಟಕ ವಸ್ತುಗಳ ಸಾಗಾಟ, ಸಂಗ್ರಹಣೆಯ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಉಚಿತ ಮರಳು ನೀತಿ ಜಾರಿಗೆ ತರಲು ನಿರ್ಧರಿಸಲಾಗಿದೆ. 10 ಲಕ್ಷ ರೂಪಾಯಿಯವರೆಗೆ ಒಂದು …

Read More »

ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು

ರಾಯಚೂರು: ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಎಂ ಮನೆಗೆ ಹೋಗುತ್ತಾರೆ ಎಂದು ಅದೇ ಪಕ್ಷದ ಯತ್ನಾಳ ಹೇಳಿದ್ದಾರೆ. ಬಿಜೆಪಿಯವರು ಎಲ್ಲಿಯಾದರೂ ಸೋಲ್ತೀವಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಯಡಿಯೂರಪ್ಪನವರು ಮೊದಲಿಬಿಂದಲೂ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ ಎಂದರು. ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎನ್ನುವುದು ಬಾಲಿಶತನದ ಹೇಳಿಕೆ. …

Read More »

ಆರನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲ್ಲ: ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ

ಹುಮನಾಬಾದ: ಯಾವುದೇ ಕಾರಣಕ್ಕೂ ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಮಾಣಿಕನಗರದಲ್ಲಿ ರವಿವಾರ ‘ಉದಯವಾಣಿ’ ಜತೆ ಮಾತನಾಡಿದ ಅವರು, ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವೇ ಇಲ್ಲ. ಒಂದು ವೇಳೆ ಸಮನಾದ ಸಂಬಳ ನೀಡಿದರೆ ಇಲಾಖೆಯ ಸಿಬ್ಬಂದಿಗಳ ಮಧ್ಯೆ ತಾರತಮ್ಯ ನೀತಿ ಹುಟ್ಟಿಕೊಳ್ಳುತ್ತದೆ. ಸೀನಿಯರ್ ಸಿಬ್ಬಂದಿಗಳು ಹಾಗೂ ಜೂನಿಯರ್ ಸಿಬ್ಬಂದಿಗಳ …

Read More »

ರೆಸಾರ್ಟ್‍ನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಪಾರ್ಟಿ – 150ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ

ಹಾಸನ: ಖಾಸಗಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ ನಡೆಸಿ ಕೊರೊನಾ ನಿಯಮ ಮೀರಿ ಪಾರ್ಟಿಯಲ್ಲಿ ಭಾಗವಹಿಸಿದ್ದ 150 ಕ್ಕೂ ಹೆಚ್ಚು ಜನ ವಶಕ್ಕೆ ಪಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಲವೆಡೆ ಖಾಸಗಿ ರೆಸಾರ್ಟ್ ಮೇಲೆ ದಾಳಿ ನಡೆಸಿದ ಎಸ್‍ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ರೆಸಾರ್ಟ್‍ನಲ್ಲಿ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಒಂದು ಕಡೆ ಹಾಸನದಲ್ಲಿ ಕೊರೊನ ಆತಂಕ ದಿನದಿಂದ ದಿನಕ್ಕೆ …

Read More »

ಸಾರಿಗೆ ಅಧಿಕಾರಿಗಳ ವಿರುದ್ಧ ಖಾಸಗಿ ಬಸ್ ಚಾಲಕರ ಆಕ್ರೋಶ

ಮೈಸೂರು: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‍ಗಳ ಚಾಲಕರು, ನಿರ್ವಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ಮುಷ್ಕರ ಮುಂದುವರಿದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‍ಗಳು ಇಲ್ಲದೇ ಖಾಸಗಿ ಬಸ್‍ಗಳು ಸೇವೆ ಸಲ್ಲಿಸುತ್ತಿವೆ. ಇದೀಗ ಒಂದೊಂದಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳು ರಸ್ತೆಗಿಳಿಯುತ್ತಿದೆ. ಹಾಗಾಗಿ ಖಾಸಗಿ ಬಸ್‍ಗಳ ಚಾಲಕರು ಮತ್ತು ನಿರ್ವಾಹಕರು ನಾವು ಬೆಳಿಗ್ಗೆಯಿಂದಲೇ ನಮ್ಮ ಬಸ್‍ಗಳನ್ನು ತಂದು ನಿಲ್ಲಿಸಿ ಕಾದು ಕುಳಿತಿದ್ದೇವೆ. ನೀವು ಈಗ …

Read More »

ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ

ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ಮೇಡೇ’ ಸಿನಿಮಾದ ಚಿತ್ರೀಕರಣ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಶೂಟಿಂಗ್ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರಿದ್ದ ‘ಮೇಡೇ’ ಸಿನಿಮಾ ಅದಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿದೆ. ಆದರೆ, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು.   ಅಂದ್ಹಾಗೆ, ಏಪ್ರಿಲ್ ಕೊನೆಯಲ್ಲಿ ದೋಹಾದಲ್ಲಿ ಶೂಟಿಂಗ್ ಶುರು ಮಾಡಲು ಎಲ್ಲಾ ತಯಾರಿ ನಡೆದಿತ್ತು. ಈ ವೇಳೆ ಅಜಯ್ …

Read More »