Breaking News

ರಾಜ್ಯ

ನಾಳೆ ಬಿ.ವೈ. ವಿಜಯೇಂದ್ರ ಅವರಿಂದ ಶರಣ ಸೇನೆ ಉದ್ಘಾಟನೆ

ಚಿತ್ರದುರ್ಗ, : ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಮಾ.14 ರ ಬೆಳಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆ ಹಾಗೂ ಯುವಶಕ್ತಿಯ ಅನಾವರಣ ಸಮಾರಂಭ ಆಯೋಜಿಸಲಾಗಿದೆ. ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆವಹಿಸಲಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆ ಉದ್ಘಾಟಿಸಲಿದ್ದಾರೆ. ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಶರಣ ಸೇನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಡಾ.ಶಿವಮೂರ್ತಿ ಮುರುಘಾ …

Read More »

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಮೂವರ ಬಂಧನ

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶಕ್ಕೆ ಪಡೆದಿರುವ ಪೊಲೀಸರು, ದೊಂಡಿಬಾ ಜರಕ, ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರ ಎಂಬ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8 ಕೆ.ಜಿ. ಗಾಂಜಾ, ಒಂದು ಬೈಕ್ ವಶಕ್ಕೆ ಪಡೆದ್ದಾರೆ. ಸಿಪಿಐ ಸಂಗಮೇಶ ಪಾಲಬಾವಿ ನೇತೃತ್ವದಲ್ಲಿ …

Read More »

ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್‌ಐಟಿ; ಸಿಡಿಗಳು ಪತ್ತೆ!

ಬೀದರ್: ಮಾಜಿ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಭಾಲ್ಕಿಯ ವಾಲಿ ಬಡಾವಣೆಯ ಅವಿನಾಶ್ ಎಂಬಾತನನ್ನು ಎಸ್‌ಐಟಿ ಅಧಿಕಾರಿಗಳ ತಂಡ ಶುಕ್ರವಾರ ಮಧ್ಯರಾತ್ರಿ ವಶಕ್ಕೆ ಪಡೆದಿದ್ದು, ಯುವಕ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಗೆಳೆಯನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಯುವಕನ ಮನೆ ಮೇಲೆ ದಾಳಿ ಮಾಡಿರುವ ಎಸ್‌ಐಟಿ …

Read More »

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು. ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.

Read More »

ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ -ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ ಮಾರ್ಚ್ 13: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಜಾರಿನ ಇಸ್ಮಾಯಿಲ್‌(55) ಹಾಗೂ ಹೂಡೆಯ ಸೊಹೇಲ್‌(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.

ಬೆಳಗಾವಿ-ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …

Read More »

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ಐಎಂಎ ವಂಚನೆ ಪ್ರಕರಣ: ಬಿಡಿಎ ಕುಮಾರ್‌ ವಿರುದ್ಧ ಆರೋಪಪಟ್ಟಿ

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ₹ 5 ಕೋಟಿ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹಿಂದಿನ ಕಾರ್ಯನಿರ್ವಾಹಕ ಎಂಜಿನಿಯರ್‌ ಪಿ.ಡಿ. ಕುಮಾರ್‌ ಅಲಿಯಾಸ್‌ ಬಿಡಿಎ ಕುಮಾರ್ ಸೇರಿದಂತೆ ಆರು ಜನರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಐಎಂಎ ಮುಖ್ಯ ಕಾನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಮನ್ಸೂರ್ ಖಾನ್‌, …

Read More »

ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು …

Read More »

ಆ. 1ರಂದು ನೀಟ್‌ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.

Read More »