Breaking News

ರಾಜ್ಯ

ಸಿದ್ದರಾಮಯ್ಯ, ಕುಮಾರಸ್ವಾಮಿ ಕೋತಿಗಳ ರೀತಿ ಹೇಳಿಕೆ ಕೊಡುತ್ತಿದ್ದಾರೆ: ಈಶ್ವರಪ್ಪ

ಶಿವಮೊಗ್ಗ, ಫೆ.17: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತ ಸಿದ್ದರಾಮಯ್ಯ ಅವರು ಕೋತಿಗಳ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಜನಮಾನಸದಿಂದ ದೂರವಾಗುತ್ತಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆಯಾಗುತ್ತಿವೆ, ಗೋವುಗಳ ಕಳ್ಳತನ ನಡೆಯುತ್ತಿದೆ ಎಂದು ದೂರು ನೀಡಿದರೆ ಗೋರಕ್ಷರ ಮೇಲೆಯೇ ಕ್ರಮ ಜರುಗಿಸಿದರು. ಇದರ ಪರಿಣಾಮವೇ ಕಾಂಗ್ರೆಸ್ ಸರ್ಕಾರ …

Read More »

ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್

ಬೆಂಗಳೂರು: ಬಿಜೆಪಿ ವರಿಷ್ಠರು ನೀಡಿದ್ದ ಶೋಕಾಸ್ ನೋಟಿಸ್ ಗೆ 11 ಪುಟಗಳಷ್ಟು ಉತ್ತರ ನೀಡಿದ್ದೇನೆ. ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಬಗ್ಗೆ ಬರೆದಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಅಲ್ಲಿ ಬಿಜೆಪಿ ಸೋಲಿಸಲು ಆರ್ ಜೆಡಿ, ಕಾಂಗ್ರೆಸ್ ಗೆ …

Read More »

ಪೆಟ್ರೋಲ್-ಡೀಸೆಲ್ ದರದಲ್ಲಿ ಹೆಚ್ಚಳ : ಮೌನ ಮುರಿದ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?

ನವದೆಹಲಿ: ಪೆಟ್ರೋಲ್ 100 ರೂಪಾಯಿ ಗಡಿ ದಾಟಿದ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದಿನ ಸರ್ಕಾರಗಳು ಭಾರತದ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಗಮನ ಹರಿಸಿಲ್ಲ ಎಂದು ಬುಧವಾರ ಆರೋಪಿಸಿದ್ದಾರೆ. ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆಗಳ ಆನ್ ಲೈನ್ ಉದ್ಘಾಟನೆ ವೇಳೆಯಲ್ಲಿ ಮಾತನಾಡಿದ ಅವರು ಚಿಲ್ಲರೆ ಇಂಧನ ದರ ಏರಿಕೆ ಯನ್ನು ಉಲ್ಲೇಖಿಸದೆ, 2019-20ನೇ ಹಣಕಾಸು ವರ್ಷದಲ್ಲಿ ಭಾರತವು ತನ್ನ ತೈಲ ಅಗತ್ಯಗಳ ಪೈಕಿ ಶೇ.85ರಷ್ಟು …

Read More »

ಸಿದ್ದು ಅಹಿಂದ ಆಟ ನಡೆಯಲ್ಲ : ಎಂ.ಪಿ.ರೇಣು ಕಾಚಾರ್ಯ

ಬೆಂಗಳೂರು,ಫೆ.17- ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹಿಂದ ಅಥವಾ ಅಹಿಂದ ಯಾವುದೂ ನಡೆಯುವುದಿಲ್ಲ ಎಂದು ರಾಜ್ಯದ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣು ಕಾಚಾರ್ಯ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ತತ್ವದಡಿ ಪ್ರಧಾನಿ ನರೇಂದ್ರಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನ ಅಹಿಂದ ನಾಟಕವನ್ನು ಜನರು ನಂಬುವುದಿಲ್ಲ. ರಾಜ್ಯದ ಜನತೆ …

Read More »

ತಂಬಾಕು ಮಾರಾಟಕ್ಕೂ ಕಡ್ಡಾಯ ಪರವಾನಿಗಿ ನೀಡಿ

ಬೆಂಗಳೂರು, ಫೆ.17- ರಾಜ್ಯದಲ್ಲಿ ತರಕಾರಿ, ಹಾಲು ಮಾರಾಟ ಮಳಿಗೆ ಮತ್ತು ಬೇಕರಿಯಂತಹ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳು ಸಿಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಕಡ್ಡಾಯವಾಗಿ ಪರವಾನಗಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ ಅವರು, ಮದ್ಯದ ಅಂಗಡಿಗಳಿಗೆ ಪರವಾನಗಿ ಇರುವಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯ ಪರವಾನಗಿ …

Read More »

ಟೂಲ್‌ಕಿಟ್‌ ಪ್ರಕರಣ: ನಿಕಿತಾಗೆ ಜಾಮೀನು

ಮುಂಬೈ: ಟೂಲ್‌ಕಿಟ್‌ ಪ್ರಕರಣದ ಆರೋಪಿ, ಮುಂಬೈನ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಹೈಕೋರ್ಟ್‌ ಬುಧವಾರ ಮೂರು ವಾರಗಳ ತಾತ್ಕಾಲಿಕ ನಿರೀಕ್ಷಣಾ ಜಾಮೀನು ನೀಡಿದೆ. ನಿಕಿತಾ ವಿರುದ್ಧ ದೆಹಲಿ ಪೊಲೀಸರು ಜಾಮೀನುರಹಿತ ವಾರಂಟ್‌ ಪಡೆದುಕೊಂಡಿದ್ದಾರೆ. ಬಂಧನದಿಂದ ರಕ್ಷಣೆ ಪಡೆಯಲು ದೆಹಲಿಯ ನ್ಯಾಯಾಲಯಕ್ಕೆ ಹೋಗುವುದಕ್ಕಾಗಿ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೊಬ್ಬ ಆರೋಪಿ ಶಾಂತನು ಮುಲುಕ್‌ ಅವರಿಗೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್‌ ಪೀಠವು ಮಂಗಳವಾರವೇ ಜಾಮೀನು ನೀಡಿದೆ. ಈ …

Read More »

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು ಕೈ ಮೇಲೆ ಟ್ಯಾಟೂ ಹಾಕಿಸಿದರೆ ಇನ್ನೊಬ್ಬರು ಎದೆ ಮೇಲೆ ಹಾಕಿಸಿಕೊಂಡು ತಮ್ಮ ಅಭಿಮಾನ ತೋರಿಸಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ …

Read More »

ಇಂದು ಐಪಿಎಲ್‌ ಮಿನಿ ಹರಾಜು; 61 ಸ್ಥಾನಕ್ಕೆ 292 ಕ್ರಿಕೆಟಿಗರ ರೇಸ್‌

ಚೆನ್ನೈ: ಬಹು ನಿರೀಕ್ಷೆಯ 14ನೇ ಐಪಿಎಲ್‌ ಪಂದ್ಯಾವಳಿಗಾಗಿ ಗುರುವಾರ ಚೆನ್ನೈಯಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇಲ್ಲಿನ “ಐಟಿಸಿ ಗ್ರ್ಯಾಂಡ್‌ ಚೋಳ ಹೊಟೇಲ್‌’ನಲ್ಲಿ ಅಪರಾಹ್ನ ಮೂರರಿಂದ ಹರಾಜು ಆರಂಭವಾಗಲಿದ್ದು, ನೇರ ಪ್ರಸಾರ ಸ್ಟಾರ್‌ ಸ್ಪೋರ್ಟ್ಸ್ ನಲ್ಲಿರಲಿದೆ. ಎಲ್ಲ ತಂಡಗಳು ತಮ್ಮ ಸೀಮಿತ ಮೊತ್ತದ ಚೌಕಟ್ಟಿನಲ್ಲಿ ಸ್ಟಾರ್‌ ಆಟಗಾರರನ್ನು ಖರೀದಿಸಲು ಪೈಪೋಟಿಗೆ ಇಳಿಯಲಿವೆ. 8 ಫ್ರಾಂಚೈಸಿಗಳಿಗೆ ಒಟ್ಟು 61 ಆಟಗಾರರ ಅಗತ್ಯವಿದೆ. ರೇಸ್‌ನಲ್ಲಿರುವವರು 292 ಮಂದಿ. ಇದರಲ್ಲಿ ಭಾರತದ 164, …

Read More »

ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂಡಿದ್ದ ಮೂವರ ಬಂಧನ

ಅಥಣಿ – ನೀರಿನ ಪಾಳಿಗಾಗಿ ಜಗಳವಾಡಿ, ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂಡಿದ್ದ ಮೂವರನ್ನು ಬಂಧಿಸಲಾಗಿದೆ. ಶಂಕರ ಸದಾಶಿವ ಮಾದರ, ಸದಾಶಿವ ಸಿದ್ರಾಮ ಮಾದರ,  ಸುನೀಲ ಸದಾಶಿವ ಮಾದರ (ಸಾ|| ಎಲ್ಲರೂ ಕೊಕಟನೂರ) ಬಂಧಿತರು.  ಮಹಾದೇವ ಸಿದ್ರಾಮ ಮಾದರ (ವಯಾ 51 ವರ್ಷ ಸಾ|| ಕೊಕಟನೂರ) ಇವನು ಹಾಗೂ  ಸದಾಶಿವ ಸಿದ್ರಾಮ ಮಾದರ (ಸಾ|| ಕೊಕಟನೂರ) ಇವರಿಬ್ಬರೂ ಖಾಸ ಅಣ್ಣತಮ್ಮಂದಿರು. ಇವರ ತಂದೆ ಸಿದ್ರಾಮ ರಾಮಪ್ಪ ಮಾದರ ಇವರ …

Read More »

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‍ನ್ನು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್‍ನಲ್ಲಿ ಠೇವಣಿಯಾಗಿಟ್ಟು …

Read More »