Breaking News

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಶಾಸಕ ಜಮೀರ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿ

ಆಪಾರ ಅಭಿಮಾನಿ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕೊಟ್ಟಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದರು. ಬಳಿಕ ಈ ವಿವಾದ ಈಗ ಅಂತ್ಯಗೊಂಡಿದೆ. ಪ್ರಸ್ತುತ ದರ್ಶನ್‌ ತಮ್ಮ ಮುಂಬರುವ ಚಿತ್ರ ‘ರಾಬರ್ಟ್’ ಪ್ರಮೋಟ್ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆ ಶಾಸಕ ಜಮೀರ್‌ ಅಹ್ಮದ್‌ ಮನೆಗೆ ನಟ ದರ್ಶನ್‌ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಜಮೀರ್‌ ಅಹ್ಮದ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ಭೇಟಿ ನೀಡಿದ್ದರು …

Read More »

ಎಂ.ಎಸ್.ಧೋನಿ ಟೆಸ್ಟ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ನವದೆಹಲಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿ ತವರು ನೆಲದಲ್ಲಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿ ಭಾರತದ ನಾಯಕರಾದರು. ನಾಯಕನಾಗಿ 29 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ 22 ಜಯಗಳಿಸಿದ್ದಾರೆ.   ಸ್ವದೇಶದಲ್ಲಿ 30 ಟೆಸ್ಟ್ ಪಂದ್ಯಗಳಲ್ಲಿ 21 ಜಯಗಳಿಸಿ ಧೋನಿ ತಮ್ಮ ವೃತ್ತಿಜೀವನವನ್ನು ಮುಗಿಸಿದರು. ಅಹಮದಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನ 2 ನೇ ದಿನದಂದು ಭಾರತ 10 ವಿಕೆಟ್‌ಗಳಿಂದ …

Read More »

ರಾಜ್ಯಾದ್ಯಂತ ಲಾರಿ ಮುಷ್ಕರ; ಡಿಸೇಲ್​ ಸೆಸ್ ದ​ರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ,  ಒಂದು ಕಿಲೋಮೀಟರ್ ಗೆ ಲಾರಿ ಓಡಿಸಲು ಮಾಲೀಕರಿಗೆ 36 ರೂ. ವೆಚ್ಚವಾಗುತ್ತಿದೆ. ರಾಜ್ಯದಿಂದ 40 ಸಾವಿರ ಲಾರಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಹೊರ ರಾಜ್ಯದಲ್ಲಿ ಡಿಸೇಲ್ ಕಡಿಮೆ ಇದೆ. ಕಡಿಮೆ ಇರುವ ರಾಜ್ಯಗಳಿಂದ ಮಾಲೀಕರು ಡಿಸೇಲ್ ಹಾಕಿಸಿಕೊಂಡು ಬರುತ್ತಿದ್ದಾರೆ. …

Read More »

ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಅಲ್ಲೇ ಅಡುಗೆ, ಅಲ್ಲೇ ಊಟ,

ಖಾನಾಪುರ: ೨೦೧೯ರ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಗೆ ಉಂಟಾದ ಪ್ರವಾಹದಲ್ಲಿ ತಮ್ಮ ಮನೆ ಮತ್ತು ಆಸ್ತಿ-ಪಾಸ್ತಿ ಕಳೆದುಕೊಂಡಿರುವ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ೭೦ಕ್ಕೂ ಹೆಚ್ಚು ನೆರೆ ಸಂತ್ರಸ್ತರು ಗುರುವಾರ ತಮಗೆ ನಿವೇಶನ, ತಾತ್ಕಾಲಿಕ ವಸತಿ ವ್ಯವಸ್ಥೆ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಪ್ರತಿಭಟನೆಯ ಅಂಗವಾಗಿ ಪ್ರವಾಹ ಸಂತ್ರಸ್ತರು ತಹಸೀಲ್ದಾರ್ ಕಚೇರಿಯ …

Read More »

ಸರ್ಕಾರದಿಂದ ಲಭ್ಯವಿರುವ ಅನುದಾನ ಲ್ಯಾಪ್ಸ್ ಆದರೆ ತಾಪಂ ಸಿಇಒ ಹೊಣೆ

ಬೆಳಗಾವಿ:  ಈ ವರ್ಷದ ಅನುದಾನ ಯಾವುದೇ ಕಾರಣಕ್ಕೂ ವ್ಯಪಗತ(ಲ್ಯಾಪ್ಸ್) ಆಗಬಾರದು. ಒಂದು ವೇಳೆ ಅನುದಾನ ವ್ಯಪಗತವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ‌.ಅತೀಕ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.24) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!

ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …

Read More »

ಮಠದ ಆಸ್ತಿ ಕಬಳಿಸಲು ಹುನ್ನಾರ: ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ ಮಾಡಿದರು. ‘ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ಮಹಾಸಂಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಬೆಂಗಳೂರು ಸೇರಿ ರಾಜ್ಯದ …

Read More »

ಒಡಿಶಾದಲ್ಲಿ 45 ಕೆ.ಜಿ. ಆನೆ ದಂತ ವಶ, ಇಬ್ಬರ ಬಂಧನ

ಬಾರಿಪಾದ (ಒಡಿಶಾ), ಫೆ.25 (ಪಿಟಿಐ)- ರಾಜ್ಯದ ಮಯೂರ್‍ಭಾನ್ಜ ಜಿಲ್ಲೆಯಲ್ಲಿ 45 ಕಿಲೋ ಗ್ರಾಂ ತೂಕವುಳ್ಳ ಎಂಟು ಆನೆ ದಂತಗಳನ್ನು ವಶಪಡಿಸಿಕೊಂಡು, ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಸಲಾಗಿದೆ ಎಂದು ಒಡಿಶಾ ಅರಣ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಉದಾಲಾ ವಲಯದ ಅರಣ್ಯ ಸಿಬ್ಬಂದಿ ಸಿಮಿಲ್ಪಾಲ್ ರಾಷ್ಟ್ರೀಯ ಉದ್ಯಾನವನ ತಪ್ಪಲಿನ ಅಂಗರ್ಪಾದ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಂತ ಖರೀದಿದಾರರಂತೆ ನಟಿಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ದಂತಗಳನ್ನು ವಶಕ್ಕೆ …

Read More »

ಅರಣ್ಯ ಸಿಬ್ಬಂದಿಗೆ ಇಂಧನ ಭತ್ಯೆ ಅಗತ್ಯ: ಲಿಂಬಾವಳಿ

ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗೆ ಇಂಧನ ಭತ್ಯೆ ನೀಡಬೇಕಾದ ಅಗತ್ಯವಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅರಣ್ಯ ಭವನದಲ್ಲಿ ಬುಧವಾರ ನಡೆದ ಹಿರಿಯ ಐಎಫ್‌ಎಸ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ಕೆಳಹಂತದ ಸಿಬ್ಬಂದಿಗೆ ವಾಹನ ಸೌಲಭ್ಯ ನೀಡಿಲ್ಲ. ಅರಣ್ಯ ರಕ್ಷಣೆಗಾಗಿ ಅವರು ಸ್ವಂತ ವಾಹನವನ್ನೇ ಬಳಕೆ ಮಾಡುತ್ತಿದ್ದಾರೆ. ಅಂತಹ ಸಿಬ್ಬಂದಿಗೆ ಇಂಧನ ಭತ್ಯೆಯನ್ನಾದರೂ ನೀಡಬೇಕಿದೆ’ ಎಂದರು. ಕಾಡು ಪ್ರಾಣಿಗಳ …

Read More »

ಮೈಸೂರು ಮೇಯರ್‌ ಆಯ್ಕೆ ಹಿಂದೆ ಚಾಮುಂಡೇಶ್ವರಿ ಪರ್ಯಾಯ ನಾಯಕತ್ವದ ಲೆಕ್ಕಾಚಾರ?

ಮೈಸೂರು: ಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಆರು ಜನರು ಆಕಾಂಕ್ಷಿಗಳಿದ್ದರೂ; ರುಕ್ಮಿಣಿ ಅವರನ್ನೇ ಕುಮಾರಸ್ವಾಮಿ ಆಯ್ಕೆ ಮಾಡಿದ್ದರ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೊಳಿಸುವ ತಂತ್ರಗಾರಿಕೆ ಇದೆ ಎನ್ನಲಾಗಿದೆ. ರುಕ್ಮಿಣಿ ಪತಿ ಮಾದೇಗೌಡ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಮಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್‌ ಸದಸ್ಯರು. ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭ ಮಾದೇಗೌಡರಿಗೆ ಟಿಕೆಟ್‌ ನಿರಾಕರಿಸಿದ್ದರು. ಮಾದೇಗೌಡ, ಕುಮಾರಸ್ವಾಮಿ ಬಳಿಗೆ ತೆರಳಿ ಮಾತುಕತೆ ನಡೆಸಿ ಪಕ್ಷದ ‘ಬಿ’ …

Read More »