Breaking News

ರಾಜ್ಯ

ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ …

Read More »

ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!

ಖಮ್ಮಮ್​: ಸ್ವಂತ ಅಣ್ಣನ ಮೇಲೆ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರು ದಾಖಲಾದ ದಿನದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಂತ್ರಸ್ತ ಯುವತಿಯ ಸಹೋದರ ವಿಜಯ್​ ನೇಣಿಗೆ ಶರಣಾಗಿದ್ದಾನೆ. ಮೊನ್ನೆಯಷ್ಟೇ ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಭದ್ರಾದ್ರಿ ಕೊಟ್ಟಗುಡೆಮ್​ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯಿಲ್ಲದ ಸಂತ್ರಸ್ತೆ …

Read More »

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್!

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ …

Read More »

ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವವರ ಸಂಖ್ಯೆ ಅಧಿಕವಾಗಿರುತ್ತದೆ. ಅಲ್ಲದೆ ಈಗ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ …

Read More »

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 …

Read More »

ಮುಷ್ಕರದ ನಡುವೆಯೂ ಪೀಲ್ಡಿಗಿಳಿದ ಸರ್ಕಾರಿ ಬಸ್

ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ. ಸರ್ಕಾರಿ ಬಸ್ ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೊಸಪೇಟೆಗೆ ಸಂಚರಿಸುತ್ತಿದೆ. ಈ ವೇಳೆ ಗದಗ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತಂದಿದೆ. ಎಲ್ಲಾ ಕಡೆಗಳಲ್ಲಿ ಸಾರಿಗೆ ನೌಕರರು ನಿನ್ನೆಯೇ ಸೆಕೆಂಡ್ ಶಿಫ್ಟ್‍ಗೆ ಗೈರು ಹಾಜರಾಗಿದ್ದರು. ಆದರೆ ಹೊಸಪೇಟೆ ಘಟಕದ ಕೆಲವು ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ …

Read More »

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಟ್ಟಿದ ಸಾರಿಗೆ ಮುಷ್ಕರ

ದೇವನಹಳ್ಳಿ: 6ನೇ ವೇತನ ಅಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್​ಗಳು ಸಂಚರಿಸುತ್ತಿಲ್ಲ. ಹಾಗಾಗಿ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ದಿನಕ್ಕೆ 300 ಟ್ರಿಪ್ ವಾಯುವಜ್ರ ಬಸ್​ಗಳುವಿಮಾನ ನಿಲ್ದಾಣದಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಚರಿಸುತ್ತಿದ್ದವು. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಬಸ್​ಗಳಿಲ್ಲದೆ …

Read More »

6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲೂ ಸಾಧ್ಯವೇ ಇಲ್ಲ – ಬಿಎಸ್ ವೈ

ಬೆಳಗಾವಿ : ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಆದ್ರೆ ಮುಷ್ಕರದ ಹಿಂದಿನ ದಿನವೂ ಬೆಳವಾಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಾರಿಗೆ ನೌಕರರ 9 ಬೇಡಿಕೆಯಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಕೊವಿಡ್‌ನಿಂದ …

Read More »

ಸರ್ಕಾರಿ ಬಸ್‌ಗಳಿಗೆ ಪರ್ಯಾಯವಾಗಿ ಹಲವೆಡೆ ಖಾಸಗಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ಬಿಸಿ ಜನರಿಗೆ ತಟ್ಟುತ್ತಿದೆ. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರಿ ಸಾರಿಗೆ ನೌಕರರ ಒಕ್ಕೂಟ ಪಟ್ಟು ಹಿಡಿದಿದೆ. ಆದರೆ, ಸದ್ಯ ಆರನೇ ವೇತನ ಆಯೋಗ ಜಾರಿಗೆ ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಪಟ್ಟು ಸಡಿಲಿಸದ ನೌಕರರು ಮುಷ್ಕರ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಸರ್ಕಾರಿ ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ …

Read More »

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭ

: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭಸಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಾಯಾಣಿಕರು ವಿದ್ಯಾರ್ಥಿಗಳು, ರೋಗಿಗಳು ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಮುಷ್ಕರ ನಿರ್ಧಾರ ಕೈಬಿಡುವಂತೆ ಸರ್ಕಾರ ಹಲವು ಬಾರಿ ಮನವಿ ಮಾಡಿದರೂ ಬಗ್ಗದ ಸಾರಿಗೆ ನೌಕರರು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ …

Read More »