Breaking News

ರಾಜ್ಯ

ನನಗೆ ನೋಟಿಸ್ ಬಂದಿದೆ.ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂದು 11 ಪುಟಗಳ ಉತ್ತರ ಬರೆದಿದ್ದೇನೆ.

ಬೆಂಗಳೂರು: ನಾನು ಪಕ್ಷದ ವಿರುದ್ಧವಾಗಲಿ ಅಥವಾ ನಮ್ಮ ನಾಯಕರಾದ ನರೇಂದ್ರ ಮೋದಿ ವಿರುದ್ಧವಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರ ಕುಟುಂಬ ರಾಜಕಾರಣ ಹಾಗೂ ವಿಜಯೇಂದ್ರರ ವರ್ಗಾವಣೆ ದಂಧೆ ಬಗ್ಗೆ ಮಾತ್ರ ಆರೋಪಿಸಿದ್ದೇನೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಟ್​ನಿಂದ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ 11 ಪುಟಗಳ ಉತ್ತರ ಬರೆದಿದ್ದೇನೆ. ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ …

Read More »

ಬಿಹಾರದಲ್ಲಿ ಬಿಜೆ‍ಪಿ ಸೋಲಿಸಲು ವಿಜಯೇಂದ್ರ ದುಡ್ಡು: ಯತ್ನಾಳ

ಬೆಂಗಳೂರು: ‘ಬಿಹಾರದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಜಯೇಂದ್ರ (ಯಡಿಯೂರಪ್ಪ ಪುತ್ರ) ತಮ್ಮ ಆಪ್ತರ ಮೂಲಕ ಹಣ ಕಳುಹಿಸಿದ್ದಾರೆ. ಪ್ರಧಾನಿ ಮೋದಿ ಶಕ್ತಿ ಕುಗ್ಗಿಸಲು ಹಣ ಸಂದಾಯ ಮಾಡಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಪಾದಿಸಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಆರ್‌ಜೆಡಿ, ಕಾಂಗ್ರೆಸ್‌ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಈ ಬಗ್ಗೆಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ‘ಪಕ್ಷದಿಂದ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಹನ್ನೊಂದು ಪುಟಗಳ …

Read More »

ಕಾಂಗ್ರೆಸ್‌ ಮುಖಂಡರು ತಮ್ಮ ತೀಟೆ ತೀರಿಸಿಕೊಳ್ಳಲು ಜೆಡಿಎಸ್‌ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದರು.:H.D.K.

ಮಂಡ್ಯ: ‘ಕಾಂಗ್ರೆಸ್‌ ಮುಖಂಡರು ತಮ್ಮ ತೀಟೆ ತೀರಿಸಿಕೊಳ್ಳಲು ಜೆಡಿಎಸ್‌ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದರು. ಕಾಂಗ್ರೆಸ್‌ನ ಆಶ್ರಯದಿಂದ ನಮ್ಮ ರಾಜಕೀಯ ಜೀವನ ನಡೆಯುತ್ತಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಅವರು ಜೆಡಿಎಸ್‌ನಲ್ಲಿ ಇದ್ದಾಗ ಹೆಚ್ಚಿನ ಸ್ಥಾನ ಗೆದ್ದಿರುವುದಾಗಿ ಹೇಳಿದ್ದಾರೆ. ಆದರೆ 1999ರಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆಯಲ್ಲಿ ನಾನು, ದೇವೇಗೌಡರು ಸೋತಿದ್ದೆವು. …

Read More »

ಮಗುವಿನ ಜೀವ ಉಳಿಸಿದ’: ₹16 ಕೋಟಿ ಮೌಲ್ಯದ ‘ಲಾಟರಿ

ಭಟ್ಕಳ: ಮಾರಣಾಂತಿಕ ಸ್ನಾಯು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ₹ 16 ಕೋಟಿ ಮೌಲ್ಯದ ಜೀನ್ ಚಿಕಿತ್ಸೆಗೆ ಒಳಗಾಗಿ ಈಗ ಮರುಜೀವ ಪಡೆದಿದ್ದಾಳೆ. ಬಹುರಾಷ್ಟ್ರೀಯ ಔಷಧಿ ಕಂಪನಿ ‘ನೋವಾರ್ಟಿಸ್’ ಲಾಟರಿ ಮೂಲಕ ಈ ಮಗುವಿನ ಚಿಕಿತ್ಸೆಗೆ ಆಯ್ಕೆ ಮಾಡಿತ್ತು. ಪಟ್ಟಣದ ಮೊಹಮ್ಮದ್ ಬೆಸಿಲ್ ಮತ್ತು ಖಾದಿಜಾ ಅವರ ಪುತ್ರಿಯಾಗಿರುವ ಫಾತಿಮಾಳನ್ನು, ಜನವರಿ ಕೊನೆಯಲ್ಲಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಝೋಲ್ಗೆನ್ಸ್ಮಾ’ ಜೀನ್ ಥೆರಪಿಗೆ ಒಳಗಾಗಿದ್ದು ಈಗ ಚೇತರಿಸಿಕೊಳ್ಳುತ್ತಿರುವುದಾಗಿ …

Read More »

ರೈತರಿಂದ ರೈಲು ತಡೆ: ನಿರ್ಲಕ್ಷಿಸಬಹುದಾದ ಪರಿಣಾಮವಷ್ಟೇ ಎಂದ ರೈಲ್ವೆ

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಗುರುವಾರ ದೇಶಾದ್ಯಂತ ನಡೆದ ರೈಲು ತಡೆ ಯಶಸ್ವಿಯಾಗಿದೆಯೆಂದು ರೈತರು ಹೇಳಿದ್ದರೆ, ಇತ್ತ ರೈಲ್ವೆ ಇಲಾಖೆ ರೈಲು ತಡೆಯಿಂದ ಉಂಟಾಗಿರುವುದು ನಿರ್ಲಕ್ಷಿಸಬಹುದಾದ ಪರಿಣಾಮ ಎಂದಷ್ಟೇ ಹೇಳಿದೆ. ಪಂಜಾಬ್ ಮತ್ತು ಹರಿಯಾಣದ ಅನೇಕ ಸ್ಥಳಗಳಲ್ಲಿ ರೈಲ್ವೆ ಹಳಿಗಳಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೈಲ್ವೇ ಅಧಿಕಾರಿಗಳು ನಿಲ್ದಾಣಗಳಲ್ಲಿ ರೈಲುಗಳನ್ನು ನಿಲ್ಲಿಸಿದ್ದರು. ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವೆಡೆ …

Read More »

ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ

ಖಾನಾಪುರ: ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ. ಗವ್ವಾಳಿ ಗ್ರಾಮದ ಸಾವಿತ್ರಿ ಬಾಬು ಗಾವಡಾ (೭೬) ಅವರ ಮೇಲೆ ಹಿಂದಿನಿಂದ ದಾಳಿ ನಡೆಸಿದ ಕಾಡುಹಂದಿ ಅವರ ಮೊಣಕಾಲು ಮತ್ತು ಸೊಂಟದ ಭಾಗವನ್ನು ತನ್ನ ಹರಿತವಾದ ಮುಳ್ಳಿನಿಂದ ತಿವಿದು ಗಾಯಗೊಳಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಭೀಮಗಡ …

Read More »

ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಶೂಟಿಂಗ್ ನನ್ನನ್ನು ಕಾಪಾಡಿತು: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ರಾಘವೇಂದ್ರ ರಾಜ್ ಕುಮಾರ್ ಪ್ರತಿಕ್ರಿಯೆ

ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಇಂದು (ಫೆಬ್ರವರಿ 18) ಡಿಸ್ಚಾರ್ಜ್ ಆಗಿ ಮನೆಗೆ ತೆರಲಿದ್ದಾರೆ. ಈ ಸಮಯದಲ್ಲಿ ರಾಘಣ್ಣ ಜೊತೆ ಸಹೋದರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪುತ್ರ ವಿನಯ್ ರಾಜ್ ಕುಮಾರ್ ಸೇರಿದಂತೆ ಕುಟುಂಬದವರು ಮತ್ತು ಸ್ನೇಹಿತರು ಜೊತೆಯಲ್ಲಿದ್ದರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬಂದ ರಾಘಣ್ಣ ಮಾಧ್ಯಮದವರ ಜೊತೆ ಮಾತನಾಡಿ ಶೂಟಿಂಗ್ ನನ್ನನ್ನು ಕಾಪಾಡಿತು ಎಂದು ಹೇಳಿದ್ದಾರೆ. …

Read More »

ಫೆ.19ರಂದು1200 ಥಿಯೇಟರ್​​ಗಳಲ್ಲಿ ಬಿಡುಗಡೆಯಾಗಲಿದೆ ಧ್ರುವಾ ಸರ್ಜಾ ಅಭಿನಯದ ಪೊಗರು

ಬೆಂಗಳೂರು: ನಾಳೆ ಫೆಬ್ರವರಿ 19 ರಥಸಪ್ತಮಿ. ಆಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ವಿಶೇಷ ದಿನ.. ಕಾರಣ ಧ್ರುವ ಸರ್ಜಾ ಅಭಿನಯದ, ಬಹುನಿರೀಕ್ಷಿತ ಪೊಗರು (Pogaru) ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಕೊರೊನಾ ಲಾಕ್​ಡೌನ್ ನಂತರ ಸ್ಯಾಂಡಲ್​ವುಡ್​ನಲ್ಲಿ ಸಿನಿಜಾತ್ರೆ ಶುರುವಾಗಿದೆ. ಆಯಕ್ಷನ್ ಪ್ರಿನ್ಸ್​ ಧ್ರುವ ಸರ್ಜಾ ಪೊಗದಸ್ತಾಗಿ ಬಿಗ್ ಸ್ಕ್ರೀನ್​ಗೆ ಎಂಟ್ರಿ ಕೊಡೋಕೆ ಕ್ಷಣಗಣನೆ ಶುರುವಾಗಿದೆ. ಇನ್ನು ಅಭಿಮಾನಿಗಳಂತೂ ಫುಲ್​ ಉತ್ಸಾಹದಲ್ಲಿದ್ದು, ತಮ್ಮ ನೆಚ್ಚಿನ ನಟನಿಗೆ ಆರತಿ ಎತ್ತಿ, …

Read More »

ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು

ಬಾಗಲಕೋಟೆ, ಫೆಬ್ರವರಿ 18: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ, ಜಿಲ್ಲೆಯ ಘಟಪ್ರಭಾ ನದಿಯ ಕಲಾದಗಿ ಸೇತುವೆ ಬಳಿ ಶವ ಎಸೆದಿರುವ ಬಗ್ಗೆ ದೂರು ದಾಖಲಾಗಿದೆ. ಅಂಕಲಗಿ ಸೇತುವೆ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿದ್ದು, ಹನೀಪ್ ಎಂಬ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನರ್ಸಿಂಗ್ ಮುಗಿಸಿರುವ ಯುವತಿಯು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಹನೀಪ್ ಸಹ …

Read More »