Breaking News

ರಾಜ್ಯ

ನಾಳೆ ಬೈಲೆಕ್ಷನ್ ರಿಸಲ್ಟ್ :ಗೆಲ್ಲೋರು ಯಾರು..?ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರು

ತುಮಕೂರು, ನ.9- ಶಿರಾ ಉಪ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಡೆಯಲಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಫಲಿತಾಂಶ ಬಹುತೇಕ 11ರಿಂದ 12 ಗಂಟೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾದ ಕೋನಾ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಾಳೆ ಶಿರಾ ಕೋಟೆಯ ಮೇಲೆ …

Read More »

ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು  ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,

ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು,  ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ  ನ.10ರಂದು  ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ. ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, …

Read More »

ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ

ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ …

Read More »

ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ

ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು. ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ …

Read More »

ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ …

Read More »

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು:

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.

Read More »

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …

Read More »

ಮಹಾ ರಾಜಕೀಯ ರಮೇಶ್‌ ಜಾರಕಿಹೊಳಿ!

ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್‌ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್‌ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್‌ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್‌ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …

Read More »

12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ.

ಕಲಬುರ್ಗಿ : ಮಹಿಳೆಯೊಬ್ಬರು ಆಧಾರ್ ಕಾರ್ಡ್ ಗಾಗಿ ಅಲೆದಾಡುತ್ತಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ಈ ಮಹಿಳೆ ಆಧಾರ್ ಕಾರ್ಡ್ ಗಾಗಿ ಇದುವರೆಗೂ ಬರೋಬ್ಬರಿ 12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಆಧಾರ್ ಗಾಗಿ ಅಲೆದಾಡುತ್ತಲೇ ಇರುವ ಮಹಿಳೆ, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಯಾಗಲು ಪರದಾಡುತ್ತಿದ್ದಾರೆ. ಹೀಗೆ ಪದೇ ಪದೇ ರಿಜೆಕ್ಟ್ ಆಗಲು ಕಾರಣವೇನೆಂದು ಪತ್ತೆ ಹಚ್ಚಿದಾಗ ಅಚ್ಚರಿ …

Read More »

ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.  ‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Read More »