ಮೈಸೂರು: ನಗರದಲ್ಲಿ ಇದೇ ಮಾ.20ರಂದು ನಡೆಯಬೇಕಿದ್ದ ಯುವಸಂಭ್ರಮ ರದ್ದಾಗಿದೆ. ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ನಟ ಪುನೀತ್ ರಾಜ್‌ಕುಮಾರ್ ಮಾತನಾಡಿ, ಮೈಸೂರಿನಲ್ಲಿ ಯುವಸಂಭ್ರಮ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ರಾಜ್ಯದ ಅನೇಕ ಕಡೆಗಳಿಂದ ʻನಮ್ಮೂರಿನಲ್ಲಿ ಯಾಕೆ ಕಾರ್ಯಕ್ರಮ ಮಾಡುವುದಿಲ್ಲʼ ಎಂದು ಅಭಿಮಾನಿಗಳಿಂದ ಮೆಸೇಜ್ ಬರಲು ಶುರುವಾದರು. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ತಂಡ ಒಂದು ಪಟ್ಟಿ ರೂಪಿಸುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಮಾ.21ರಿಂದ 23ರವರೆಗೆ ನಿಗದಿತ ಊರುಗಳಿಗೆ ಹೋಗಿ ಕಾರ್ಯಕ್ರಮ …
Read More »ವೈಷ್ಣವಿಯ ಬಟ್ಟೆ ಎಳೆದ ಶಮಂತ್ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ. ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್ ವರ್ಸಸ್ ಮನುಷ್ಯರು ಎಂಬ ಟಾಸ್ಕ್ ನೀಡಲಾಗಿತ್ತು. ಅದರಲ್ಲಿ ಎಲ್ಲರೂ …
Read More »ಟ್ವೀಟ್ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ವಿಚಾರದಲ್ಲಿ ‘ಮಹಾನಾಯಕ’ರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಮಹಾನಾಯಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು, ಆ ಸಂಗತಿಯೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ಕದನಕ್ಕೆ ನಾಂದಿ ಹಾಡಿದೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅದೇಕೆ ತಮ್ಮನ್ನು ತಾವು ‘ಮಹಾನಾಯಕ’ ಎಂದುಕೊಂಡು ಆರೋಪವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ ಅಂತ ತಿಳಿಯುತ್ತಿಲ್ಲವೆಂದು ಬಿಜೆಪಿ ನಾಯಕರೂ ಸೇರಿದಂತೆ ಪಕ್ಷ …
Read More »ಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್
ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ …
Read More »‘ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ’
ಬೆಂಗಳೂರು: ‘ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಯಬೇಕು ಮುಂದಿನ ವರ್ಷದಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದರು. ವಿಧಾನಪರಿಷತ್‍ನಲ್ಲಿ ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ ಪೈಕಿ 45 ಕಾಲೇಜುಗಳು ಖಾಸಗಿಯವರ ಒಡೆತನದಲ್ಲಿವೆ. ಈ ಕಾಲೇಜುಗಳು ಸುಪ್ರೀಂ ಕೋರ್ಟ್ ಆದೇಶವನ್ನು …
Read More »ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ
ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!
ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …
Read More »ಮತ್ತೆ ಲಾಕ್‌ಡೌನ್ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ
ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್‌ಡೌನ್‌ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್‌ಡೌನ್‌ನತ್ತ ಮುಖ ಮಾಡದೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದನ್ನೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು …
Read More »ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಈ ಹಂತದಲ್ಲಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ‘ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯವಸ್ಥೆಯ ಅಡಿ ತರುವುದು ಯಾವಾಗಿನಿಂದ ಎಂಬ ಬಗ್ಗೆ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ …
Read More »
Laxmi News 24×7