ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ನಗರದ ಹೊಸಳ್ಳಿ ಕ್ರಾಸ್ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ …
Read More »ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಕೋವಿಡ್ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ …
Read More »ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ
ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …
Read More »ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್ ಪೀಸ್
ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್ …
Read More »ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!
ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …
Read More »ರೈತರಿಗೆ ಗೌರವ ಕೊಡಿ, ಅವರೊಂದಿಗೆ ಮಾತನಾಡಿ : ಕೇಂದ್ರ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಮನವಿ
ನವದೆಹಲಿ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಾರತ ಇಂದು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಮಾದರಿ ಎಂದು ಹೇಳಿದರು. ಆದರೆ ಇಂದು ಅದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು. ಲೋಕಸಭೆಯಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ, ‘ರೈತರ ಸಮಸ್ಯೆ ಬಗ್ಗೆ …
Read More »ಖೋಡೆಸ್ ಕಂಪನಿಗಳ ಮೇಲೆ ಐಟಿ ದಾಳಿ
ಬೆಂಗಳೂರು: ಖೋಡೇಸ್ ಗ್ರೂಪ್ ಮಾಲೀಕರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಖೋಡೇಸ್ ಲಿಕ್ಕರ್ ಮಾಲೀಕರ ಮನೆ, ಫ್ಯಾಕ್ಟರಿ , ಕಚೇರಿಗಳ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳ ತಂಡಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಖೋಡೇಸ್ ಗ್ರೂಪ್ ಮಾಲೀಕ ರಾಮಚಂದ್ರ ಖೋಡೆ ಅವರ ಮೆಜೆಸ್ಟಿಕ್ ಬಳಿಯ ಮನೆ, ಕಚೇರಿ ಹಾಗೂ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. …
Read More »ಮದ್ಯ ಖಜಾನೆ ಧಣಿ,ಮನೆಯನ್ನೇ ಕಚೇರಿ ಮಾಡಿದ್ದ BBMP ಅಧಿಕಾರಿ ದೇವೇಂದ್ರಪ್ಪ ಸೇವೆಯಿಂದ ಅಮಾನತು!
ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. ಪೂರ್ಣಗೊಂಡ ಕಟ್ಟಡಕ್ಕೆ ಅಕ್ಯುಪೆನ್ಸ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದೇವೇಂದ್ರಪ್ಪ ಸಿಕ್ಕಿಬಿದ್ದಿದ್ದರು. ಹುಳಿಮಾವು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿಯವರಿಗೆ ಸೇರಿದ ಸ್ವತ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಸಿಗ್ಮಿಸ್ ಬ್ರಿವರೀಸ್ ಘಟಕದ ಕಟ್ಟಡ ನಿರ್ಮಾಣ ರ್ಪೂಗೊಳಿಸಲಾಗಿತ್ತು. ಆದರೆ ಪೂರ್ಣಗೊಂಡ ಕಟ್ಟಡ ಕಾಮಗಾರಿಗೆ ಓ.ಸಿ. ಪಡೆಯಲು ಕಂಪನಿ …
Read More »ಡಾ.ರಾಜ್ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು
ಬೆಂಗಳೂರು: ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್ ಆಗಿದೆ. 2000ರ ಜುಲೈ 30ರ ರಾತ್ರಿ ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್‌ಕುಮಾರ್ …
Read More »ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ
ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ. ಸೋಮವಾರವಷ್ಟೇ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಖರ್ಗೆಯವರು, ಮೋದಿ ಭಾಷಣವನ್ನು ಟೀಕಿಸಿದ್ದರು. ಇದಾದ ಬಳಿಕ ವ್ಯಕ್ತಿಯೊಬ್ಬ ಖರ್ಗೆ ಅವರಿಗೆ ಕರೆ ಮಾಡಿ, “ನೀವೇಕೆ ಮೋದಿ ಅವರನ್ನು ಟೀಕಿಸುತ್ತಿದ್ದೀರಿ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಕಾಂಗ್ರೆಸ್ ಮೂಲಗಳು …
Read More »
Laxmi News 24×7