Breaking News

ರಾಜ್ಯ

ಲಾಟರಿಯಲ್ಲಿ ಕೋಟಿ ರೂ. ಒಲಿದ ಕಥೆ ಕಟ್ಟಿದ ತೊಕ್ಕೊಟ್ಟು ವಾಚ್‌ಮನ್

ಮಂಗಳೂರು, ಏಪ್ರಿಲ್ 9: ಸಾಲಗಾರರ ಕಾಟ ತಡೆಯಲಾರದೆ ಲಾಟರಿಯಲ್ಲಿ ಒಂದು ಕೋಟಿ ರೂ. ಗೆದ್ದ ಸುಳ್ಳಿನ ಕಥೆ ಕಟ್ಟಿ ಸೆಕ್ಯೂರಿಟಿ ಗಾರ್ಡ್ ಪರಾರಿಯಾದ ಸ್ವಾರಸ್ಯಕರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗುರುವಾರ ಮಂಗಳೂರು ನಗರ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಿನ ಕಟ್ಟಡದಲ್ಲಿ ಮೂರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಕ್ಯಾಲಿಕಟ್ ನಿವಾಸಿ ಮೊಯಿದ್ದೀನ್ ಕುಟ್ಟಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದರು.   ಸೆಕ್ಯೂರಿಟಿ ಗಾರ್ಡ್ ಕೇರಳದ ಲಾಟರಿಯಲ್ಲಿ …

Read More »

ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಮಾಡ್ತಿದ್ದಾರೆ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ರಾಜ್ಯ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ‌ …

Read More »

ಅಮೆರಿಕಾದಲ್ಲಿ ಭಾರತೀಯ ದಂಪತಿ ಅನುಮಾನಾಸ್ಪದ ಸಾವು

ಮುಂಬೈ,ಏ.9-ಅಮೆರಿಕಾದಲ್ಲಿ ಭಾರತೀಯ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯ ನಾಲ್ಕು ವರ್ಷದ ಮಗಳು ಬಾಲ್ಕನಿಯಲ್ಲಿ ನಿಂತು ಆಳುತ್ತಿದ್ದದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಬಾಲಾಜಿ ಭರತ್ ರುದ್ರಾವರ್(32) ಹಾಗೂ ಆತನ ಪತ್ನಿ ಆರತಿ ಬಾಲಾಜಿ ರುದ್ರಾವರ್(30) ಅಮೆರಿಕಾದಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ದಂಪತಿ ನ್ಯೂಜೆರ್ಸಿಯಲ್ಲಿರುವ ನಿವಾಸದಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮಗು ಬಾಲ್ಕನಿಯಲ್ಲಿ ನಿಂತು ಆಳುತ್ತಿರುವುದನ್ನು …

Read More »

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …

Read More »

ರಾಜ್ಯ ಸರಕಾರದ ಪಾಪದ ಫಲವನ್ನು ಜನತೆ ಅನುಭವಿಸಬೇಕಿದೆ: ಸಾರಿಗೆ ಮುಷ್ಕರದ ಬಗ್ಗೆ ಸಿದ್ದರಾಮಯ್ಯ

ಬೆಂಗಳೂರು: `ರಾಜ್ಯ ಸರಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಗಳ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಬಿಜೆಪಿ ಸರಕಾರದ ಪಾಪದ …

Read More »

ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ: ಕುಮಾರಸ್ವಾಮಿ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ ಇವೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರು. ಈಗ ಆ ಹಣ ಹೇಗೆ ಸಂಪಾದನೆ ಮಾಡಬೇಕು, ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿದ್ದಾರೆ’ ಎಂದು ಮುಖಂಡರ ಹೆಸರು ಪ್ರಸ್ತಾಪ …

Read More »

CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್‌ಲೈನ್ ಮೋಡ್‌ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ.   ‘ಕ್ಯಾನ್ಸಿಲ್ಬೋರ್ಡೆಕ್ಸ್ 2021’ ಎಂಬ ಹ್ಯಾಶ್‌ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ. ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲಾಗುವುದರಿಂದ ಸಿಬಿಎಸ್‌ಇ 10, 12 …

Read More »

ರೌಡಿಯೇ ಬೇಕೆಂದು ತಾಳಿ ಕಟ್ಟಿಸಿಕೊಂಡ್ಳು – ಮದ್ವೆ ಬಳಿಕ ಮತ್ತೊಬ್ಬನೊಂದಿಗೆ ಮಂಚ ಏರಿದ್ಳು!

ಮಂಡ್ಯ: ಆಕೆಗೆ ರೌಡಿ ಶೀಟರ್ ಜೊತೆ ಲವ್ ಆಗಿತ್ತು. ಹೆತ್ತವರು ವಿರೋಧ ಮಾಡಿದ್ರಿಂದ ಮನೆ ಬಿಟ್ಟೋಗಿ ಮದುವೆಯಾಗಿದ್ದ ಆಕೆಗೆ 8 ವರ್ಷದ ಗಂಡು ಮಗುವೂ ಇತ್ತು. ಈ ನಡುವೆ ಗಂಡನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಮೊದಲೇ ಆಕೆಯ ಬಗ್ಗೆ ಸಂಶಯಗೊಂಡಿದ್ದ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದು, ಪ್ರಿಯಕರನ ಬುರುಡೆಯನ್ನು ಗಂಡ ಬಿಚ್ಚಿದ್ದಾನೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಹರ್ಷಿತಾ ಶಾಲೆಯಲ್ಲಿ ಓದುವಾಗಲೇ ರೌಡಿ ಶೀಟರ್ ನಾಗೇಂದ್ರ …

Read More »

ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ

ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …

Read More »