ಸಿನಿಮಾ ಡೆಸ್ಕ್ : ಕಿರುತೆರೆ ಪ್ರೇಕ್ಷಕರ ನೆಚ್ಚಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಆರಂಭವಾಗಿ ಮೂರನೇ ವಾರ ಕಳೆಯುತ್ತಿದೆ. ಮೂರನೇ ವಾರದ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ಕಿರುತೆರೆ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ. ಮೊದಲ ವಾರ ಬಿಗ್ ಬಾಸ್ ಮನೆಯಿಂದ ಧನಶ್ರೀ ಔಟ್ ಆಗಿದ್ದರು. ಕಳೆದ ವಾರ ಅಂದರೆ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹೊರಬಿದ್ದಿದ್ದರು. ಇದೀಗ ಮೂರನೇ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ನಟಿ ಗೀತಾ …
Read More »ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ
ಸಿಂಧನೂರು (ರಾಯಚೂರು): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. …
Read More »ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು
ಮಳವಳ್ಳಿ: ‘ಸರ್ಕಾರದ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಮ್ಮುಖದಲ್ಲೇ ಶನಿವಾರ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಮಾತಿನ ಚಕಮಕಿ ನಡೆದಿ ಕೈಕೈ ಮಿಲಾಯಿಸಲು ಮುಂದಾದರು. ತಾಲ್ಲೂಕಿನ ಬಿಜಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡುತ್ತಾ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರು. ಬಹು ನಿರೀಕ್ಷಿತ ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಕುಂಠಿತವಾಗಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ …
Read More »ಬೆಳಗಾವಿ: 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಡೆ ಬಿಜೆಪಿ ಪ್ರಾಬಲ್ಯ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಎರಡು ಕಡೆ ಮಾತ್ರ ಕಾಂಗ್ರೆಸ್ ಪ್ರತಿನಿಧಿಗಳಿದ್ದಾರೆ. ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿಯವರ ಬಲವೇ ಹೆಚ್ಚಿದೆ. ಅಲ್ಲದೇ, ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕಮಲ ಪಕ್ಷದ ಬೆಂಬಲಿತರು ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಇವೆಲ್ಲ ಅಂಶಗಳೂ ಉಪ ಚುನಾವಣೆಯಲ್ಲಿ ಪರಿಣಾಮ ಬೀರಲಿವೆ. ಬೆಳಗಾವಿ ಉತ್ತರ (ಅನಿಲ ಬೆನಕೆ), ಬೆಳಗಾವಿ ದಕ್ಷಿಣ (ಅಭಯ ಪಾಟೀಲ), …
Read More »ಎಸ್‌ಐಟಿ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ.. ಮಾಜಿ ಶಾಸಕ ನಾಗರಾಜ್ ಮೂಲಕ ಹಣಕ್ಕೆ ಡಿಮ್ಯಾಂಡ್?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಡಿ ಕೇಸ್ ಸಂಬಂಧ ವಿಚಾರಣೆಗೆ ಕರೆದಿದ್ದ SIT ಗೆ ಮಾಜಿ ಸಚಿವ ಜಾರಕಿಹೊಳಿ ಅನೇಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ SITಗೆ ರಮೇಶ್ ಏನು ಉತ್ತರ ಕೊಟ್ಟಿದ್ದಾರೆ. ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ರೋಚನ ಸುದ್ದಿ ಇಲ್ಲಿದೆ. ವಿಚಾರಣೆಗೆ ಕರೆದಿದ್ದ SIT ಸಿಡಿ ಮಾಡಿದ್ಯಾರು ಅನ್ನೋ ಕುರಿತು ಜಾರಕಿಹೊಳಿಯನ್ನ ಪ್ರಶ್ನಿಸಿದ್ದಾರೆ. ಸದಾಶಿವನಗರ ಠಾಣೆಗೆ ನೀಡಿದ ದೂರಿನಲ್ಲಿ ಹಣ …
Read More »ಶೀಘ್ರವೇ ಸಿಎಂ ಬದಲಾವಣೆ ಖಚಿತ : ಶಾಸಕ ಯತ್ನಾಳ್ ಹೊಸ ಬಾಂಬ್
ವಿಜಯಪುರ : ಪಂಚರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಿಎಂ ಇಟ್ಟುಕೊಂಡು ಮುಂದಿನ ಚುನಾವಣೆಗೆ ಹೋದ್ರೆ ಏನಂತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೂ ಗೊತ್ತಿದೆ. ಬಿಜೆಪಿ ಉಳಿಯಬೇಕಾದರೆ ಈ ಸಿಎಂ ಬದಲಾವಣೆ ಅವಶ್ಯಕ ಎಂದು ಹೇಳುವ ಮೂಲಕ ಮತ್ತೊಮ್ಮೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಿ.ಎಸ್. …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್
ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ. ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …
Read More »ಮಸ್ಕಿಯಲ್ಲಿ ರಾಜ್ಯ ಬಿಜೆಪಿಯ ಅತಿರಥರ ಭರ್ಜರಿ ಪ್ರಚಾರ; ಕೊರೋನಾ ನಿಯಮಗಳಿಗೂ ಡೋಂಟ್ ಕೇರ್
ರಾಯಚೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಘೋಷಣೆ ಆಗ್ತಿದ್ದಂತೆ ಅಲರ್ಟ್ ಆಗಿರುವ ಬಿಜೆಪಿ ನಿನ್ನೆ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಬೃಹತ್ ಚುನಾವಣಾ ಸಮಾವೇಶ ನಡೆಸಿತು. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ 30ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ತಾವೇ ರೂಪಿಸಿದ ಕೊರೋನಾ ನಿಯಮಾವಳಿಗಳ ಉಲ್ಲಂಘನೆ ಮಾಡಿದ್ದರೆ, ಇನ್ನೊಂದು ಕಡೆ ಜಾತಿವಾರು ಮತ ಸಮೀಕರಣ ಮಾಡುವ ಯತ್ನ ನಡೆಯಿತು. ರಾಜ್ಯದಲ್ಲಿ ಎರಡು ವಿಧಾನಸಭೆ …
Read More »ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ : ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಕಣಕ್ಕೆ?
ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ಬಿಜೆಪಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. …
Read More »ರಮೇಶ್ ಜಾರಕಿಹೊಳಿ ಸಿಡಿ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಶಂಕಿತ ‘ಲಕ್ಷ್ಮೀಪತಿ’ ಅರ್ಜಿ
ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದಂತ ರಾಸಲೀಲೆ ಸಿಡಿ ಪ್ರಕರಣದಲ್ಲಿ, ದಿನೇಶ್ ಕಲ್ಲಹಳ್ಳಿಗೆ ಸಿಡಿ ತಲುಪಿಸಿದ್ದಂತ ಆರೋಪಿಯಾಗಿ ಲಕ್ಷ್ಮೀಪತಿ ಎಂದು ತಿಳಿದು ಬಂದಿತ್ತು. ಇಂತಹ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿರುವುದಾಗೇ, ಇದೀಗ ಆರೋಪಿ ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವು ಪಡೆಯುತ್ತಿದೆ. ಒಂದೆಡೆ ಎಸ್‌ಐಟಿ ಆರೋಪಿಗಳ ಪತ್ತೆಗೆ ಗಾಳ ಹಾಕುತ್ತಿದ್ದರೇ, …
Read More »
Laxmi News 24×7