ಬಹಳ ಕಷ್ಟದಿಂದ ಸರ್ಕಾರವನ್ನು ನಡೆಸಿಕೊಂಡು ಬರುತ್ತಿರುವ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಎದುರಾಗಿದೆ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಬಿಎಸ್‌ವೈ ಪ್ರಮುಖ ಪಾತ್ರ ವಹಿಸಿದ್ದಾರೆಂಬುದಕ್ಕೆ ಸಾಕ್ಷಿಯಾಗಿದ್ದ ಆಡಿಯೋ ಕ್ಲಿಪ್ ಒಂದರ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯ ಆದೇಶ ನೀಡಿದೆ. ಗುರುಮಠಕಲ್ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ಪಾಟೀಲ ದೂರು ನೀಡಿದ್ದರು. ಇದಕ್ಕೆ ಸಾಕ್ಷಿಯಾಗಿ ಖುದ್ದು ಯಡಿಯೂರಪ್ಪನವರೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡಾ ಬಿಡುಗಡೆಯಾಗಿತ್ತು. ಈ …
Read More »22 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಆಡಳಿತ ಯಂತ್ರದಲ್ಲಿ ಬಹುದೊಡ್ಡ ಬದಲಾವಣೆಯಾಗಿದ್ದು, ಒಟ್ಟು 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.ಅದೇ ರೀತಿ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಮಂಜುನಾಥ ಪ್ರಸಾದ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ನೂತನ ಆಯುಕ್ತ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆ, ವಿಪತ್ತು ನಿರ್ವಹಣಾ …
Read More »ಆ ಸಿ.ಡಿ ಹುಡುಗಿಗೆ ಮೊದಲು ಮೆಂಟಲ್ ಟೆಸ್ಟ್ ಮಾಡಿಸಿ: ಸಚಿವ ನಾರಾಯಣಗೌಡ
ಚಿಕ್ಕಬಳ್ಳಾಪುರ: ಸಂತ್ರಸ್ತೆ ಎನ್ನಲಾದ ಹುಡುಗಿ ಕನ್ಫ್ಯೂಸ್ ನಲ್ಲಿದ್ದಾಳೆ. ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾಳೆ. ಆಕೆಗೆ ಮೊದಲು ಮೆಂಟ್ಲ ಟೆಸ್ಟ್ ಮಾಡಿಸಬೇಕಿದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆಡ ಮಾತನಾಡಿದ ಅವರು ಯುವತಿ, ನ್ಯಾಯಾಧೀಶರ ಮುಂದೆ ಹಾಜರಾಗಿ ಏನು ಹೇಳಿದ್ದಾಳೆಂಬುದು ಯಾರಿಗೂ ಗೊತ್ತಿಲ್ಲ. ಹೆಣ್ಣುಮಗಳ ಹೇಳಿಕೆ ಏನೆಂಬುದು ಈಗಲೂ ಬಹಿರಂಗವಾಗಿಲ್ಲ. ಆ ಹೆಣ್ಣು ಮಗಳು ಕನ್ಫ್ಯೂಸ್ ನಲ್ಲಿದ್ದಾಳೆ. ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡ್ತಿದ್ದಾಳೆ. ಹಾಗಾಗಿ ಆಕೆಗೆ ಕೂಲ್ ಆಗಿ …
Read More »ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್,ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ
ಬೆಳಗಾವಿ: ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಇಬ್ಬರೂ ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಎಲ್ಲ ಸಮಾಜಗಳ ಮತದಾರರನ್ನು …
Read More »ನಿನ್ನೆ ಸಿಡಿ ಸಂತ್ರಸ್ತೆ ಬಂದ ಕಾರ್ ಯಾರದ್ದು ಗೊತ್ತಾ..? ಇದಕ್ಕೂ ನಲಪಾಡ್ಗೂ ಏನ್ ಸಂಬಂಧ..?
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಧೀಶರ ಎದುರು ಮತ್ತು ಎಸ್‌ಐಟಿ ಎದುರು ಹೇಳಿಕೆ ನೀಡಿದ್ದ ಯುವತಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಈ ಮಧ್ಯೆ ಸಂತ್ರಸ್ತ ಯುವತಿಗೆ ಕಾಂಗ್ರೆಸ್ ನಾಯಕರು ರಕ್ಷಣೆ ಕೊಡ್ತಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ. ನಿನ್ನೆ ಸಂತ್ರಸ್ತೆ ಯುವತಿ ಹೇಳಿಕೆ ನೀಡಲು ಟೊಯೋಟಾ ಫಾರ್ಚೂನರ್ ಸಿಗ್ಮಾ-4 ಕಾರ್ನಲ್ಲಿ ಆಗಮಿಸಿದ್ದರು.. ಆ ಕಾರ್ ನಂ KA 04 MU 9232 …
Read More »ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರುಮುಖ
ಬೆಂಗಳೂರು, ಮಾರ್ಚ್ 30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕರ್ನಾಟಕದಲ್ಲಿ ದಿನೇದಿನೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 992779ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 21 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12541ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರದ …
Read More »ಸಚಿವ ಸುಧಾಕರ್ ಆದೇಶವನ್ನು ಗಾಳಿಗೆ ತೂರುತ್ತಿರುವ ಜಿಲ್ಲಾ ಶತ್ರ್ತ ಚಿಕಿತ್ಸಕ
ಚಿತ್ರದುರ್ಗ,ಮಾ.30(ಹಿ.ಸ) : ಕೋರೋನಾ ವಾರಿಯರ್ಸ್ ಆಗಿ ಕಳೆದ ಆರು ತಿಂಗಳಿಂದ ದುಡಿದ ನೂರಾರು ಸಿಬ್ಬಂದಿಗಳನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕರು ಏಕಾಏಕಿ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದು, ಇದೀಗ ಪ್ರಾಣದ ಹಂಗೂ ತೊರೆದು ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಇತ್ತ ವೇತನವೂ ಇಲ್ಲದೆ ಕೆಲಸವೂ ಇಲ್ಲದೆ ಕಂಗಾಲಾಗಿದ್ದಾರೆ. ಕೋಟೆ ನಾಡು ಚಿತ್ರದುರ್ಗದಲ್ಲಿ ಕೋರೋನಾ ಹಿನ್ನೆಲೆಯಲ್ಲಿ ಲ್ಯಾಬ್ ಟೆಕ್ನಿಷಿಯನ್, ಶ್ರುಶ್ರೂಕಿಯರು, ಡಿ ಗ್ರೂಪ್ ನೌಕರರನ್ನು ಗುತ್ತಿಗೆ/ಹೊರ ಗುತ್ತಿಗೆ ಮೂಲಕ ಸರ್ಕಾರದ ಅದೇಶದಂತೆ ಆಯಾ ಕೆಲಸಕ್ಕೆ …
Read More »ಸಿ.ಡಿ. ಪ್ರಕರಣ: ಇಂದು ಯುವತಿ ವಿಚಾರಣೆ: ವೈದ್ಯಕೀಯ ಪರೀಕ್ಷೆ ನಡೆಸಿ, ಮಹಜರು
ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಧೀಶರ ಎದುರು ಹೇಳಿಕೆ ನೀಡಿರುವ ಯುವತಿ, ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರಾದ ನಂತರ ಯುವತಿಯ ಧ್ವನಿ ಮಾದರಿ ಸಂಗ್ರಹಿಸಲಾಗಿತ್ತು. ಜೊತೆಗೆ, ಬುಧವಾರ ಬೆಳಿಗ್ಗೆ ವಿಚಾರಣೆಗೆ ಬರುವಂತೆ ಎಸ್‌ಐಟಿ, ನೋಟಿಸ್ ಸಹ ನೀಡಿತ್ತು. ಅದರನ್ವಯ, ಯುವತಿ ವಿಚಾರಣೆಗೆ ಬರಲಿದ್ದಾರೆ. ತಮ್ಮ ಹೇಳಿಕೆಯನ್ನು ತನಿಖಾಧಿಕಾರಿ ಎದುರು ದಾಖಲಿಸಲಿದ್ದಾರೆ. ಇದಾದ ನಂತರ, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ …
Read More »ಮುಖ್ಯಮಂತ್ರಿ ಅನಿಲಭಾಗ್ಯ, ಉಜ್ವಲ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಧಾರವಾಡ: ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳು ಅಡುಗೆ ಅನಿಲವನ್ನು ಬಳಸುವಂತೆ ಹಾಗೂ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕಗಳನ್ನು ಜಿಲ್ಲೆಯಲ್ಲಿ ನೀಡಲಾಗಿದೆ. ಇತ್ತೀಚಿನ ಮಾಹಿತಿಗಳನ್ವಯ ಮುಖ್ಯಮಂತ್ರಿ ಅನಿಲಭಾಗ್ಯ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವ ಫಲಾನುಭವಿಗಳು ಅಡುಗೆ ಅನಿಲ ಬಳಕೆಯನ್ನು ಸಮರ್ಪಕವಾಗಿ ಮುಂದುವರಿಸದೇ ಇರುವುದು ಕಂಡು …
Read More »BPL ಕಾರ್ಡ್ ಪಡೆಯಲು ಯಾರು ಅನರ್ಹರು.? ಇಲ್ಲಿದೆ ಮಾಹಿತಿ
ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, ಇದೀಗ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಬಿಪಿಎಲ್ ಪಡಿತರ ಕಾರ್ಡ್ ಪಡೆದ ಅನರ್ಹರು ಅವುಗಳನ್ನು ಕೂಡಲೇ ಹಿಂದಿರುಗಿಸಬೇಕು ಎಂದು ಹಲವು ಗಡುವುಗಳನ್ನು ನೀಡಿದ್ದು, ಆದರೆ ಕೆಲವರು ಈಗಲೂ ಕೂಡ ಹಿಂದಿರುಗಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. …
Read More »
Laxmi News 24×7