Breaking News

ರಾಜ್ಯ

ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ

ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …

Read More »

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »

ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ‌ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …

Read More »

ನೀನು ಮೊದಲು ರಾಜೀನಾಮೆ ನೀಡು : ಯತ್ನಾಳ್ ಗೆ ಸಚಿವ ನಿರಾಣಿ ಸವಾಲ್

ಬೆಂಗಳೂರು : ಶಾಸಕ ಬಸವರಾಜ್ ಯತ್ನಾಳ್ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀಯಾ. ಮೊದಲು ನೀನು  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡು ಅಂತಾ ಸಚಿವ ಮುರಗೇಶ್ ನಿರಾಣಿ ಕಿಡಿ ಕಾರಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೇ ನಡೆದ ಸಮಾವೇಶದಲ್ಲಿ ಬಹಿರಂಗವಾಗಿ ಯತ್ನಾಳ್ ಅವರು , ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ನಮಗೆ ರಾಜೀನಾಮೆ ನೀಡು ಎನ್ನುವುದಕ್ಕೆ ಇವರು ಯಾರು ಎಂದು ಪ್ರಶ್ನ ಮಾಡಿದ್ದಾರೆ. ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ …

Read More »

ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!

ಬೆಳಗಾವಿ:  ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ  ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಕಾಂಗ್ರೆಸ್ ನಲ್ಲಿ  ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ  ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …

Read More »

ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್

ಬೆಂಗಳೂರು: ‘ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ’ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಬಿಜೆಪಿ ಆರ್ಥಿಕ ಪ್ರಕೋಷ್ಠವು ಕೇಂದ್ರ ಬಜೆಟ್‌ ಕುರಿತು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಮಾತಿತ್ತು. ದೀನದಯಾಳ್‌ ಉಪಾಧ್ಯಾಯರ ‘ಅಂತ್ಯೋದಯ’ ಚಿಂತನೆಗಳೊಂದಿಗೆ ಇಂತಹ ಮಾತುಗಳನ್ನು ತೊಡೆದು ಹಾಕಲು …

Read More »

ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು. ಮೀಸಲಾತಿಗಾಗಿ ಆಗ್ರಹಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮಗೆ ನಿಗಮ, ಮಂಡಳಿ ಅಥವಾ ಅನುದಾನ ಬೇಡ. ‘2ಎ’ ಮೀಸಲಾತಿಯೇ ನಮ್ಮ ಬೇಡಿಕೆ. ಅದು ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು. ಮೀಸಲಾತಿಗಾಗಿ 2012ರಿಂದಲೂ …

Read More »

ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರೋ ಸವಾರರ ಬಳಿ ದುಪ್ಪಟ್ಟು ಹಣ ವಸೂಲಿ, ಗುತ್ತಿಗೆದಾರನ ಆಟಟೋಪಕ್ಕೆ ಇಲ್ವಾ ಬ್ರೇಕ್?

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ರಾಜಧಾನಿಯ ಜನ ಸೇರಿದಂತೆ ಸಾವಿರಾರು ಪ್ರವಾಸಿಗರು ನಿತ್ಯ ಲಗ್ಗೆ ಇಡ್ತಾರೆ. ಹೀಗೆ ಗಿರಿಧಾಮಕ್ಕೆ ಬರುವ ಬೈಕ್ ಸವಾರ ಪ್ರವಾಸಿಗಳಿಂದ ಗಿರಿಧಾಮದಲ್ಲಿ ಅಕ್ರಮ ವಸೂಲಿ ನಡೆಯುತ್ತೆ ಅನ್ನೋ ಮಾಹಿತಿ ಟಿವಿ9ಗೆ ಸಿಕ್ಕಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಗುತ್ತಿಗೆದಾರ ಸತ್ಯನಾರಾಯಣ, ಹೆಲ್ಮೆಟ್ ಸಂಗ್ರಹ ನೆಪದಲ್ಲಿ ಬೈಕ್ ಸವಾರರಿಂದ ನಿಗದಿಗಿಂತ ಐದಾರು ಪಟ್ಟು ಹೆಚ್ಚು ಹಣ ವಸೂಲಿ ಮಾಡ್ತಿರುವ ದೃಶ್ಯ …

Read More »

ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮ

ಬೆಂಗಳೂರು : ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮವೊಂದನ್ನು ಕೈಗೊಂಡಿದ್ದು, ದೂರ ಮಾರ್ಗಗಳಿಗೆ ಬಸ್ ಚಲಾಯಿಸುವ ಕೆಎಸ್ ಆರ್ ಟಿಸಿ ಚಾಲಕರು ಮಾರ್ಗಮಧ್ಯೆ ವಿಶ್ರಾಂತಿ ಪಡೆಯಲು ತನಿಖಾ ಬಿಂದುಗಳನ್ನು ಸ್ಥಾಪಿಸಲಾಗಿದೆ. ದೂರದ ಮಾರ್ಗಗಳಿಗೆ ಸಂಚರಿಸುವ ವಾಹನಗಳ ಚಾಲಕರಿಗೆ ವಿಶ್ರಾಂತಿಯಿಲ್ಲದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುತ್ತಿದೆ. ಹೀಗಾಗಿ ಚಾಲಕರು ಮಾರ್ಗಮಧ್ಯೆ 15 ನಿಮಿಷ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಕೆಎಸ್‌ಆರ್ ಟಿಸಿ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ. ಕೆಎಸ್‌ಆರ್ ಟಿಸಿ …

Read More »

ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ :ಎಚ್ಚರಿಕೆ ನೀಡಿದ ಮಹಾ ಸಿಎಂ

ಮುಂಬೈ : ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಗತ್ಯ ಇರುವ ಕಡೆಗಳಲ್ಲಿ ನಾಳೆ ಸಂಜೆಯಿಂದಲೇ ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿಸಿದರು. ‘ಲಾಕ್ ಡೌನ್ ಇದ್ದಕ್ಕಿದ್ದಂತೆ ಪ್ರಾರಂಭವಾಗುವುದಿಲ್ಲ. ನಾವು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ಹಾಕುತ್ತಿಲ್ಲ. ನಾಳೆ ಸಂಜೆಯಿಂದಲೇ ಅಗತ್ಯವಿರುವೆಡೆ ಲಾಕ್ …

Read More »