ಮಂಗಳೂರು: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ನಾಳೆಯಿಂದ ಕರ್ಫ್ಯೂ ಮುಗಿಯುವ …
Read More »ದಿ.25ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ
ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.
Read More »ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ
ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …
Read More »ಇಂದಿನಿಂದ 9 ದಿನ ಗಳವರೆಗೆ ರಾತ್ರಿ ಹೊತ್ತು ಎನಿರತ್ತೆ ಎನಿರಲ್ಲ….? ರಾತ್ರಿವೇಳೆ ಬಸ್ ಸಂಚಾರ ಇರುವುದಿಲ್ಲ,
ಇಂದಿನಿಂದ ಒಂಬತ್ತು ದಿನಗಳ ವರೆಗೆ ಎಲ್ಲವೂ ಬಂದ್ ರಾತ್ರಿವೇಳೆ ಬಸ್ ಸಂಚಾರ ಇರುವುದಿಲ್ಲ, ತುರ್ತು ಸೇವೆಗಳಿಗೆ ಮಾತ್ರ ಅವಕಾಶ , ಕೋವಿಡ್ 19 ಹೊಸ ರೂಪಾಂತರ ಗೊಂಡ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲವನ್ನೂ ರಾತ್ರಿ ಹತ್ತು ಗಂಟೆಯಿಂದ ಬಂದ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಬೆಳಿಗ್ಗೆ ಆರು ಗಟೆಯಿಂದ ಯಥಾ ಪ್ರಕಾರವಾಗಿ ಎಲ್ಲ ಕಾರ್ಯ ಚಟುವಟಿಕೆ ಗಳು ಇರುತ್ತವೆ , ಇನ್ನು ಹೊಸ ವರ್ಷ ಹಾಗೂ ಕ್ರಿಸ್ಮಸ್ ಆಚರಣೆಗೂ ಕೂಡ …
Read More »ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು
ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …
Read More »ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …
Read More »ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು. ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …
Read More »ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ
ಚೆನೈ, ಡಿ.23-ಕೊರೊನಾ ಸೋಂಕಿನ ಆತಂಕದ ನಡುವೆಯೂ ತಮಿಳುನಾಡು ಸರ್ಕಾರ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಕ್ರೀಡೆಯಲ್ಲಿ 150 ಮಂದಿಗಿಂತ ಹೆಚ್ಚಿನ ಜನ ಸೇರಬಾರದು, ಕ್ರೀಡೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಕ್ರೀಡೆಯನ್ನು ನೋಡಲು ಆಗಮಿಸುವ ಪ್ರೇಕ್ಷಕರ ಸಂಖ್ಯೆ ಶೇ.50ಕ್ಕಿಂತ ಮೀರಿರಬಾರದು ಎಂದು ತಾಕೀತು ಮಾಡಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಜಲ್ಲಿಕಟ್ಟು ಬೇಡ ಎಂದು ಕೆಲವರು ವಾದಿಸಿದ್ದರು. ಕ್ರೀಡೆಯಲ್ಲಿ ಸಾಮಾಜಿಕ …
Read More »ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ
ಪುತ್ತೂರು(ಡಿಸೆಂಬರ್. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಸವಣೂರಿನ ಮೆಸ್ಕಾಂ ಸಿಬ್ಬಂದಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮೆಸ್ಕಾಂ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂಬಾತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿರುವುದಲ್ಲದೆ, ಬಾಲಕಿಗೆ ಅಸಭ್ಯವಾಗಿ ಸಂದೇಶ …
Read More »ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »
Laxmi News 24×7