Breaking News

ರಾಜ್ಯ

ವಿವಿಧೆಡೆ ಯುವತಿ ಜತೆಗೆ ಸ್ಥಳ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್‌.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ …

Read More »

1ರಿಂದ 9 ತರಗತಿ : ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ

ಬೆಂಗಳೂರು: ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಬಿಸಿಲಿನ ತಾಪಮಾನ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್‌ ಅಂತ್ಯದೊಳಗೆ 9ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ, ಮೌಲ್ಯಮಾಪನ ಪ್ರಕ್ರಿಯೆ ನಡೆಸಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ವಿಳಂಬವಾಗಿ ಆರಂಭವಾಗಿದ್ದರಿಂದ ಬೇಸಗೆ ರಜೆ ಕಡಿತ ಮಾಡುವ ಬಗ್ಗೆ ಈ …

Read More »

ಅಂಬೇಡ್ಕರ್‌ ಜಯಂತಿ ಸಾಂಕೇತಿಕ ಆಚರಣೆಗೆ ಡಿ.ಸಿ ಸೂಚನೆ; ಪ್ರತಿಭಟನೆ

ಕಲಬುರ್ಗಿ: ಕೋವಿಡ್‌ ಹಾವಳಿ ಹೆಚ್ಚಿರುವ ಕಾರಣ ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಬೇಕು ಎಂಬ ಜಿಲ್ಲಾಧಿಕಾರಿ ಮನವಿಗೆ ವಿರೋಧ ವ್ಯಕ್ತಪಡಿಸಿದ ಕೆಲ ಸಂಘಟನೆಗಳವರು, ‘ಕೋವಿಡ್‌ ಬಂದು ಜೀವ ಹೋದರೂ ಚಿಂತೆಯಿಲ್ಲ. ಜಯಂತಿ ಆಚರಿಸದೇ ಬಿಡುವುದಿಲ್ಲ’ ಎಂದು ಪಟ್ಟು ಹಿಡಿದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏ. 5ರಂದು ಡಾ.ಬಾಬು ಜಗಜೀವನರಾಂ ಜಯಂತಿ ಹಾಗೂ 14ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತ್ಯುತ್ಸವ ಸಂಬಂಧ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗುರುವಾರ ಇಲ್ಲಿ ವಿವಿಧ ಸಂಘಟನೆಗಳ ಸಭೆ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಮಸ್ಕಿ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರ ಇಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

ರಾಯಚೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನವಾಗಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಬರಲು ಕಾರಣವಾದ ಮುಂಬೈ ಫ್ರೆಂಡ್ಸ್ ಎಂದು ಖ್ಯಾತರಾದ 17 ಜನ ಶಾಸಕರ ನೇತೃತ್ವ ವಹಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿ ಪ್ರಕರಣದಲ್ಲಿ ಸಿಕ್ಕು ಒತ್ತಾಡುತ್ತಿದ್ದಾರೆ. ಈ ಗೊಂದಲ ಮಧ್ಯೆ ಬೆಳಗಾವಿ ಸಾಹುಕಾರ್ ಮಸ್ಕಿ ಬೈ ಎಲೆಕ್ಷನ್ ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಅವರು ಮಸ್ಕಿ ಉಪಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಸ್ವತಃ …

Read More »

ಈಶ್ವರಪ್ಪ ನೀಡಿರುವ ದೂರು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ : ಎಚ್‌ಡಿಕೆ

ಬೆಂಗಳೂರು,ಏ.1- ರಾಜ್ಯ ಸರ್ಕಾರದ ಹಿರಿಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ದ ನೀಡಿರುವ ದೂರು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರು ನೀಡಿರುವ ದೂರನ್ನು ರಾಜ್ಯದ ಆಡಳಿತದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಹಗುರವಾಗಿ ತೆಗೆದುಕೊಳ್ಳದೆ ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಚಿವರು ನೀಡಿದ ದೂರಿನಿಂದಾಗಿ ಅನುದಾನ ಎಲ್ಲ …

Read More »

ಲಿವಿಂಗ್ ಟುಗೆದರ್ ಇದ್ದಾಗ ಹುಟ್ಟಿರೋ ಸರ್ಕಾರವಿದು- ಎಸ್​.ಆರ್. ಪಾಟೀಲ್ ವಾಗ್ದಾಳಿ

ಬಾಗಲಕೋಟೆ: ರಾಜ್ಯದಲ್ಲಿ ಇರುವುದು ಲಿವಿಂಗ್ ಟುಗೆದರ್​ನಿಂದ ಹುಟ್ಟಿದ ಅನೈತಿಕ ಶಿಶುವಿನಿಂದ ಕೂಡಿದ ಸರ್ಕಾರ.. ಹೀಗಾಗಿ ಈ ಸರ್ಕಾರದಲ್ಲಿ ಮುಂದೆ ನಡೆಯುತ್ತಿರುವುದೆಲ್ಲವೂ ಅನೈತಿಕವೇ ಎಂದು ಬಾಗಲಕೋಟೆಯಲ್ಲಿ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ವ್ಯಂಗ್ಯವಾಡಿದ್ದಾರೆ. ಸಿಡಿ ವಿಚಾರದಲ್ಲಿ ಬಹಳಷ್ಟು ಕೆಸರೆರಚಾಟ ನಡೆದಿದೆ. ಈ ಸರ್ಕಾರದಲ್ಲಿ 6 ಜನ ಮಂತ್ರಿಗಳು ಸ್ಟೇ ತಂದ್ರು. ಒಬ್ಬರ ಮೇಲೆ ಈಗಾಗಲೇ ಕಂಪ್ಲೇಂಟ್, ಎಫ್ ಆರ್ ಐ ಫೈಲ್ ಆಗಿದೆ. ಬಿಎಸ್​ವೈ ಸರ್ಕಾರ ಸಿಡಿ ಸರ್ಕಾರ. ನೈತಿಕ ಅಧಃಪತನಕ್ಕೆ …

Read More »

ಸಿಡಿ ಪ್ರಕರಣಕ್ಕೆ ಇದೊಂದು ಹೆಸರಿನಿಂದಲೇ ಹೆಚ್ಚು ಮಾರ್ಕೆಟಿಂಗ್”!

ಬೆಂಗಳೂರು, ಏಪ್ರಿಲ್ 1: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ನನ್ನ ಹೆಸರು ಹೇಳಿದರಷ್ಟೇ ಮಾರ್ಕೆಟಿಂಗ್ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅವರಿಗೆ ನನ್ನ ಹೆಸರು ಬಳಸಿಕೊಳ್ಳದೇ ಮಾರುಕಟ್ಟೆಯೇ ಸಿಗುವುದಿಲ್ಲ ಎಂದರು. ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ …

Read More »

1200 ಕೋಟಿ ರೂ.ಗಳ ಹಗರಣ : ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ

ಬೆಂಗಳೂರು, ಏ.1- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅವರ ಸಂಪುಟದಲ್ಲೇ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು 1200 ಕೋಟಿ ರೂ.ಗಳ ಹಗರಣದ ಆರೋಪ ಮಾಡಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಸಂಪುಟದ ಸಚಿವರೊಬ್ಬರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ ಗಂಭೀರ ಆರೋಪ ಮಾಡಿದ್ದಾರೆ. 1200 ಕೋಟಿ ರೂ.ಗಳ ಹಗರಣ …

Read More »

ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ ಎಂದು ಅಸ‌ಮಾಧಾನ ವ್ಯಕ್ತಪಡಿಸಿದ್ದಾರೆ. ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು …

Read More »