Breaking News

ರಾಜ್ಯ

ರಾಮ ಮಂದಿರ ದೇಣಿಗೆ ಅಭಿಯಾನ ಸಂಪನ್ನ.ಇದುವರೆಗೆ ಸಂಗ್ರಹಗೊಂಡಿದ್ದು ಎಷ್ಟು ಕೋಟಿ ?

ಉತ್ತರಪ್ರದೇಶ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಳೆದ 44 ದಿನಗಳಿಂದ ನಡೆಯುತ್ತಿದ್ದ ದೇಣಿಗೆ ಸಂಗ್ರಹ ಅಭಿಯಾನ ಇಂದು (ಫೆ.27) ಮುಕ್ತಾಯಗೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ಗಿರಿ, ದೇಶ್ಯಾದ್ಯಂತ ನಡೆದ ಅಭಿಯಾನ ಇಂದಿಗೆ ಸಂಪನ್ನಗೊಂಡಿದೆ. ಇದುವರೆಗೆ ಮಂದಿರ ನಿರ್ಮಾಣಕ್ಕೆ ಸಂಗ್ರಹಗೊಂಡ 1900 ಕೋಟಿ ರೂ.ಗಳನ್ನು ಶ್ರೀ ರಾಮಲಲ್ಲಾ ಬ್ಯಾಂಕ್ ಖಾತೆಯಲ್ಲಿ ಜಮಾಮಾಡಲಾಗಿದೆ. ಇನ್ನೂ ಕೆಲವೊಂದು ಚೆಕ್ ಗಳ …

Read More »

ಅಂಬಾನಿ ಮನೆ ಬಳಿ ಮತ್ತೊಂದು ಕಾರನ್ನು ನೋಡಿದ ಪೊಲೀಸರು!

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಹತ್ತಿರ ಸ್ಫೋಟಕ ತುಂಬಿದ ಕಾರು ಪತ್ತೆಯಾದ ಸ್ಥಳದಲ್ಲಿ ಮತ್ತೊಂದು ಕಾರನ್ನು ಪೊಲೀಸರು ನೋಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ. ಇದರ ವಿಚಾರಣೆ ನಡೆಯುತ್ತಿದ್ದು, ಇಲ್ಲಿಯವರೆಗೂ ಮುಂಬೈ ಅಪರಾಧ ವಿಭಾಗದ ಪೊಲೀಸರು 25 ಜನರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಂಬಾನಿ ಮನೆ ಬಳಿ ನಿಂತಿದ್ದ ಸ್ಪೋಟಕ ತುಂಬಿದ ಕಾರಿನಿಂದ ಇಳಿದ ಚಾಲಕ, ಇನ್ನೋವಾ ಕಾರಿನಲ್ಲಿ ತೆರಳುವುದು ಸಿಸಿಟಿವಿಯಲ್ಲಿ ಕಂಡುಬಂದಿದ್ದು, ಆ ಚಾಲಕನಿಗಾಗಿ ಪೊಲೀಸರ …

Read More »

ಮೊಬೈಲ್ ಬೇಕು ಅಂದ ಪ್ರೇಯಸಿ,ಸ್ನೇಹಿತನನ್ನೇ ಕೊಂದ ಪ್ರಿಯಕರ..

ತನ್ನ ಪ್ರೇಯಸಿ ಒಂದೊಳ್ಳೇ ಮೊಬೈಲ್ ಬೇಕು ಅಂತ ಕೇಳಿದ್ದಕ್ಕೆ ಪ್ರಿಯಕರ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.. ಜೀತೇಂದ್ರ ಕೊಲೆಯಾದ ವ್ಯಕ್ತಿ,ಮೋನು ಎಂಬ ವ್ಯಕ್ತಿ ಕಳೆದ ಕೆಲವುದಿನಗಳಿಂದ ಕೆಲಸ ಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ,ಇದೇ ವೇಳೆ ತನ್ನ ಪ್ರೇಯಸಿ ಸ್ಮಾರ್ಟ್ ಫೋನ್ ಬೇಕು ಎಂದು ಕೇಳಿದ್ದಳು,ಏನೂ ಮಾಡೋದು ಎಂದು ಇದ್ದಾಗ ಮೋನುಗೆ ತನ್ನ ಸ್ನೇಹಿತ ಜೀತೇಂದ್ರ ಬಳಿ ಸ್ಮಾರ್ಟ್ ಇರೋದು ಗೊತ್ತಾಗಿದ್ದು,ಇನ್ನೊಬ್ಬ ಸ್ನೇಹಿತನ ಸಹಾಯದಿಂದ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »

ಲೈಂಗಿಕ ಕಿರುಕುಳ ಪ್ರಕರಣವನ್ನು ಮುಚ್ಚಿಡಲು ಅವಕಾಶ ನೀಡಲಾಗದು: ಸುಪ್ರೀಂಕೋರ್ಟ್

ನವದೆಹಲಿ: ‘ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಯಾವುದೇ ರೀತಿಯಲ್ಲೂ ಮುಚ್ಚಿಡಲು ಸಾಧ್ಯವಾಗದು’ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಜಾರಿಗೊಳಿಸಿರುವ ಆಂತರಿಕ ಇಲಾಖಾ ತನಿಖೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ನೀಡಿದೆ. ಮಧ್ಯಪ್ರದೇಶದ ನಿವೃತ್ತ ನ್ಯಾಯಾಧೀಶ ಶಂಭೂ ಸಿಂಗ್ ರಘುವಂಶಿ ಅವರು ಕಿರಿಯ ಮಹಿಳಾ ನ್ಯಾಯಾಂಗ ಅಧಿಕಾರಿಯೊಬ್ಬರಿಗೆ ವ್ಯಾಟ್ಸ್‌ಆಯಪ್‌ನಲ್ಲಿ ಅನುಚಿತವಾದ ಸಂದೇಶಗಳನ್ನು ಕಳುಹಿಸಿದ್ದರು. ಈ ಸಂಬಂಧ ಅಧಿಕಾರಿಯು ದೂರು ಸಲ್ಲಿಸಿದ್ದು, …

Read More »

ಮಾರ್ಚ್​ 8 ರಂದು ಬಿಡುಗಡೆಯಾಗಲಿದೆ 108MP ಕ್ಯಾಮೆರಾದ Realme 8 Series ಸ್ಮಾರ್ಟ್​ಫೋನ್​?

ರಿಯಲ್​ಮಿ ಸಂಸ್ಥೆ Realme 8 ಸಿರೀಸ್​​ ಹೆಸರಿನ ಸ್ಮಾರ್ಟ್​ಫೋನನ್ನು ಸಿದ್ಧಪಡಿಸುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೂತನ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ ಬರುವ ಲಕ್ಷಣ ಕಾಣುತ್ತಿದೆ. ಅದಕ್ಕೆ ಅನುಗುಣವಾಗಿ ಕಂಪೆನಿಯ ಸಿಇಒ ತಮ್ಮ ಟ್ವಿಟ್ಟರ್​​ ಖಾತೆಯಲ್ಲಿ ಮುಂಬರುವ ಸ್ಮಾರ್ಟ್​ಫೋನ್​ 108 ಮೆಗಾಫಿಕ್ಸೆಲ್​ ಕ್ಯಾಮೆರಾ ಮೂಲಕ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಸ್ಮಾರ್ಟ್​ಫೋನ್​ ಪ್ರಿಯರಲ್ಲಿ ನೂತನ ಫೋನಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕಳೆದ ವರ್ಷ ಸೆಪ್ಟೆಂಬರ್​ ತಿಂಗಳಿನಲ್ಲಿ ರಿಯಲ್​ಮಿ 7 ಸಿರೀಸ್​ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ …

Read More »

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು …

Read More »

ಪೌರಕಾರ್ಮಿಕ ಆತ್ಮಹತ್ಯೆ: ₹10 ಲಕ್ಷ ಪರಿಹಾರ ನೀಡಲು ಆಗ್ರಹ

ಬೆಂಗಳೂರು: ಮಲ ಸ್ವಚ್ಛಗೊಳಿಸಲು ಪುರಸಭೆ ಅಧಿಕಾರಿಗಳು ನೀಡಿದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮದ್ದೂರಿನ ಪೌರಕಾರ್ಮಿಕ ನಾರಾಯಣ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ವಿಶ್ವೇಶ್ವರಯ್ಯ ಟವರ್‌ ಬಳಿಯ ಪೌರಾಡಳಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ಮದ್ದೂರಿನ ಪೌರಕಾರ್ಮಿಕ ನಾರಾಯಣ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪುರಸಭೆ ಅಧಿಕಾರಿಗಳು ಬಲವಂತವಾಗಿ ಮಲಸ್ವಚ್ಛಗೊಳಿಸಲು ಒತ್ತಡ …

Read More »

ಆಕ್ಟಿವಾ ಸ್ಕೂಟರ್ ನಲ್ಲಿ ಬಂದು ಮರಳು ಲಾರಿ ಹಿಡಿದ ಕಮೀಷನರ್ – ಡಿಸಿಪಿ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.

Read More »