Breaking News

ರಾಜ್ಯ

ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ

ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ …

Read More »

ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನ

ಬೆಳಗಾವಿ :  ಸಕ್ಕರೆ ಕಾರ್ಖಾನೆಯವರು ಕಳೆದ 6 ತಿಂಗಳ ವೇತನ ನೀಡಿಲ್ಲೆಂದು ಕಾರ್ಮಿಕನೊರ್ವ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ವಾಮದೇವ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರಾಯಬಾಗ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ನನ್ನನ್ನು ಸೇರಿ ಹಲವರನ್ನು ಬೇರೆಡೆ ವರ್ಗಾವಣೆ ಮಾಡಿದ್ದರು. ನಾನು ವರ್ಗಾವಣೆ ಮಾಡದಂತೆ ಮನವಿ ಮಾಡಿಕೊಂಡಿದ್ದೆ. …

Read More »

ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ

ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …

Read More »

ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ

  ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು.   ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …

Read More »

ಮಾಂಸದೂಟ ಸೇವಿಸಿ ಅಸ್ವಸ್ಥವಾಗಿದ್ದ 6ವರ್ಷದ ಮಗು ಸಾವು

ರಾಮನಗರ: ಬುಧವಾರದಂದು ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಬೀಗರ ಔತಣ ಕೂಟದಲ್ಲಿ ಮಾಂಸದೂಟ ಸೇವಿಸಿ ಜನರು ಅಸ್ವಸ್ಥತಗೊಂಡ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ 6 ವರ್ಷದ ಹೆಣ್ಣುಮಗು ಮೃತಪಟ್ಟಿದೆ. ಬೀಗರ ಔತಣದಲ್ಲಿ ಊಟ ಮಾಡಿದ್ದ 6 ವರ್ಷದ ಹೆಣ್ಣು ಮಗು ಚೈತನ್ಯ ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದು, ಗ್ರಾಮದ ವೆಂಕಟಭೈರ-ಸೌಮ್ಯ ದಂಪತಿಯ ಮಗು ಚೈತನ್ಯ ಬೀಗರೂಟದಲ್ಲಿ ಫುಡ್ ಪಾಯ್ಸನ್ ನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ …

Read More »

ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …

Read More »

ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಸೋರಿಕೆ

ಮಂಗಳೂರು: ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರಿನ ತೊಕ್ಕೊಟ್ಟು ಬಳಿ ನಡೆದಿದೆ. ನಗರದ ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲದ ಸಿಲಿಂಡರನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಗ್ಯಾಸ್ ಸೋರಿಕೆ ಕಾಣಿಸಿಕೊಂಡಿದೆ. ಈ ವಿಚಾರ ಗೊತ್ತಾದ ತಕ್ಷಣ ಚಾಲಕ ಪರಿಶೀಲಿಸಿದ್ದು, ಒಂದು ಸಿಲಿಂಡರ್ ಸೋರಿಕೆ ಆಗಿರೋದು ಬೆಳಕಿಗೆ ಬಂದಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತುರ್ತು ಕಾರ್ಯಾಚರಣೆ ನಡೆಸಿದ್ದಾರೆ‌. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 …

Read More »

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ       ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …

Read More »

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

ಬೆಂಗಳೂರು, ಡಿ.10- ಕನ್ನಡ ಚಿತ್ರೋದ್ಯಮ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದರು. ನಗರದ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದ ಎದುರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಬಹಳಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಇನ್ನಷ್ಟು ಅತ್ಯುತ್ತಮ ಕನ್ನಡ ಚಲನಚಿತ್ರಗಳು ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲಿ ಎಂದು ಹಾರೈಸಿದರು. …

Read More »

ಪಶ್ವಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಕೋಲ್ಕತ್ತಾ,ಡಿ.10-ಪಶ್ವಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಂಗಾಳದ ದಕ್ಷಿಣ 24 ಪರಗಣ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡುವ ಕಾರ್ಯಕ್ರಮವಿತ್ತು. ಹೀಗಾಗಿ ನಡ್ಡಾ ಭಾಷಣ ಮಾಡುವ ಪ್ರದೇಶದಲ್ಲಿ ಕೇಸರಿ ಬಾವುಟಗಳನ್ನು ಹಾರಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಟಿಎಂಸಿ ಕಾರ್ಯಕರ್ತರು ಬಾವುಟಗಳನ್ನು ಹರಿದುಹಾಕಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಬಂಗಾಳದಲ್ಲಿ ಜಂಗಲ್ ರಾಜ್ …

Read More »