ಕಲಬುರಗಿ: ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ. ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು …
Read More »ಬೋಧನಾ ಶುಲ್ಕ ಕಡಿತ: ಹೈಕೋರ್ಟ್ ನೋಟಿಸ್
ಬೆಂಗಳೂರು: ಬೋಧನಾ ಶುಲ್ಕ ಶೇ 70ರಷ್ಟು ಮಾತ್ರ ಪಡೆಯಬೇಕು ಎಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ‘ಶೇ 70ರಷ್ಟು ಶುಲ್ಕ ಸಂಗ್ರಹಿಸಬೇಕು ಮತ್ತು ಶುಲ್ಕದ ವಿವರ ಒಳಗೊಂಡ ಪಟ್ಟಿ ಪ್ರಕಟಿಸಬೇಕು. ಲೆಕ್ಕಪರಿಶೋಧನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿ ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ …
Read More »ಬಿಎಂಟಿಸಿ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಬಂದಿದೆ: ಲಕ್ಷ್ಮಣ ಸವದಿ
ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು. ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ …
Read More »ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ
ನವದೆಹಲಿ: ತೈಲ ಕಂಪೆನಿ ಇಂಡಿಯನ್ ಆಯಿಲ್ ಕಂಪೆನಿಯು ಫೆಬ್ರವರಿಯಲ್ಲಿ ಮೂರನೇ ಸಲ ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ಮಾಡಿದೆ. ಪ್ರತೀ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 769ರಿಂದ 794ಕ್ಕೆ ಏರಿಕೆ ಮಾಡಿದೆ. ಇದಕ್ಕೆ ಮೊದಲು ಫೆಬ್ರವರಿ 4 ಮತ್ತು 14ರಂದು ಬೆಲೆ ಏರಿಕೆ ಮಾಡಲಾಗಿತ್ತು. ಡಿಸೆಂಬರ್ ನಲ್ಲಿ ಕೂಡ ಎರಡು ಸಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಂಡರ್ …
Read More »1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …
Read More »ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ
ಚೆನ್ನೈ: ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ. 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದ್ದು, ಇದರ ಅನುಷ್ಠಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ …
Read More »ಸರ್ಕಾರ ಭರವಸೆ ನೀಡಿದ್ದ ಒಂದೇ ಒಂದು ಬೇಡಿಕೆಯನ್ನು ಈವರೆಗೂ ಈಡೇರಿಸಿಲ್ಲ; ಸಾರಿಗೆ ನೌಕರರ ಒಕ್ಕೂಟ
ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳು ಈಡೇರಿಸಿಲ್ಲ. 14 ಡಿಸೆಂಬರ್ 2020 ರಿಂದ ಈವರೆಗೂ ಬೇಡಿಕೆ ಈಡೇರಿಲ್ಲ. 75 ದಿನ ಕಳೆದರೂ ಸರ್ಕಾರ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆ ಈಡೇರಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸಾರಿಗೆ ನೌಕರರ ಒಕ್ಕೂಟದಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಕಳೆದ ಡಿಸೆಂಬರ್ನಲ್ಲಿ ಸಾರಿಗೆ ನೌಕರರು ನಡೆಸಿದ ಧರಣಿ ವೇಳೆ ಸರ್ಕಾರ ನೌಕರರ ಬೇಡಿಕೆ ಹೊರತುಪಡಿಸಿ …
Read More »ಪಂಚಮಸಾಲಿ ಮೀಸಲಾತಿ ಕುರಿತು ಸಂಜೆ ದುಂಡುಮೇಜಿನ ಸಭೆ
ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ …
Read More »ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ ಕಿವಿಗೂ ಬಿತ್ತು
ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು ಅಷ್ಟೇ ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …
Read More »2 ದಿನ ಫಾರ್ಮ್ ಹೌಸ್ ನಲ್ಲಿರಿಸಿ ಯುವತಿ ಮೇಲೆ ಅತ್ಯಾಚಾರ :ಬಿಜೆಪಿ ನಾಯಕ ಸೇರಿ ನಾಲ್ವರು ಅರೆಸ್ಟ್
ಮಧ್ಯಪ್ರದೇಶ : ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಸೇರಿ ನಾಲ್ವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.20 ವರ್ಷದ ಯುವತಿಯನ್ನು 2 ದಿನ ಫಾರ್ಮ್ ಹೌಸ್ನಲ್ಲಿರಿಸಿ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಫೆ. 18ರಂದು ಈ ಘಟನೆ ನಡೆದಿದ್ದು, ದಿನಸಿ ಸಾಮಾನುಗಳನ್ನು ತರಲು ಯುವತಿ ಹೋಗಿದ್ದಳು. ಈ ವೇಳೆ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಫಾರ್ಮ್ …
Read More »
Laxmi News 24×7