Breaking News

ರಾಜ್ಯ

ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ.

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ …

Read More »

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …

Read More »

ಧಾರವಾಡದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ.

ಧಾರವಾಡ: ಕೊರೊನಾ ಹಿನ್ನೆಲೆ ನಗರದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ. ಈ ಮೂಲಕ 117 ವರ್ಷಗಳ ಜಾತ್ರೆಗೆ ಈ ವರ್ಷ ಬ್ರೇಕ್ ಬಿದ್ದಂತಾಗಿದೆ. ಕಳೆದ 117 ವರ್ಷಗಳಿಂದ ಧಾರವಾಡ ನಗರದ ರವಿವಾರ ಪೇಟೆಯಲ್ಲಿರುವ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪಾರಂಪರಿಕವಾಗಿ ಜಾತ್ರೆಯನ್ನು ಆಚರಿಸುತ್ತ ಬಂದಿದ್ದರು. ಅತ್ಯಂತ ವಿಜ್ರಂಭಣೆಯಿಂದ ಮಾಡಲಾಗುವ ದಸರಾ ಹಬ್ಬದ ವೇಳೆಯೇ ಲಕ್ಷ್ಮಿ ನಾರಾಯಣ ಜಾತ್ರೆಯನ್ನು ಮಾಡುವ ಈ ಸಂಪ್ರದಾಯಕ್ಕೆ ಕೊರೊನಾದಿಂದಾ ತಡೆಯಾಗಿದೆ. ಪ್ರತಿ …

Read More »

ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ …

Read More »

ಅಥಣಿ ತಾಲ್ಲೂಕಿನ ಸತ್ತಿ ಹೊರವಲಯದಲ್ಲಿ ಅಬಕಾರಿ ದಾಳಿ 1.31 ಕೆ ಜಿ ಗಾಂಜಾ ವಶ ಒಬ್ಬನ ಬಂಧನ

    ಅಥಣಿ ತಾಲೂಕಿನ ಸತ್ತಿ ಗ್ರಾಮದ ದೇವಪ್ಪ ಈರಪ್ಪ ರುದ್ರಗೌಡರ ಇವರ ಸ್ವಂತ   ಜಮೀನಿನಲ್ಲಿ ದಿನಾಂಕ : 17-10-2020 ರಂದು ಸ್ವಂತ ಲಾಭಕ್ಕಾಗಿ ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದ ಬಗ್ಗೆ ಬಂದ ಖಚಿತ ಮಾಹಿತಿ  ಮೇರೆಗೆ ಡಾ : ವೈ ಮಂಜುನಾಥ ಅಬಕಾರಿ ಜಂಟಿ ಆಯುಕ್ತರು , ಬೆಳಗಾವಿ ವಿಭಾಗ ರವರ ಮಾರ್ಗದರ್ಶನದಲ್ಲಿ ಕೆ ಅರುಣಕುಮಾರ ಅಬಕಾರಿ ಉಪ ಆಯುಕ್ತರು ಬೆಳಗಾವಿ ಉತ್ತರ ಜಿಲ್ಲೆ …

Read More »

ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.

ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಈ ಸೀಸನ್​ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್​ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಈ ಸೀಸನ್​ನಲ್ಲಿ …

Read More »

ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ.

ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಂದ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲಾಕ್‌ಡೌನ್‌ ನಂತರ ಇದೇ ಮೊದಲ ಬಾರಿಗೆ ಸಿಎಂ‌ ತವರು ಕ್ಷೇತ್ರಕ್ಕೆ ತೆರಳಿದ್ದಾರೆ. ಇನ್ನು ಸಿಎಂ ಪ್ರವಾಸ ಕೈಗೊಂಡಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. …

Read More »

ಯಲ್ಲಮ್ಮನ ದರ್ಶನಕ್ಕೆ200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ …

Read More »

ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ

ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …

Read More »