Breaking News

ರಾಜ್ಯ

ಡಿಕೆಶಿ ಕಾರಿಗೆ ಚಪ್ಪಲಿ ಎಸೆದ ರಮೇಶ್‌ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಪರವಾಗಿ ಪ್ರಚಾರಕ್ಕೆ ಬೆಳಗಾವಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಬೆಂಬಲಿಗರ ಕಾರಿಗೆ ಚಪ್ಪಲಿಯನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ವಿಮಾನ ನಿಲ್ದಾಣದ ಬಳಿ ಕಾರಿನಲ್ಲಿ ಡಿಕೆಶಿ ತೆರಳುತ್ತಿದ್ದಾಗ ರಸ್ತೆಯುದ್ದಕ್ಕೂ ನಿಂತಿದ್ದ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ʻಗೋ ಬ್ಯಾಕ್‌ ಡಿಕೆಶಿʼ ಎಂದು ಕೂಗಿ, ಕಾರಿಗೆ …

Read More »

ಡಿಕೆಶಿಗೆ ಪ್ರತಿಭಟನೆಯ ಬಿಸಿ; ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ; ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ರಮೇಶ್ ಜಾರಕಿಹೊಳಿ ಬೆಂಬಲಿಗರ ತೀವ್ರ ಪ್ರತಿಭಟನೆ, ವಿರೋಧದ ನಡುವೆಯೂ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ ಪೊಲೀಸರು ತಡೆಯೊಡ್ಡಿದ್ದಾರೆ. …

Read More »

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …

Read More »

ಉಪ ಚುನಾವಣೆ: ಬೆಳಗಾವಿಗೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರನಗರಕ್ಕೆ ಭೇಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅವರು ಪ್ರವಾಸ ಕೈಗೊಂಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಸಂಜೆ 7ಕ್ಕೆ ಕಾಂಗ್ರೆಸ್‌ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ವಿರೋಧಪಕ್ಷದ …

Read More »

ಸಿ.ಡಿ ಪ್ರಕರಣ: ಎಸ್‌ಐಟಿ ಸತ್ಯಾಸತ್ಯತೆ ಕಂಡು ಹಿಡಿಯುತ್ತದೆ -ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ಸಿ.ಡಿ ಪ್ರಕರಣದಲ್ಲಿ ಆಡಿಯೊ, ವಿಡಿಯೊ, ಸಿಡಿಗಳ ಪರಿಶೀಲನೆ ಎಲ್ಲವನ್ನೂ ವೈಜ್ಞಾನಿಕವಾಗಿ ಎಸ್‌ಐಟಿ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಅದಕ್ಕೆ ಒಂದು ಪದ್ದತಿ, ವ್ಯವಸ್ಥೆ ಇದೆ. ಎಸ್‌ಐಟಿ ತಂಡ ಖಂಡಿತವಾಗಿಯೂ ಇದರ ಸತ್ಯ ಸತ್ಯತೆ ಕಂಡು ಹಿಡಿಯುತ್ತದೆ. ಇದರಲ್ಲಿ ಯಾವುದೇ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಾನು ಒಬ್ಬ ಗೃಹ ಸಚಿವ. ಬೇರೆಯವರ ಹೇಳಿಕೆಗೆಲ್ಲ ಪ್ರತಿಕ್ರಿಯೆ ಕೇಳಬೇಡಿ. ಎಸ್‌ಐಟಿ …

Read More »

ಬೆಳಗಾವಿಗೆ ಡಿ.ಕೆ ಶಿವಕುಮಾರ್‌ ಆಗಮನ: ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್‌..!

ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್‌ ಅವ್ರು ಇಂದು ಬೆಳಗಾವಿ ಆಗಮಿಸಲಿದ್ದು, ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಹೌದು, ಬೆಳಗಾವಿಗೆ ಡಿ.ಕೆ ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದು, 200 ಪೊಲೀಸರ ನಿಯೋಜನೆ, 4 ಸಿಆರ್‌ಪಿಎಫ್‌ ತುಕಡಿ ನಿಯೋಜನೆ ಮಾಡಲಾಗಿದೆ. ಡಿಸಿಪಿ ವಿಕ್ರಂ ಅಮಾಟೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

Read More »

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ.:ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ …

Read More »

ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ

ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ‌ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ‌ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …

Read More »

2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟ

ಮುಂಬೈ: 2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಅಂಗ್ರೆಜಿ ಮೀಡಿಯಂ ಸಿನಿಮಾ ನಟನೆಗಾಗಿ ದಿ.ಇರ್ಫಾನ್ ಖಾನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅಜಯ್ ದೇವ್‍ಗನ್ ಮತ್ತು ಕಾಜೋಲ್ ನಟನೆಯ ‘ತಾನ್ಹಾಜಿ- ದಿ ಅನ್‍ಸಂಗ್ ವಾರಿಯರ್’ ಚಿತ್ರ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರಶಸ್ತಿ ವಿಜೇತರ ಪಟ್ಟಿ ಈ ಕೆಳಗಿನಂತಿದೆ. ಅತ್ಯುತ್ತಮ ಚಿತ್ರ: ಥಪ್ಪಡ್ ಅತ್ಯುತ್ತಮ ನಟ: ಇರ್ಫಾನ್ ಖಾನ್ (ಸಿನಿಮಾ-ಅಂಗ್ರೇಜಿ ಮೀಡಿಯಂ) ಅತ್ಯುತ್ತಮ ನಟಿ: ತಾಪ್ಸಿ ಪನ್ನು …

Read More »

ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ …

Read More »