Breaking News

ರಾಜ್ಯ

ತುಮಕೂರಿನಲ್ಲಿ ಗಡ್ಡ ರವಿ ಶಿಷ್ಯ ಹಾಗೂ ಪೊಲೀಸ್ ಮಾಹಿತಿದಾರ ಹುಚ್ಚೆ ಮಂಜುನ ಬರ್ಬರ ಹತ್ಯೆ

ತುಮಕೂರು, ಡಿ.3- ಕಲ್ಪತರು ನಾಡಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಮಾಜಿ ಮೇಯರ್ ಗಡ್ಡ ರವಿ ಆಪ್ತ ಶಿಷ್ಯ ಹಾಗೂ ಪೊಲೀಸ್ ಮಾಹಿತಿದಾರನಾಗಿದ್ದ ಹುಚ್ಚೆ ಮಂಜು ಅಲಿಯಾಸ್ ಆರ್‍ಎಕ್ಸ್ ಮಂಜ (33) ಭೀಕರವಾಗಿ ಹತ್ಯೆಯಾದ ಹಳೇ ರೌಡಿ ಶೀಟರ್. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‍ಪಿ ಕಚೇರಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿ ಇರುವ ಬಿ.ಎಚ್.ರಸ್ತೆಯ ಮಂಜುಶ್ರೀ ಲಿಕ್ಕರ್ಸ್ ಎದುರು ನಿನ್ನೆ ರಾತ್ರಿ 10.30ರ ಸಮಯದಲ್ಲಿ …

Read More »

ಬುರೆವಿ ಸೈಕ್ಲೋನ್ ಎಫೆಕ್ಟ್ – ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಚಳಿ ಜೊತೆ ತುಂತುರು ಮಳೆ

ಬೆಂಗಳೂರು: ನಿವಾರ್ ಚಂಡಮಾರುತದ ಬೆನ್ನಲ್ಲೇ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬುರೆವಿ ಚಂಡಮಾರುತ ಎಂಟ್ರಿ ಕೊಟ್ಟಿದೆ. ಶೀತಗಾಳಿ ಜೊತೆಗೆ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸಾಧ್ಯತೆ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಬುರೆವಿ ಸೈಕ್ಲೋನ್ ಪರಿಣಾಮ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗೋ ನಿರೀಕ್ಷೆ ಇದೆ. ಬೆಂಗಳೂರಲ್ಲಿ ತುಂತುರು ಮಳೆ ಆರಂಭವಾಗಿದ್ದು, …

Read More »

ಮೊದಲ ರಾತ್ರಿಯೇ ಕಂಠ ಪೂರ್ತಿ ಕುಡಿದುಬಂದ ಪತಿ ಮದುವೆಯಾದ ಒಂದೇ ತಿಂಗಳಲ್ಲಿ ಮುರಿದುಬಿತ್ತು ದಾಂಪತ್ಯ ಜೀವನ

    ಬೆಂಗಳೂರು: ಪತಿ ಮಹಾಶಯ ಫಸ್ಟ್ ನೈಟ್ ದಿನವೇ ಕಂಠಪೂರ್ತಿ ಕುಡಿದು ಬಂದು ಥಳಿಸಿದ್ದೂ ಅಲ್ಲದೇ ಅದಾಗಲೇ ಒಂದು ಮದೆಯಾಗಿದ್ದ ವಿಷಯವನ್ನೂ ಮುಚ್ಚಿಟ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 29ರಂದು ಭರತ್ ಎಂಬಾತನನ್ನು ವಿವಾಹವಾಗಿದ್ದ ಯುವತಿ, ಇದೀಗ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಫಸ್ಟ್ ನೈಟ್ ದಿನವೇ ಕುಡಿದು ಬಂದ ಪತಿಯನ್ನು ಕಂಡು ಶಾಕ್ ಆದ ಯುವತಿ ಫಸ್ಟ್ …

Read More »

ರೆಡ್ಡಿ ಬ್ರದರ್ಸ್ ಮತ್ತು ರಾಮುಲು ನಡುವೆ ಬಿರುಕು

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿ ರೆಡ್ಡಿಗಳ ಮೂಲಕ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಾಗಿತ್ತು. ಆದರೆ ದಿನೇ ದಿನೇ ರೆಡ್ಡಿಗಳ ಪಾರುಪತ್ಯ ಜಿಲ್ಲೆಯಲ್ಲಿ ಕಡಿಮೆಯಾದಂತೆ ಕಾಣಿಸುತ್ತಿದೆ. ಅದರಲ್ಲೂ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗವಾದ ಮೇಲಂತೂ ಈ ಸಂಶಯ ರಾಜಕೀಯ ವಲಯದಲ್ಲಿ ಮತ್ತಷ್ಟು ಜೋರಾಗಿದೆ. ಇದೆಲ್ಲದರ ನಡುವೆಯೂ ಸಚಿವ ರಾಮುಲು, ರೆಡ್ಡಿ ಬ್ರದರ್ಸ್ ಜೊತೆಗಿದ್ದರೆ ಯಾರು ಏನು ಮಾಡಿಕೊಳ್ಳಲು ಆಗಲ್ಲ ಎಂಬ ಮಾತಿತ್ತು. ಆದರೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಬ್ರದರ್ಸ್ ಮತ್ತು ರಾಮುಲು ನಡುವೆ …

Read More »

ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಪ್ರಭಾಸ್‌ ಸಿನಿಮಾ

ಬೆಂಗಳೂರು: ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಸೆಟ್ಟೇರಲಿರುವ ಹೊಸ ಸಿನಿಮಾ ಘೋಷಣೆಯಾಗಿದ್ದು, ಟಾಲಿವುಡ್‌ ನಟ ಪ್ರಭಾಸ್‌ ಜೊತೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡುವುದಾಗಿ ಪ್ರಶಾಂತ್ ನೀಲ್ ಘೋಷಿಸಿದ್ದಾರೆ. ಈಗಾಗಲೇ ಕೆಜಿಎಫ್ ಚಾಪ್ಟರ್-1 ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದು, ಕೆಜಿಎಫ್-2 ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಭಾರತೀಯ ಸಿನಿರಂಗದಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸಿದೆ. ಇದೇ ವೇಳೆ ಕೆಜಿಎಫ್ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ …

Read More »

ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು

ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ …

Read More »

ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ

ಚಿಕ್ಕಮಗಳೂರು:ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ …

Read More »

ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಮೂಲ, ವಲಸಿಗ ಬಿಜೆಪಿಗರು ಎಂಬುದು ಇಲ್ಲ. ನಾವೆಲ್ಲರೂ ಒಂದೇ ಯಾಗಿದ್ದೇವೆ. ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಬೆಂಗಳೂರಿನ ಆನೇಕಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ರಾಜ್ಯದಲ್ಲಿ ಮೂಲ …

Read More »

ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ : ಮಹದಾಯಿ ವಿಚಾರದಲ್ಲಿ ಕಾನೂನು ಬದ್ಧವಾಗಿ ನಾವು ನಮ್ಮ ಸರ್ಕಾರ ತಯಾರಿದ್ದು, ನಮ್ಮ ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.     ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಅವರ ಹೇಳಿಕೆ ಕುರಿತು ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಗೋವಾದವರು ಯಾವುದೇ ರೂಪದಲ್ಲಿ ಬಂದರೂ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ. ಪಾಪ ಅವರಿಗೆ ಅನಿವಾರ್ಯವಿದೆ. …

Read More »

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.   ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು …

Read More »