Breaking News

ರಾಜ್ಯ

ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು. ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ನಿಲ್ದಾಣಕ್ಕೆ ಓಡಾಡುವ ರೈಲು ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ಪ್ರಯಾಣ ದರ ಕೇವಲ 10-15 …

Read More »

ಬೆಳಗಾವಿಯ ರಾಯಭಾಗದ ಹಾರೋಗೇರಿ ಪಟ್ಟಣದಲ್ಲಿ ಖಿಲಾರಿ ತಳಿಯ ಜವಾರಿ ಹೋರಿ ಬರೋಬ್ಬರಿ ಐದೂವರೆ ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಚಿಕ್ಕೋಡಿ(ಜ. 03): ಸಾಮಾನ್ಯವಾಗಿ ಒಂದು ಕಟ್ಟುಮಸ್ತಾದ ಹೋರಿ 50 ಸಾವಿರದಿಂದ 1 ಲಕ್ಷದವರೆಗಿನ ಬೆಲೆಗೆ ಮಾರಾಟವಾಗುತ್ತೆ. ಅಬ್ಬಬ್ಬಾ ಅಂದ್ರೆ ಒಂದೂವರೆ ಲಕ್ಷ ರೂಪಾಯಿಗೆ ಸೇಲ್ ಆಗಬಹುದು. ಆದರೆ, ಇಲ್ಲೊಂದು  ಹೋರಿ ಬರೋಬ್ಬರಿ 5.51 ಲಕ್ಷ ರೂಪಾಯಿಗೆ ಮಾರಾಟವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದೆ. ಇಂತಹದೊಂದು ಅಪರೂಪದ ಹೋರಿ ಮಾರಾಟವಾಗಿದ್ದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೊಗೇರಿ ಪಟ್ಟಣದಲ್ಲಿ. ಇದು ಜವಾರಿ ಹೋರಿ. ಇಂತಹ ಹೋರಿ ಬೆಳೆಸಿದ್ದು ಹಾರೊಗೇರಿ ಪಟ್ಟಣದ ಕುರಬಗೋಡಿ …

Read More »

ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ:ಅರುಣ್ ಸಿಂಗ್

ಶಿವಮೊಗ್ಗ: ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅರುಣ್ ಸಿಂಗ್, ನಾಯಕತ್ವ ಬದಲಾವಣೆ ಬಗ್ಗೆ ನಾವು ನಿರ್ಧರಿಸುತ್ತೇವೆ. ಈ ಬಗ್ಗೆ ಮಾತನಾಡಲು ಯತ್ನಾಳ್ ಯಾರು? ಏನಾದರೂ ಸಮಸ್ಯೆಯಿದ್ದರೆ ಪಕ್ಷದಲ್ಲಿ ಚರ್ಚಿಸಬೇಕು. ಹಲವು ಬಾರಿ ಹೇಳಿದರೂ ಮತ್ಯಾಕೆ ನಾಯಕತ್ವದ ಬಗ್ಗೆ ಪ್ರಶ್ನೆ ಬರುತ್ತದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ …

Read More »

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ

  ಬೆಳಗಾವಿ– ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿ ಹಂತಕ್ಕೆ ಮೇಲ್ದರ್ಜೆಗೇರುತ್ತಿರುವ ಮಚ್ಚೆಯಲ್ಲಿ ದೊಡ್ಡ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆದಿದೆ. ಭಾನುವಾರ ರಾತ್ರಿ ಸುಮಾರು 15ಕ್ಕೂ ಹೆಚ್ಚು ಜನರು ದುಡ್ಡು ಹಾಕಿ ಇಸ್ಪೀಟ್ ಆಡುತ್ತಿರುವಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲವರು ಪರಾರಿಯಾಗಿದ್ದು, 12 ಜನರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 83 ಸಾವಿರ ರೂ. ನಗದು, 16 ಬೈಕ್, 12 ಮೊಬೈಲ್ …

Read More »

ಉತ್ತರ ಕನ್ನಡ: ಗ್ರಾ.ಪಂ.ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಹಿನ್ನೆಲೆ; ಎಂಎಲ್​ಸಿ​ ಟಿಕೆಟ್​​​​​ಗೆ ಹೆಚ್ಚಿನ ಬೇಡಿಕೆ

ಕಾರವಾರ (ಜ.04): ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನದಲ್ಲಿ ಗೆಲುವು ಪಡೆದಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಟಿಕೆಟ್​​ಗೆ ಈ ಬಾರಿ ಬಿಜೆಪಿಯಲ್ಲಿ ಬೇಡಿಕೆ ಹೆಚ್ಚಾಗಲಿದೆ ಎನ್ನುವ ಮಾತು ಕೇಳಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಓರ್ವ ವಿಧಾನ ಪರಿಷತ್ ಸದಸ್ಯನನ್ನು ಆಯ್ಕೆ ಮಾಡಿ ಕಳಿಸಲಾಗುತ್ತದೆ. ನಗರಸಭೆ, ಪುರಸಭೆ, …

Read More »

ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಯಿಂದ ಯಡವಟ್ಟು; ಪೋಸ್ಟ್ ಡಿಲೀಟ್ ಮಾಡಿದರೂ ವೈರಲ್ ಆಯ್ತು ಚಿತ್ರ

ವಿಜಯಪುರ: ಈ ಪ್ರಕರಣ ಯುವ ರಾಜಕಾರಣಿಗಳು ಮತ್ತು ಪೊಲೀಸರಿಗೆ ಒಂದು ಪಾಠ. ಯಾರು ಏನೆಲ್ಲ ಮಾಡಬಾರದು ಎಂಬುದಕ್ಕೆ ಹೇಳಿ ಮಾಡಿಸಿದಂತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತನ್ನ ಬೆಂಬಲಿಗರೊಂದಿಗೆ ಅತೀ ಹುರುಪಿನಿಂದ ಮಾಡಿದ ಯಡವಟ್ಟು ಈಗ ಪೊಲೀಸ್ ಠಾಣೆಯ ಮಹಿಳಾ ಪಿಎಸ್​ಐ ಮತ್ತು ಪೊಲೀಸ್ ಕಾನ್ಸ್​ಟೆಬಲ್ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಇದಕ್ಕೂ ಮಿಗಿಲಾಗಿ ತಮ್ಮ ಕೃತ್ಯವನ್ನು ಫೇಸ್ ಬುಕ್ ಮೂಲಕ ಜಗಜ್ಜಾಹಿರು ಮಾಡಿ ನಂತರ ಪೋಸ್ಟ್ ನ್ನು ಡಿಲೀಟ್ ಮಾಡಿದರೂ …

Read More »

ಚುನಾವಣಾ ಘರ್ಷಣೆ: ತಾಯಿ ಜತೆಗೆ ಜೈಲಿನಲ್ಲಿದ್ದ ಮಗು ಸಾವು

ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಜೈನಾಪುರ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ನಂತರ ನಡೆದ ಘರ್ಷಣೆಗೆ ಸಂಬಂಧಿಸಿ ಬಂಧಿತ ತಾಯಿಯೊಂದಿಗೆ ಜೈಲು ಸೇರಿದ್ದ ಮೂರು ವರ್ಷದ ಮಗು ಮೃತಪಟ್ಟಿದೆ. ‘ಮಗಳು ಭಾರತಿ ಆರೋಗ್ಯ ಸರಿ ಇರಲಿಲ್ಲ. ಜೈಲಿಗೆ ಕರೆದೊಯ್ಯಬೇಡಿ ಎಂದು ಪೊಲೀಸರಿಗೆ ಕೇಳಿಕೊಂಡೆವು. ನಮ್ಮ ತವರು ಮನೆಗೆ ಬಿಟ್ಟು ಬರುವುದಾಗಿ ಹೇಳಿ ಕರೆತಂದು ಜೈಲಿಗೆ ಹಾಕಿದರು. ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗಲೇ ಮಗುವಿನ ಆರೋಗ್ಯ ತೀವ್ರ ಹದಗೆಟ್ಟಿತ್ತು. ಆಸ್ಪತ್ರೆಗೆ ತಂದಾಗ ಸತ್ತಿದೆ …

Read More »

ರೈತರು ಪ್ರತಿಭಟನೆ ನಡೆಸುತ್ತಿದ್ದ ಮೈದಾನಕ್ಕೆ ನುಗ್ಗಿದ ಮಳೆ ನೀರು

ನವದೆಹಲಿ,ಜ.3-ವಿವಾದಿತ ಮೂರು ಕೃಷಿ ನೀತಿಗಳನ್ನು ವಿರೋಸಿ ಕಳೆದ ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರು ತಂಗಿರುವ ಬುರಾರಿ ಮೈದಾನಕ್ಕೆ ಮಳೆನೀರು ನುಗ್ಗಿದ್ದು, ಸಂಕಷ್ಟ ಎದುರಾಗಿದೆ. ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಪಡಿಸಬೇಕು, ಕೃಷಿ ವಿರೋಯಾದ ಮೂರು ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಕಳೆದ ನವೆಂಬರ್‍ನಿಂದಲೂ ದೆಹಲಿಯನ್ನು ಸಂಪರ್ಕಿಸುವ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ನಡೆಸಿದ 6 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಪಂಜಾಬ್, ಹರಿಯಾಣ ಗಡಿಭಾಗದ …

Read More »

ಗದಗ ಜಿಲ್ಲೆಯಲ್ಲಿ ಶಾಲೆ ಆರಂಭವಾಗುತ್ತಿದ್ದಂತೆ ವಿಘ್ನ; 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಐದು ಶಾಲೆ ಬಂದ್

ಗದಗ: ಕಳೆದ ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿವೆ. ಮಕ್ಕಳು ಸಹ ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಟೆನ್ಶನ್ ಆರಂಭವಾಗಿದೆ. ಹೌದು ಮಕ್ಕಳು ಹೊಸ ಹುರುಪಿನಿಂದ ಶಾಲೆಗೆ ಬರ್ತಾಯಿದ್ದಾರೆ. ಆದರೆ ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಅಟ್ಯಾಕ್ ಮಾಡಿದೆ. ಹೀಗಾಗಿ ಶಿಕ್ಷಕರು ಹೋಮ್ ಕ್ವಾರಂಟೈನ್ ಆಗಿದ್ದು, ವಿದ್ಯಾರ್ಥಿಗಳು ಅತಂತ್ರವಾಗಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಗದಗ ಜಿಲ್ಲೆಯಲ್ಲಿ ಮಕ್ಕಳು ಹೊಸ ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. …

Read More »

ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡದಿದ್ದರೆ ಹೈಕೋರ್ಟ್​ನಲ್ಲಿ ದಾವೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಚಾಮರಾಜನಗರ (ಜನವರಿ 02); ಚಾಮರಾಜನಗರಕ್ಕೆ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಭೇಟಿ ನೀಡದಿದ್ದಲ್ಲಿ ಅವರ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡುವುದಾಗಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರಕ್ಕೆ ಮುಖ್ಯಮಂತ್ರಿ ಭೇಟಿ ನೀಡಬೇಕು ಎಂದು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ  ವಾಟಾಳ್ ನಾಗರಾಜ್  ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಕೆಲ ಕಾಲ ಬಸ್ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗಕ್ಕೆ ಲೆಕ್ಕವಿಲದಷ್ಟು ಬಾರಿ ಹೋಗಿದ್ದಾರೆ. ಬೇರೆ …

Read More »