ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ. ಸರ್ಫರಾಜ್ ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು ನಾಯಕ(40), ಅಕ್ಷಯ ಸಾಳುಂಕೆ(24), ಅರ್ಜುನ ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು. ಮಾರ್ಕೇಟ್ …
Read More »ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್
ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು. ಈ ಹೇಳಿಕೆಗೆ ಖಾರವಾಗಿ ಫೇಸ್ಬುಕ್ ಮೂಲಕ ಯತ್ನಾಳ್ ಬೆಂಬಲಿಗ ಎನ್ನಲಾದ …
Read More »ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ವು 750, 250 ಕೆ.ಜಿ.ತೂಕದ ಮೀನುಗಳು- ಕ್ರೇನ್ ಬಳಸಿ ಸಾಗಣೆ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಮೀನುಗಳು ಬಲೆಗೆ ಬಿದ್ದಿವೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳು ಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದಿರುವ ಈ ಮೀನುಗಳನ್ನು ಬಂದರಿನಲ್ಲಿ ಕ್ರೇನ್ ಮೂಲಕ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ …
Read More »ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …
Read More »ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.
Read More »ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ
ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »ಸಿಡಿಲು ಅಬ್ಬರದ ಮಳೆಯಲ್ಲಿ ರೈತರ ಹಿತಾಸಕ್ತಿ ಗೋಸ್ಕರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೃಷಿಂಗ ಪ್ರಾರಂಭ…
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಇಂದಿನಿಂದ ಪ್ರಾರಂಭ ವಾಗಿದೆ ಇಂದು ಕಾರ್ಖಾನೆ ಸಿಬ್ಬಂದಿಗಳು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವ ದಲ್ಲಿ ಈ ಕಾರ್ಖಾನೆ ಇಂದಿನಿಂದ ಪ್ರಾರಂಭ ವಾಗಿದೆ. ಒಂದು ಕಡೆ ಸಿಡಿಲು ಅಬ್ಬರಾದ ಮಳೆ,ನಮ್ಮ ಉತ್ತರ ಕರ್ನಾಟಕದ ತುಂಬಾ ಎಲ್ಲ ಕಡೆ ಮಳೆ ಪ್ರಾರಂಭ ವಾಗಿದೆ. ಆದರೂ ರೈತರ ಹಿತಾಸಕ್ತಿ ಗೋಸ್ಕರ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂಥ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆ ಯಲ್ಲಿ …
Read More »ಉತ್ತರ ಕರ್ನಾಟಕ ನೆರೆ ಪ್ರದೇಶದಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ
ಕಲಬುರಗಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ನೆರೆ, ಪ್ರವಾಹ ಪೀಡಿತ ಪ್ರದೇಶಗಳಾದಂತ ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ಹಾನಿಯ ಬಗ್ಗೆ ಮಾಹಿತಿ ಪಡೆದು, ಹೆಚ್ಚಿನ …
Read More »
Laxmi News 24×7