Breaking News

ರಾಜ್ಯ

ಕೇರಳದಲ್ಲಿ ‘ಕುಸ್ತಿ’ ದೆಹಲಿಯಲ್ಲಿ ‘ದೋಸ್ತಿ’: ಪ್ರಲ್ಹಾದ ಜೋಶಿ ವಾಗ್ದಾಳಿ

ತಿರುವನಂತಪುರ: ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಕಪಟತೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ ಜೋಶಿ, ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಸ್ನೇಹಿತರಾಗಿದ್ದು, ಆದರೆ ಕೇರಳದಲ್ಲಿ ಪರಸ್ಪರ ಸ್ಪರ್ಧಿಸುತ್ತಿದೆ ಎಂದು ಲೇವಡಿ ಮಾಡಿದರು. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳದಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ ‘ಕುಸ್ತಿ’, ದೆಹಲಿಯಲ್ಲಿ ‘ದೋಸ್ತಿ’. ಈ ಪಕ್ಷಗಳ ಬೂಟಾಟಿಕೆಯನ್ನು ನೋಡಿ. ಟಿಎಂಸಿ ನಾಯಕಿ …

Read More »

ಬ್ರೇಕಿಂಗ್:‌ ಬಿಜೆಪಿ ರಾಜ್ಯ ʼಉಪಾಧ್ಯಕ್ಷ ಸ್ಥಾನʼಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ..!

ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ‘ಪಕ್ಷದಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದ್ದು, ಇದರನ್ವಯ ನಾನು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ …

Read More »

GST ವ್ಯಾಪ್ತಿಗೆ ಪೆಟ್ರೋಲ್‌, ಡಿಸೇಲ್‌ : ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ …

Read More »

ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ

ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಯಡಿಯೂರಪ್ಪ  ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್​ಗೆ ನೊಟೀಸ್​ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್​. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ …

Read More »

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್‍ನಲ್ಲಿ ಕರ್ನಾಟಕ ಬೆಸ್ಟ್ : ಶೆಟ್ಟರ್

ಬೆಂಗಳೂರು ಫೆ.23- ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಅಫೆಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿದೆ ಎಂದರು. ನಗರದಲ್ಲಿಂದು ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ …

Read More »

ಬೆಂಗಳೂರಿಗರೇ ಮತ್ತೊಮ್ಮೆ ಕೊರೋನಾ ಸಂಕಷ್ಟ ಎದುರಿಸಲು ತಯಾರಾಗಿ..!?

ಬೆಂಗಳೂರು, ಜ.23- ನಗರದಲ್ಲಿ ಮತ್ತೆ ಕೊರೊನಾ ಸ್ಫೋಟ ಭೀತಿ ಎದುರಾಗಿದೆ. ಬೆಳ್ಳಂದೂರು ವಾರ್ಡ್‍ನ ಅಪಾರ್ಟ್‍ಮೆಂಟ್‍ನ 500 ಮಂದಿಯ ಕೋವಿಡ್-19 ವರದಿ ಇಂದು ಸಂಜೆ ಬರಲಿದ್ದು, ಹೆಚ್ಚು ಮಂದಿಗೆ ಪಾಸಿಟಿವ್ ಕಂಡುಬಂದರೆ ನಗರದಲ್ಲಿ ಮತ್ತೆ ಕೊರೊನಾ ಅಲರ್ಟ್ ಘೋಷಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 15 ರಿಂದ 22ರ ಅವಧಿಯಲ್ಲಿ ಬೆಳ್ಳಂದೂರು ವಾರ್ಡ್, ಅಂಬಲಿಪುರದ ಎಸ್‍ಜೆಆರ್ ವಾಟರ್‍ಮಾರ್ಕ್ ಅಪಾರ್ಟ್‍ಮೆಂಟ್‍ನಲ್ಲಿ 100 ಮಂದಿಗೆ ಕೊರೊನಾ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ …

Read More »

ಪಂಚಮಸಾಲಿ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದೀರಿ: ಮೀಸಲಾತಿ ನೀಡಿ, ಋಣ ಸಂದಾಯ ಮಾಡಿ’

ಬೆಂಗಳೂರು: ರಾಜ್ಯದಲ್ಲಿ 8 ವಿವಿಧ ಸಮುದಾಯಗಳು ವಿವಿಧ ವರ್ಗಗಳ ಅಡಿಯಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿವೆ, ಅದರಲ್ಲೂ ಮುಖ್ಯವಾಗಿ ಪಂಚಮಸಾಲಿ ಲಿಂಗಾಯತರು ನಡೆಸುತ್ತಿರುವ ಪ್ರತಿಭಟನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇರಿಸುಮುರುಸು ಉಂಟು ಮಾಡುತ್ತಿದೆ. ತಮ್ಮ ಸಮುದಾಯವನ್ನು ಹಿಂದುಳಿದ ವರ್ಗಗಳ ಗುಂಪಿಗೆ ಸೇರಿಸಬೇಕೆಂದು ದಶಕಗಳ ಹಿಂದಿನಿಂದಲೂ ಪಂಚಮಸಾಲಿ ಸಮುದಾಯ ಒತ್ತಾಯ ಮಾಡುತ್ತಲೇ ಇದೆ, ಆದರೆ ಸಮಯ- ಸಂದರ್ಭ, ಅವಕಾಶವಾದಿ ರಾಜಕಾರಣದಿಂದಾಗಿ ಹೋರಾಟ ಇದ್ದಕ್ಕಿದ್ದಂತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಎಂ ಯಡಿಯೂರಪ್ಪಅವರನ್ನು ವಿವಾದಾತ್ಮಕ ಲಿಂಗಾಯತ …

Read More »

ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯಗಳಿಗೆ ಕಟ್ಟುವ ತೆರಿಗೆ ಲೆಕ್ಕ ಇಲ್ಲಿದೆ

ಪೆಟ್ರೋಲ್-ಡೀಸೆಲ್ ದರ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ದೇಶದ ನಾನಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಈಗಿನ ಸನ್ನಿವೇಶಕ್ಕೆ ಹೊಣೆ ಎಂಬುದು ನಿಮಗೆ ಗೊತ್ತಿದೆಯಾ? ಅದು ಹೇಗೆ ಅಂತೀರಾ? ಪೆಟ್ರೋಲ್ ಮೂಲ ಬೆಲೆ ಎಷ್ಟು, ಅದಕ್ಕೆ ಏನೆಲ್ಲಾ ತೆರಿಗೆ- ವೆಚ್ಚ ಬಿದ್ದ ಮೇಲೆ ಇಷ್ಟು ದೊಡ್ಡ ಮೊತ್ತ ಬೀಳುತ್ತದೆ ಎಂಬ ಲೆಕ್ಕಾಚಾರ ನಿಮ್ಮ ಮುಂದಿದೆ. ಓದಿ, ನೋಡಿ… ಭಾರತದಲ್ಲಿ ತೈಲ ಮಾರ್ಕೆಟಿಂಗ್ ಕಂಪೆನಿಗಳು …

Read More »

ಬಜೆಟ್ ಅಧಿವೇಶನ ಮಾರ್ಚ್ 4ರಿಂದ ವಿಧಾನಸಭೆಯಲ್ಲಿ ಆರಂಭ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿರುವರು. ಈ ಬಗ್ಗೆ ಶಾಸಕಾಂಗದ ಕಾರ್ಯದರ್ಶಿ ಎಂ.ಕೆ. ವಿಜಯಲಕ್ಷ್ಮೀ ಅವರು ಅಧಿಸೂಚನೆ ಜಾರಿ ಮಾಡಿರುವರು. ಮಾ.4 ಮತ್ತು 5ರಂದು ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆಯು ನಡೆಯಲಿದೆ. ಇದು ಈ ಬಜೆಟ್ ಅಧಿವೇಶನದ ಆಕರ್ಷಣೆಯಾಗಿರಲಿದೆ.

Read More »

ನಾನೀಗ BSY ಸ್ಥಾನದಲ್ಲಿದ್ದಿದ್ರೆ ನನ್ನ ರಕ್ತ ಹೀರೋರು, ಚರ್ಮ ಸುಲಿಯೋರು: ಕುಮಾರಸ್ವಾಮಿ

ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, …

Read More »