Breaking News

ರಾಜ್ಯ

ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ: ಕೋನರೆಡ್ಡಿ

ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …

Read More »

ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …

Read More »

ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ : ಸತೀಶ್ ಜಾರಕಿಹೊಳಿಯ

ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …

Read More »

BJP ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ.

ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕು ತಗುಲಿದ್ದ ಅವರು 2 ಬಾರಿ ಗುಣಮುಖರಾಗಿ ಹೊರಬಂದಿದ್ದರು. ಆದರೆ ಆ ವೇಳೆ ದೇಹದ ಅನೇಕ ಅಂಗಾಂಗಗಳಿಗೆ ಡ್ಯಾಮೇಜ್ ಆಗಿತ್ತು. ಸಧ್ಯ ಅವರು ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ನಿಧನರಾದರು. ಯಮಕನಮರಡಿ ಸಮೀಪ ಕುರಣಿಯವರಾಗಿದ್ದ ಅವರು ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!

ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …

Read More »

ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …

Read More »

ಹೊಸ ಕಾರ ಬರ್ತಿದೆ ಇದು ಹಾರುತ್ತೆ ಮತ್ತೆ ಓಡುತ್ತೆ ರಸ್ತೆ ಮೇಲೆ..

ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್‌ಲ್ಯಾಂಡ್‌ನ ಪಾಲ್‌ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ಈ ವರ್ಷದ ಫೆಬ್ರವರಿಯಿಂದ ವೇಗ, ಬ್ರೇಕ್‌, ಎಮಿಷನ್‌, ಶಬ್ಧಮಾಲಿನ್ಯ ಸೇರಿದಂತೆ ವಿವಿಧ ಡ್ರೈವಿಂಗ್‌ ಪರೀಕ್ಷೆಗಳನ್ನು ಕಾರು ಎದುರಿಸಿತ್ತು. ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮೈಕ್‌ ಸ್ಟೇಕಲನ್‌ಬರ್ಗ್‌ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆಗಳ ಜೊತೆ ಹಲವು ವರ್ಷಗಳ ಕಾಲ ಸಹಕಾರ ನೀಡಿ ನಾವು ಈ ಮೈಲಿಗಲ್ಲನ್ನು ಸೃಷ್ಟಿಸಿದ್ದೇವೆ. ನೆಲ ಮತ್ತು ಆಕಾಶದಲ್ಲಿ …

Read More »

ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು …

Read More »