ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ …
Read More »RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!
ನಾಗ್ಪುರ್, ಏಪ್ರಿಲ್ 10: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ …
Read More »ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ: ಜತೆಗಿದ್ದ ವ್ಯಕ್ತಿಯ ಸ್ಥಿತಿ ಗಂಭೀರ
ಗೋಣಿಕೊಪ್ಪಲು: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಶುಕ್ರವಾರ ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜತೆಯಲ್ಲಿದ್ದ ತೋಲಂಡ ಸುಭಾಷ್ ಚಂಗಪ್ಪ ಎಂಬುವವರೂ ಆತ್ಮಹತ್ಯೆಗೆ ಯತ್ನಿಸಿ, ಬದುಕುಳಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಸುಭಾಷ್ ಚಂಗಪ್ಪ ಲಾಡ್ಜ್‌ನಲ್ಲಿ ಕೊಠಡಿ ಪಡೆಯುವಾಗ ನಾಪೋಕ್ಲು ಸಮೀಪದ ಪೇರೂರು ಗ್ರಾಮದ ವಿಳಾಸ ನೀಡಿದ್ದಾರೆ. ಮೃತ ಮಹಿಳೆಯ ಕೊಠಡಿಯಲ್ಲಿ ಐಡಿ ಕಾರ್ಡ್ ಹಾಗೂ ಮೊಬೈಲ್ ದೊರೆತ್ತಿದ್ದು, ಇದರಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಎಂದಿದ್ದು, ಹೆಸರು …
Read More »ಡಿಸಿಎಂ ಗೋವಿಂದ ಕಾರಜೋಳಗೆ ಮತ್ತೆ ಕೋವಿಡ್ ಸೋಂಕು
ಮುಧೋಳ(ಬಾಗಲಕೋಟೆ ಜಿಲ್ಲೆ): ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಅವರು ಗುಣಮುಖರಾಗುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಅವರಿಗೆ ನಾಲ್ಕು ದಿನ ವಿಶ್ರಾಂತಿಯ ಅಗತ್ಯವಿದೆ’ ಎಂದು ಮಣಿಪಾಲ ಆಸ್ಪತ್ರೆ ಮುಖ್ಯಸ್ಥ ಡಾ.ಸುರ್ದಶನ ಬಲ್ಲಾಳ್ ತಿಳಿಸಿದ್ದಾರೆ. ಕಳೆದ ವರ್ಷವೂ ಅವರಿಗೆ ಸೋಂಕು ತಗುಲಿತ್ತು, ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.
Read More »ಸಾರಿಗೆ ನೌಕರರ ಮೂಲ ವೇತನ ಎಷ್ಟು? ಆರಂಭಿಕ ಸಂಬಳ ಎಷ್ಟು ಸಿಗುತ್ತೆ?
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸ್ಸಿನ ಪ್ರಕಾರ ಸಂಬಳ ಜಾರಿ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಸಂಬಳದ ಬಗ್ಗೆ ತಪ್ಪು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂದು ಯಾರಿಗೆ ಎಷ್ಟು ಆರಂಭಿಕ ವೇತನ ನೀಡಲಾಗುತ್ತದೆ ಎಂಬ ವಿವರವನ್ನು ಬಿಡುಗಡೆ ಮಾಡಿದೆ. ಚಾಲಕರು ಮೂಲ ವೇತನ – 12,400 ರೂ. ಮೂಲ ತುಟ್ಟಿಭತ್ಯೆ – 5,611 ರೂ. ಒಟ್ಟು ಮೂಲ …
Read More »2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ.
ಚೆನ್ನೈ: 2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ. 5 ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ವಿರುದ್ಧ ಇಲ್ಲಿಯಯವರೆಗೆ ಯಾರೂ 5 ವಿಕೆಟ್ ಪಡೆದಿರಲಿಲ್ಲ. ಆದರೆ ಈ ಬಾರಿ ಹರ್ಷಲ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣದ ಮಧ್ಯಮ ವೇಗಿ ಬೌಲರ್ ಹರ್ಷಲ್ ಪಟೇಲ್ ಅವರನ್ನು ಕೊಹ್ಲಿ 5ನೇಯವರಾಗಿ ಬೌಲಿಂಗ್ ಇಳಿಸಿದ್ದರು. ಹರ್ಷಲ್ …
Read More »ಸವದತ್ತಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ,
ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದ ಅಂಗವಾಗಿ ಸವದತ್ತಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ ಜರುಗಿತು. “ಜನಸಾಮಾನ್ಯರಿಗೆ ಬೆಲೆ ಏರಿಕೆಯ ಮೂಲಕ ತೊಂದರೆ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನರು ತಮ್ಮ ಶಕ್ತಿ ತೋರಿಸಬೇಕು” ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ, ರುದ್ರಪ್ಪ ಲಮಾನಿ, ಕುಸುಮಾವತಿ ಶಿವಳ್ಳಿ, ಎಸ್.ಬಿ. ಘಾಟಗೆ, ಬಿ.ಆರ್. ಪಾಟೀಲ, ವಿಜಯ ಕಾಶಪ್ಪನವರ, ಆಲಕೋಡ ಹನುಮಂತಪ್ಪ, ವಿನಯ …
Read More »IPL 2021 Live Score, MI vs RCB: ಆರ್ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್
ಮಂಗಳೂರು : ಸಾರಿಗೆ ನೌಕರರ ಸಂಬಳದ ವಿಚಾರವನ್ನು ಸ್ವಾಯತ್ತ ಸಂಸ್ಥೆಗಳಿಗೆ ಬಿಡಲಾಗಿದೆ. ಅವರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸಂಬಳಗಳು ನಿಗದಿಯಾಗಲಿದೆ ಎಂದು ಶುಕ್ರವಾರ ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು …
Read More »ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ ನಾಳೆ ರಾತ್ರಿಯಿಂದ 10 ದಿನಗಳ ಕಾಲ ಕರ್ಫ್ಯೂ ಜಾರಿ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ …
Read More »
Laxmi News 24×7