Breaking News

ರಾಜ್ಯ

ಡಿಕೆ ಶಿವಕುಮಾರ್ ಆರ್‍ಸಿಬಿ ಛತ್ರಿ ಹಿಡಿದ ಮೇಲೆ ಗೆಲುವಿನ ಲಕ್ಷ್ಮೀ ಆರ್‌ಸಿಬಿಗೆ ಒಲಿಯಿತು ಎಂದು ಬರೆದುಕೊಂಡಿದ್ದಾರೆ

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತುಂತುರು ಮಳೆಯಿಂದ ರಕ್ಷಣೆ ಪಡೆಯಲು ಹಿಡಿದಿದ್ದ ಆರ್‌ಸಿಬಿ ಛತ್ರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಶಿರಾ ಉಪ ಚುನಾವಣೆಯ ಪ್ರಚಾರದಲ್ಲಿ ಡಿಕೆ ಶಿವಕುಮಾರ್ ಅವರು ಬ್ಯುಸಿಯಾಗಿದ್ದು, ಈ ವೇಳೆ ಶಿರಾದ ದೊಡ್ಡ ಆಲದ ಮರ ಬಳಿ ಪ್ರಚಾರ ಕಾರ್ಯದಲ್ಲಿದ್ದ ಸಂದರ್ಭದಲ್ಲಿ ದಿಢೀರ್ ಎಂದು ತುಂತುರು ಮಳೆ ಆರಂಭವಾಗಿತ್ತು. ಮಳೆ ಆರಂಭವಾಗುತ್ತಿದಂತೆ ಪ್ರಚಾರ ವಾಹನದಲ್ಲಿದ್ದ ಕಾರ್ಯಕರ್ತರು …

Read More »

ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್

ಬೆಂಗಳೂರು: ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ನಳಿನ್ ಅವರನ್ನು ಸಿದ್ದರಾಮಯ್ಯ ಕಾಡುಮನುಷ್ಯನಿಗೆ ಹೊಲಿಕೆ ಮಾಡಿದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯನ ಮೇಲೆ ಮುಗಿಬಿದ್ದಿದ್ದಾರೆ. ಈಗ ಸಿಟಿ ರವಿಯವರೂ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾ

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದು, ಕೋರಮಂಗಲ ಸೇರಿದಂತೆ ಹಲವೆಡೆಗಳಲ್ಲಿ ರಸ್ತೆ ಜಲಾವೃತವಾಗಿದ್ದು, ಅಂಡರ್ ಪಾಸ್‍ಗಳು ತುಂಬಿ ತುಳುಕುತ್ತಿದ್ದವು. ರಾತ್ರಿ ಬಿಟ್ಟು ಬಿಡದೆ ಮಳೆ ಸುರಿದಿದ್ದು, ಮೆಜೆಸ್ಟಿಕ್, ಕೋರಮಂಗಲ, ಯಶವಂತಪುರ, ನಂದಿನಿ ಲೇಔಟ್, ಬಸವನಗುಡಿ, ಕೆ.ಆರ್. ಮಾರ್ಕೆಟ್ ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣ ಅಬ್ಬರಿಸಿದ್ದಾನೆ. ರಾತ್ರಿ ಒಂದೇ ಸಮ ಸುರಿದ ಮಳೆಗೆ ಕೊರಮಂಗಲ ರಸ್ತೆ ಜಲಾವೃತವಾಗಿತ್ತು. ಗುರುವಾರ ಸಂಜೆಯಿಂದಲೇ ಆರಂಭವಾದ ತುಂತುರು ಮಳೆ …

Read More »

ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..

ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.   ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …

Read More »

ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ.

ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, …

Read More »

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಒಟ್ಟು 12 ಲಕ್ಷ ರೂ. ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಗ್ರಾಮಸ್ಥರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ …

Read More »

ಇಬ್ಬರು ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ

ಬೆಂಗಳೂರು, ಅ.22- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಪತ್ತೆಹಚ್ಚಿದ್ದಾರೆ. ಬಾಗಲಕೋಟೆ ಜಿ.ಪಂ. ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಇಂದು ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಆಸ್ತಿ ಪತ್ತೆ …

Read More »

ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ ಬಿಡೋಣ:H,D.D.

ತುಮಕೂರು/ಶಿರಾ, ಅ.22- ಶಿರಾ ಉಪ ಚುನಾವಣೆ ಮುಗಿಯುವವರೆಗೂ ನಾನು ಇಲ್ಲೇ ಇದ್ದು ಹೋರಾಟ ಮಾಡುತ್ತೇನೆ. ಕೆ.ಆರ್.ಪೇಟೆ ಮಾದರಿಯಲ್ಲಿ ಏನಾದರೂ ಚುನಾವಣೆ ನಡೆಸಲು ಹೋದರೆ ನಾನು ರಸ್ತೆಗೆ ಇಳಿದು ಉಗ್ರ ಪ್ರತಿಭಟನೆ ನಡೆಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ.ಏನಾದರೂ ನನ್ನ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ಸಿಡಿದೇಳುತ್ತೇನೆ. ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ …

Read More »

ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ

ಬೆಂಗಳೂರು: ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಕುರಿತು  ಟ್ವೀಟ್​ ಮಾಡಿರುವ ದಿನೇಶ್ ಗುಂಡೂರಾವ್,  ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ⁦ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ …

Read More »

ಯತ್ನಾಳ್ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಅಮಾನತು ಇಲ್ಲವೇ ಉಚ್ಛಾಟನೆ

ಬೆಂಗಳೂರು,ಅ.22-ಪಕ್ಷದ ನಿಯುಮ ಉಲ್ಲಂಘಿಸಿ ನಾಯಕರ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟುಮಾಡುತ್ತಿರುವ ಮಾಜಿ ಸಚಿವ ಹಾಗೂ ವಿಜಪುರದ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬಿಜೆಪಿ ಶಿಸ್ತು ಕ್ರಮ ಜರಗಿಸಲು ಮುಂದಾಗಿದೆ. ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಳಿದಿರುವವರು ಇದೇ ಹಾದಿ ತುಳಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಘಟಕ, ಒಂದೆರೆಡು ದಿನದಲ್ಲಿ ಅವರ ಹೇಳಿಕೆ ಕುರಿತು ನೋಟಿಸ್ ಜಾರಿ ಮಾಡಲು …

Read More »