Breaking News

ರಾಜ್ಯ

ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!

ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ …

Read More »

ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …

Read More »

ಸಿಡಿ ಇಟ್ಟುಕೊಂಡು ಎಂಎಲ್ ಸಿ, ಮಂತ್ರಿ ಆದವರಿಂದ ಕಲಿಯಬೇಕಾದದ್ದೇನಿಲ್ಲ: ಯತ್ನಾಳ್

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ವೆಬ್ ಸೈಟ್‌ನಲ್ಲಿ ಹೆಸರು

ನವದೆಹಲಿ, ಏಪ್ರಿಲ್ 4; ಕೇಂದ್ರ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಅನ್ವಯ ರಾಜ್ಯಗಳಿಗೆ ಹೊಸ ಅಧಿಕಾರವನ್ನು ಕೊಡಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಹೆಸರನ್ನು ರಾಜ್ಯ ಸಾರಿಗೆ ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಕುಡಿದು ವಾಹನ ಚಾಲನೆ, ಅತಿಯಾದ ವೇಗ, ರೇಸ್‌ ಮಾಡುವವರು, ಅಪಾಯಕಾರಿ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರ ಹೆಸರನ್ನು ನೇಮ್ ಎಂಡ್ ಶೇಮ್ ಎಂಬ ಪಟ್ಟಿಯಡಿ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.   ಒಂದು …

Read More »

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …

Read More »

ಮೃತದೇಹಗಳಿಂದ ತುಂಬಿ ತುಳುಕುತ್ತಿವೆ ಶವಾಗಾರ, ಚಿತಾಗಾರ!

ದುರ್ಗ್ (ಛತ್ತೀಸಗಡ), ಏಪ್ರಿಲ್ 3: ಕೊರೊನಾ ವೈರಸ್ ಎರಡನೆಯ ಅಲೆಯು ದೇಶಾದ್ಯಂತ ಜನರನ್ನು ಮತ್ತೆ ಸಂಕಷ್ಟಕ್ಕೆ ನೂಕಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿರುವುದು ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಸವಾಲುಗಳನ್ನು ಉಂಟುಮಾಡಿದೆ. ಛತ್ತೀಸಗಡ ದುರ್ಗ್ ಎಂಬ ಪುಟ್ಟ ಪಟ್ಟಣದಲ್ಲಿ ಉಂಟಾಗಿರುವ ಬಿಕ್ಕಟ್ಟು ಕಂಗೆಡಿಸುವಂತಿದೆ. ದುರ್ಗ್ ಜಿಲ್ಲೆಯು ಛತ್ತೀಸಗಡದಲ್ಲಿ ಕೋವಿಡ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದ ಪ್ರದೇಶ. ಇಲ್ಲಿ ಎರಡನೆಯ ಅಲೆಯ ಹೊಡೆತ ದೊಡ್ಡ ವಿಪತ್ತುಗಳನ್ನು ತಂದೊಡ್ಡಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್‌ನಿಂದ …

Read More »

14 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ; ಆಸ್ಪತ್ರೆಯ ಎದುರು ಆಂಬುಲೆನ್ಸ್ ನಲ್ಲಿ ಶವಪತ್ತೆ

ಉತ್ತರಪ್ರದೇಶ: ಉತ್ತರಪ್ರದೇಶದ ನೋಯ್ಡಾದ ಖಾಸಗಿ ಆಸ್ಪತ್ರೆಯ ಹೊರಗಡೆ ನಿಂತಿದ್ದ ಆಂಬುಲೆನ್ಸ್ ನಲ್ಲಿ 14 ವರ್ಷದ ಹುಡುಗಿಯ ಶವ ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ ಹುಡುಗಿಯನ್ನು ಅಪಹರಿಸಿ ನೋಯ್ಡಾದ ಖಾಸಗಿ ಆಸ್ಪತ್ರೆಯ ಬಳಿ ಕರೆತಂದು ಕೃತ್ಯ ಎಸಗಿದ್ದಾರೆ. ತಮ್ಮ ಕಾರ್ಯ ಮುಗಿದ ನಂತರ ಹುಡುಗಿಯನ್ನು ವಾಹನದಲ್ಲಿ ಬಿಟ್ಟು ಹೋಗಿದ್ದಾರೆ. ಇದನ್ನು ಕಂಡ ಆಸ್ಪತ್ರೆಯ ಸಿಬ್ಬಂದಿಗಳು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಮೃತ ಪಟ್ಟಿದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು …

Read More »

ಸಿಡಿ ಪ್ರಕರಣದಲ್ಲಿ ರೋಚಕ ತಿರುವು, ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ನಂಟು

ಬೆಂಗಳೂರು: ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ಅತಿ ಹೆಚ್ಚು ಬಾರಿ ಫೋನ್​ನಲ್ಲಿ ಮಾತನಾಡಿರುವುದು ಎಸ್​ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಡಿ. ಸುಧಾಕರ್ ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಸಿಡಿ ಬಿಡುಗಡೆಗೂ ಎರಡು ದಿನ ಮುನ್ನ ಸಿಡಿ ಪ್ರಕರಣದಲ್ಲಿ ಇದ್ದಾಳೆ ಎನ್ನುವ ಯುವತಿ ಬಳಿ ಡಿ.ಸುಧಾಕರ್ ಹಣದ …

Read More »

ಸಿಡಿ ಲೇಡಿ ಪರ ವಕಾಲತ್ತು ವಹಿಸಿದ ವಕೀಲರಿಗೆ ಬಂತು ಕುತ್ತು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಹುಟ್ಟಿಸಿದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಹಲವು ತಿರುವುಗಳು ಕಳೆದುಕೊಳ್ಳುತ್ತಿದ್ದಾರೆ, ಇನ್ನೊಂದೆಡೆ ಇವತ್ತು ಪರ ವಕಾಲತ್ತು ವಹಿಸಿದ ವಕೀಲರನ್ನು ಅಮಾನತುಗೊಳಿಸುವ ತಯಾರಿ ನಡೆಯುತ್ತದೆ. ಮಾಧ್ಯಮಗಳ ಮುಂದೆ ಸಿಡಿ ಲೇಡಿಯ ಪರವಾಗಿ ಕೆ.ಎನ್​. ಜಗದೀಶ್​ ಅವರು ಮಾಹಿತಿ ನೀಡುತ್ತಿದ್ದರೆ, ಅಸಲಿಗೆ ಅವರು ಯುವತಿಯ ಪರವಾದ ನಿಜವಾದ ವಕೀಲರಲ್ಲ. ಬದಲಿಗೆ ಜಗದೀಶ್​ ಅವರ ಪಕ್ಕ ಇರುವ ಆರ್​.ಮಂಜುನಾಥ್​ ಅವರು ಯುವತಿಯ ಪರವಾಗಿ ವಕಾಲತ್ತು ವಹಿಸಿದ್ದಾರೆ. ಕೋರ್ಟ್​ನಲ್ಲಿ ವಾದ …

Read More »

ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ಪರೀಕ್ಷೆ ಇಲ್ಲದೆ ಪಾಸ್

ಮುಂಬೈ: ಕೊರೋನಾ ಕಾರಣದಿಂದಾಗಿ ಇದೀಗ ದೇಶದ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ. ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ …

Read More »