Breaking News

ರಾಜ್ಯ

ವಾಟ್ಸ್ ಆಪ್, ಫೇಸ್ ಬುಕ್ ನಿಷೇಧಕ್ಕೆ ಕೇಂದ್ರ ಸರ್ಕಾರಕ್ಕೆ ಸಿಎಐಟಿ ಮನವಿ

ನವದೆಹಲಿ: ವಾಟ್ಸ್ ಆಪ್ ಹೊಸ ಗೌಪ್ಯತಾ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ಮೆಸೇಜಿಂಗ್ ಆಪ್ ವಾಟ್ಸಪ್‌ ಮತ್ತು ಅದರ ಮಾತೃ ಸಂಸ್ಥೆ ಫೇಸ್ ಬುಕ್ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ವರ್ತಕರ ಸಂಘಟನೆ ಸಿಎಐಟಿ ಯು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ಭಾನುವಾರ ಪತ್ರ ಬರೆದಿದೆ. ‘ಹೊಸ ಗೌಪ್ಯತಾ ನೀತಿಯ ಮೂಲಕ ವಾಟ್ಸ್ ಆಪ್ ಬಳಸುತ್ತಿರುವ ವ್ಯಕ್ತಿಯ ಎಲ್ಲ ರೀತಿಯ ವೈಯಕ್ತಿಕ ಮಾಹಿತಿ, …

Read More »

ನವೆಂಬರ್‌ನಿಂದೀಚೆಗೆ ಎರಡು ಬಾರಿ ವಿದ್ಯುತ್‌ ದರ ಹೆಚ್ಚಳದಿಂದ ಗ್ರಾಹಕರು ಸಂಕಷ್ಟಕ್ಕೆ

ಬೆಂಗಳೂರು: ನವೆಂಬರ್‌ನಿಂದೀಚೆಗೆ ಎರಡು ಬಾರಿ ವಿದ್ಯುತ್‌ ದರ ಹೆಚ್ಚಳದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಎಸ್ಕಾಂಗಳು ದರ ಏರಿಕೆಗೆ ಪ್ರಸ್ತಾವ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸುತ್ತಿದ್ದು, ಏಪ್ರಿಲ್‌ನಿಂದ ಮತ್ತೆ ವಿದ್ಯುತ್‌ ದರ ಏರಿಕೆಯಾಗುವ ಆತಂಕ ಮೂಡಿದೆ. ಕೋವಿಡ್‌ ತಂದೊಡ್ಡಿರುವ ಸಂಕಷ್ಟದ ನಡುವೆಯೂ ನ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 40 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿತ್ತು. ಬಳಿಕ ಪ್ರಸಕ್ತ …

Read More »

ಜ.16ರಿಂದ ಭಾರತದಲ್ಲಿ ಕೋವಿಡ್ 19 ಲಸಿಕೆ ನೀಡಲು ಆರಂಭ; ಆರೋಗ್ಯ ಸಿಬ್ಬಂದಿಗೆ ಆದ್ಯತೆ

ನವದೆಹಲಿ:ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ದೇಶೀಯವಾಗಿ ವರ್ಷದೊಳಗೆ ಲಸಿಕೆ ತಯಾರಿಸಿರುವ ಭಾರತ ಜನವರಿ (2021) 16ರಿಂದ ದೇಶಾದ್ಯಂತ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ(ಜನವರಿ 09, 2021) ತಿಳಿಸಿದೆ. ದೇಶದಲ್ಲಿ ಜನವರಿ 16ರಿಂದ ಆರಂಭವಾಗಲಿರುವ ಲಸಿಕೆ ನೀಡಿಕೆ ಯೋಜನೆಯಲ್ಲಿ ಮೊದಲಿಗೆ ಆರೋಗ್ಯ ಸೇವೆ ನೀಡುವ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಲಿದ್ದು, ಅಂದಾಜು 3 ಕೋಟಿ ಜನರು ಇದ್ದಿರುವುದಾಗಿ ತಿಳಿಸಿದೆ. ನಂತರ 50 ವರ್ಷ ಮೀರಿದ …

Read More »

ಮಾಸ್ಕ್ ಹಾಕದೆ ಗಲ್ಲಿ ಕ್ರಿಕೆಟ್ ಆಡಿ ಟ್ರೋಲ್ ಆದ ಆಮೀರ್ ಖಾನ್

ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ …

Read More »

ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆ ಶಾಸಕರಿಂದ ಸಂಸದ ರಾಗತಾರ ಸತೀಶ್ ಜಾರಕಿಹೊಳಿ..

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ. ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಾಜಿ ಸಚಿವ, ಹಾಲಿ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ …

Read More »

ಕುರುಬ ಸಮುದಾಯ ಜನರು ಜಾಗೃತರಾಗಿ ಹೋರಾಟ ನಡೆಸಿದಾಗ ಮಾತ್ರ ಎಸ್‌ಟಿ ಮೀಸಲಾತಿ ಕುರುಬ ಜನಾಂಗಕ್ಕೆ ದೊರೆಯುತ್ತದೆ

ಶಿಕಾರಿಪುರ: ಕುರುಬ ಸಮುದಾಯ ಜನರು ಜಾಗೃತರಾಗಿ ಹೋರಾಟ ನಡೆಸಿದಾಗ ಮಾತ್ರ ಎಸ್‌ಟಿ ಮೀಸಲಾತಿ ಕುರುಬ ಜನಾಂಗಕ್ಕೆ ದೊರೆಯುತ್ತದೆ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು. ಪಟ್ಟಣದ ಹೊಸಸಂತೆ ಮೈದಾನದಲ್ಲಿ ಗುರುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ, ಕುರುಬರ ಎಸ್‌ಟಿ ಹೋರಾಟ ಸಮಿತಿ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿದ್ದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಬೃಹತ್ ಜಾಗೃತಿ ಸಮಾವೇಶವನ್ನು …

Read More »

ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಂಗಾಯಣ ಕಲಾವಿದರು

ಶಿವಮೊಗ್ಗ: ಈ ಬಾರಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‍ಗೆ ಶಿವಮೊಗ್ಗದ ರಂಗಾಯಣ ಕಲಾವಿದರು ಆಯ್ಕೆಯಾಗಿದ್ದಾರೆ. ವಿಜಯನಗರ ಸಂಸ್ಥಾನದ ಇತಿಹಾಸ ಬಿಂಬಿಸುವ ರಾಜ್ಯದ ಸ್ತಬ್ಧಚಿತ್ರದ ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಸ್ತಬ್ಧಚಿತ್ರ ವಿನ್ಯಾಸ ಮಾಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಸಂದೇಶ ಜವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದೇಶದ 14 ರಾಜ್ಯಗಳ ಸ್ತಬ್ಧಚಿತ್ರಗಳು ಭಾಗವಹಿಸುತ್ತಿದ್ದು, ಅದರಲ್ಲಿ ರಾಜ್ಯದಿಂದ ವಿಜಯನಗರದ ಇತಿಹಾಸ ಸಾರುವ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಇದೇ ಮೊದಲ ಬಾರಿಗೆ …

Read More »

ಜ.11ರಿಂದ ಆಕಾಶವಾಣಿ ಯಲ್ಲಿ ‘ಕಲಿಯುತ್ತಾ ನಲಿಯೋಣ’ ಕಾರ್ಯಕ್ರಮ

ಬೆಂಗಳೂರು, ಜ.9- ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಜ.11ರಿಂದ ಆಕಾಶವಾಣಿ ಮೂಲಕ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಬಿತ್ತರಿಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜ.11ರಿಂದ ಏ.5ರವರೆಗೆ ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗುವುದು ಎಂದು ಅವರು ಹೇಳಿದರು. ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ನಿತ್ಯ ಬೆಳಿಗ್ಗೆ 10 …

Read More »

ತಂದೆಯ ಕಿಡ್ನಿ ಚಿಕಿತ್ಸೆಗಾಗಿ ಸ್ನೇಹಿತೆಯ ಮನೆಯ ಕಳ್ಳತನ ಮಾಡಿದ್ದ ಆರೋಪಿತೆ ಬಂಧನ!

ಬೆಂಗಳೂರು (ಜನವರಿ 08): ಶೋಕಿ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಾ ಬಿಂದಾಸ್ ಆಗಿ ಲೈಫ್ ಎಂಜಾಯ್ ಮಾಡಲು ಕಳ್ಳತನ ಮಾಡೋರನ್ನು ನೋಡಿರ್ತಿರಿ. ಆದರೆ ಇಲ್ಲೊಬ್ಬ ಹೆಣ್ಣು ತನ್ನ ತಂದೆಯ ಕಿಡ್ನಿ ಚಿಕಿತ್ಸೆಗಾಗಿ ಜೀವಕ್ಕೆ ಜೀವ ಕೊಡುವ ಸ್ನೇಹಿತೆಯ ಮನೆಯಲ್ಲಿ ಒಡವೆ ಕಳ್ಳತನ ಮಾಡಿ ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ತನ್ನ ತಂದೆಯ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಜೀವಕ್ಕೆ ಜೀವ ಕೊಡುತ್ತಿದ್ದ ಆತ್ಮೀಯ ಗೆಳತಿ ಪವಿತ್ರ ಮನೆಯಲ್ಲಿ ಕಳ್ಳತನ ಮಾಡಿದ ತೇಜಸ್ವಿನಿ …

Read More »

ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಿದ ಡಿಸಿಎಂ

ರಾಮನಗರ: ರಾಜ್ಯದ ಸರಕಾರಿ ಪದವಿ, ಎಂಜನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ …

Read More »