ಬೆಳಗಾವಿ – ಕೇಂದ್ರ ಸರಕಾರ ಸೋಮವಾರ ಮಂಡಿಸಿರುವ ಬಜೆಟ್ ಬಡವರ ಬೆನ್ನಿಗೆ ಚಿನ್ನದ ಚೂರಿ ಹಾಕಿದಂತಿದೆ ಎಂದು ಶಾಸಕಿ, ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬಡವರು ಬಳಸುವ ಬಹುತೇಕ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೊರೋನಾದಿಂದ ಕಂಗೆಟ್ಟಿರುವ ರೈತರು, ಜನಸಾಮಾನ್ಯರಿಗೆ ವಿಶೇಷ ಪ್ಯಾಕೇಜ್ ಏನನ್ನಾದರೂ ಘೋಷಿಸಬಹುದು. ಮುಳುಗಿರುವ ಬಡವರನ್ನು ಮೇಲೆತ್ತುವ ಯೋಜನೆ ಜಾರಿಗೊಳಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈ ಹಿಂದೆ ಘೋಷಿಸಿದ್ದ 20 ಲಕ್ಷ ರೂ. ಕೃಷಿ …
Read More »ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …
Read More »ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್ ಎಂದ ಸಿಎಂ; ಆತ್ಮ ಬರ್ಬಾದ್ ಬಜೆಟ್ ಎಂದ ಸಿದ್ದರಾಮಯ್ಯ
ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …
Read More »2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಲೋಕಸಭೆಯಲ್ಲಿ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ನಂತರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದು ರೈತರ ಹಾಗೂ ಗ್ರಾಮೀಣ ಭಾರತದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲವಾಗುವ, ಉದ್ಯಮ, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಬಜೆಟ್ ಇದಾಗಿದ್ದು, ಉತ್ತಮ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ …
Read More »ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಬರೆಯಲು ತೆರಳುವಾಗ ಕೆಂಗೇರಿ ಬಳಿ ರಸ್ತೆ ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು ಭೇಟಿಯಾದ ಸಚಿವ ಎಸ್. ಸುರೇಶ್ ಕುಮಾರ್ ಆಕೆಯ ಆರೋಗ್ಯ ವಿಚಾರಿಸಿದರು. ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾದ ಯಶಸ್ವಿನಿಗೆ ಕತ್ತಿನ ಬೆನ್ನುಮೂಳೆಯ ಎರಡು ವರ್ಟೆಬ್ರಿಯಾಗಳು ತೀವ್ರವಾಗಿ ಘಾಸಿಗೊಳಾಗಿದ್ದು ಎರಡು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ವಿದ್ಯಾರ್ಥಿನಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಆಸ್ಪತ್ರೆಯ ನಿರ್ದೇಶಕರಿಗೆ ಸಚಿವರು ಮನವಿ ಮಾಡಿದರು.
Read More »ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ
ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನ ಹೊಂದಿದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು. ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, …
Read More »“ಆತ್ಮ ಬರ್ಬಾದ್” ಬಜೆಟ್ ಘೋಷಿಸಿದ್ದಾರೆ ನಿರ್ಮಲಾ : ಸಿದ್ದರಾಮಯ್ಯ
ಬೆಂಗಳೂರು : ನಾನು ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರ್ಮಲಾ ಅವರು “ಆತ್ಮ ಬರ್ಬಾದ್” ಬಜೆಟ್ ಕೊಟ್ಟಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಬಟೆಜ್ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ ಅದನ್ನು ಚೇತರಿಕೆ ಹಾದಿಗೆ ತರುತ್ತಾರೆ ಎಂಬ ನಿರೀಕ್ಷೆ ಇತ್ತು ಅದು ಹುಸಿಯಾಗಿದೆ. ಬಹಳ ಜನರು ಕೊರೊನಾ ಲಾಕ್ ಡೌನ್ ನಿಂದ ಉದ್ಯೋಗ ಕಳೆದುಕೊಂಡಿದ್ದರು. …
Read More »ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 684 ಮದ್ಯದ ಬಾಟಲ ವಶಕ್ಕೆ
ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ. ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ …
Read More »ಶಿವಲಿಂಗಕ್ಕೆ ಕಣ್ಣು ಬಂದಿದ್ದಾವೆ..?
ಬೆಳಗಾವಿ : ಈ ಹಿಂದೆ ಸಾಯಿ ಬಾಬಾ ಪೋಟೋದಲ್ಲಿ ವಿಭೂತಿ ಉದುರಿದ್ದು, ಗಣೇಶ ಹಾಲು ಕುಡಿದಿದ್ದು ಕೇಳಿರುತ್ತೀರಿ. ಇದೇ ಮಾದರಿಯಲ್ಲೇ ಇಲ್ಲೊಂದು ಕಲ್ಲಿನ ಶಿವಲಿಂಗಕ್ಕೆ ಕಣ್ಣು ಮೂಡಿದೆಯಂತೆ. ಶಿವಲಿಂಗಕ್ಕೆ ಕಣ್ಣು ಬಂದಿದ್ದಾವೆ ಎಂಬ ಮಾತು ನಂಬಿದಂತ ನೂರಾರು ಭಕ್ತರು, ದೇವಾಲಯಕ್ಕೆ ಹರಿದು ಬರುತ್ತಿದ್ದಾರೆ. ಇಂತಹ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಬಣಗಾರ ಗಲ್ಲಿಯಲ್ಲಿ ಶಂಕರಲಿಂಗ ದೇವಾಲಯವಿದೆ. ಇಂತಹ ದೇವಾಲಯದಲ್ಲಿರುವಂತ ಶಿವಲಿಂಗಮೂರ್ತಿಯಲ್ಲಿ ಕಣ್ಣು ಮೂಡಿದೆಯಂತೆ. ಹೀಗೆಂದು …
Read More »ರೈತರನ್ನು ದೇಶದ್ರೋಹಿಗಳು ಎನ್ನಬೇಡಿ: ಸಿದ್ದರಾಮಯ್ಯ
ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸ್ವಾರ್ಥಕ್ಕಾಗಿ ಹೋರಾಡುತ್ತಿಲ್ಲ. ದೇಶದ ಎಲ್ಲರಿಗಾಗಿ ಹೋರಾಡುತ್ತಿರುವ ರೈತರನ್ನು ದೇಶದ್ರೋಹಿಗಳು ಎಂಬುದಾಗಿ ಕರೆಯಬೇಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ರಾಜ್ಯದ ಜನರಿಗೆ ಬರೆದಿರುವ ಸುದೀರ್ಘವಾದ ಪತ್ರವೊಂದನ್ನು ಭಾನುವಾರ ಹಂಚಿಕೊಂಡಿರುವ ಅವರು, ‘ಕೇಂದ್ರ ಸರ್ಕಾರ ತಂದಿರುವ ಮೂರು ಕಾಯ್ದೆಗಳು ಕೃಷಿ ಮತ್ತು ಕೃಷಿಕರ ನಾಶಕ್ಕೆ ದಾರಿಯಾಗಲಿವೆ. ಅವುಗಳನ್ನು ಹಿಂಪಡೆಯುವಂತೆ …
Read More »
Laxmi News 24×7