Breaking News

ರಾಜ್ಯ

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಸರ್ಕಾರ ಬಡವರು ತುತ್ತು ಅನ್ನಕ್ಕೂ ಪರದಾಡಬಾರದು ಎಂಬ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ, ಅದೇ ಅಕ್ಕಿ ಇಂದು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ಹಾಡು ಹಗಲೇ ರೇಷನ್ ಅಂಗಡಿಯಿಂದ ಅಕ್ಕಿ ತಂದು ತಮ್ಮದೆ ಒಂದು ಬ್ರಾಂಡ್ ನ ಚಿಲಕ್ಕೆ ಹಾಕಿ ಅಕ್ಕಿ …

Read More »

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಬ್ಯಾಲೆಟ್ ಪತ್ರಿಕೆ ಲೀಕ್ ಪೇಪರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಲೀಕ್​​ ಆಯ್ತು ಬ್ಯಾಲೆಟ್ ಪೇಪರ್ ಬೆಳಗಾವಿ: ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಕೇಳಿದ್ದೇವೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿರುವ ಘಟನೆ ಜಿಲ್ಲೆಯ ದೇಸೂರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಚುನಾವಣಾ ಮತದಾನಕ್ಕೂ ಮುನ್ನವೇ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿದ್ದು, ದೇಸೂರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳು ತಮಗೆ ನೀಡಿರೋ ಚಿನ್ನೆ ತೋರಿಸಿ ಮತ ಹಾಕುವಂತೆ …

Read More »

ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್

ಕೊರೊನಾ ವೈರಸ್ ರೂಪಾಂತರದಿಂದ ಇಂಗ್ಲೆಂಡ್ ತತ್ತರಿಸಿ ಹೋಗಿದ್ದು, ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್ ವಿಧಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿ ಬೋರಿಸ್ ಜಾನ್ಸಸ್ ಕಠಿಣವಾದ ‘ಟಯರ್ 4’ ಲಾಕ್‍ಡೌನ್ ವಿಧಿಸಿರುವ ಬಗ್ಗೆ ಮಾಹಿತಿ ನಿಡಿದ್ದಾರೆ. ಸೋಮವಾರ ಕೊರೊನಾ ರೂಪಾಂತರದ ಬಗ್ಗೆ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಖ್ಯ ವೈದ್ಯಕೀಯ ಅಧಿಕಾರಿ ಪ್ರೊ.ಕ್ರಿಸ್ ವಿಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ರೂಪಾಂತರಗೊಂಡಿರುವ ವೈರಸ್ ಬಹುಬೇಗ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.ಈ ಕುರಿತು …

Read More »

ಮಹಾರಾಷ್ಟ್ರದಲ್ಲಿಮತ್ತೆ ನೈಟ್ ಕರ್ಫ್ಯೂ

ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ. ಒಂದು ಸಮಯದಲ್ಲಿ ಕೊರೊನಾ ಹಾಟ್​ಸ್ಪಾಟ್​ ಆಗಿ ಮಹಾರಾಷ್ಟ್ರ …

Read More »

ನಾಗೇಶ್​ ಅಬಕಾರಿ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ,

ಕೋಲಾರ; ಬಾರ್ ಗಳ ಲೈಸೆನ್ಸ್ ನವೀಕರಣ ವಿಚಾರದಲ್ಲಿ ಮುಳಬಾಗಿಲು ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಳಬಾಗಿಲು ಶಾಸಕರಾಗಿರೋ ಸಚಿವ ಹೆಚ್​. ನಾಗೇಶ್ ಅವರ ಭ್ರಷ್ಟಾಚಾರ ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೆಚ್​. ನಾಗೇಶ್​ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ, ಕಮಿಷನ್ ಕಾಮನ್ ಆಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್​ ಕಿಡಿಕಾರಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ 45 ಮಂದಿ …

Read More »

ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ.

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಟಾರ್ಚರ್ ವಿರೋಧಿಸಿ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ. ಕೊರೋನಾದಿಂದಾಗಿ ಎಲ್ಲಾ ಕ್ಷೇತ್ರಗಳು ಆಎರ್ಹಿಕವಾಗಿ ಸಂಕಷ್ಟಕ್ಕೀಡಾಗಿವೆ. ಪೋಷಕರೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಆದರೆ ಪೋಷಕರು ಆರ್ಥಿಕವಾಗಿ ಶಕ್ತಿವಂತರಾಗಿದ್ದಾಗ ಇಂತದ್ದೇ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳು ಓದಬೇಕು ಎಂದು ಹಠಕ್ಕೆ ಬಿದ್ದು, ರಾತ್ರಿಯಿಡಿ ಶಾಲೆಗಳ ಮುಂದೆ ನಿಂತು ಅರ್ಜಿ ಪಡೆದರು. ತಮ್ಮ ಮಕ್ಕಳಿಗೆ ಅದೇ ಶಾಲೆಯಲ್ಲಿ …

Read More »

ಬಿಜೆಪಿ-ಜೆಡಿಎಸ್‌ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …

Read More »

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …

Read More »

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌ ಕಳೆದ ಆರು …

Read More »