ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …
Read More »ಅಕ್ಟೋಬರ್‌ನಲ್ಲಿ ಥಿಯೇಟರ್ ಓಪನ್ ಆಗುತ್ತಾ?
ನವದೆಹಲಿ: ಕೊರೊನಾ ವಿಜೃಂಭಣೆ ನಡುವೆಯೂ ಹಳಿ ತಪ್ಪಿರುವ ಆರ್ಥಿಕ ಸ್ಥಿತಿ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ, ಅನ್‍ಲಾಕ್ ರೂಪದಲ್ಲಿ ಪ್ರತಿ ತಿಂಗಳು ಶ್ರಮಿಸುತ್ತಿದೆ. ಈಗಾಗಲೇ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಅಕ್ಟೋಬರ್ 1ರಿಂದ ಅನ್‍ಲಾಕ್-05 ಜಾರಿ ಆಗಲಿದೆ. ಅನ್‍ಲಾಕ್-5 ಜಾರಿ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ಮಾರ್ಗಸೂಚಿ ಪ್ರಕಟಿಸಲಿದೆ. ಸಿನಿಮಾ ಹಾಲ್, ಈಜುಕೊಳ, ಎಂಟರ್ ಟೈನ್ಮೆಂಟ್ ಪಾರ್ಕ್, ಪ್ರಾಥಮಿಕ ಶಾಲೆ ತೆರೆಯಲು ಅನುಮತಿ ನೀಡುತ್ತಾ? ಅಥವಾ ದಸರಾ-ದೀಪಾವಳಿ ಸನಿಹದಲ್ಲಿರುವ …
Read More »ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು
ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …
Read More »10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …
Read More »ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ
ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …
Read More »ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …
Read More »ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ
ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …
Read More »ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್
ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ …
Read More »ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!
ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …
Read More »ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ಅವರ ರೈತ ವಿರೋಧಿ ಮನೋಭಾವ ಹೊರಬಂದಿದೆ
ಬೆಂಗಳೂರು: ಸರ್ಕಾರದ ಕೃಷಿ ಮಸೂದೆಗಳು ರೈತ ವಿರೋಧಿಯಾಗಿವೆ. ಭೂ ಸುಧಾರಣೆ ಮತ್ತು ಎಪಿಎಂಎಸಿ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರಲಿಲ್ಲ. ಇವನ್ನ ಜಾರಿಗೆ ತರುವ ಯಾವ ನೈತಿಕತೆಯೂ ಅದಕ್ಕೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣ ಆಗುತ್ತದೆ ಎಂಬ ಭರವಸೆ ಸರ್ಕಾರಕ್ಕೆ ಇದ್ದರೆ ಮೊದಲು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ …
Read More »
Laxmi News 24×7