ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಾವು ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸದ್ಯ ದಂಧೆ ಬಗ್ಗೆ …
Read More »ಮೂವರು ಸ್ಟಾರ್ ನಟರಿಗೆ ಢವ ಢವ!ಮೂವರು ನಟರು ಪದೇ ಪದೇ ಶ್ರೀಲಂಕಾದ ಕ್ಯಾಸಿನೋಗೆ ಭೇಟಿ ನೀಡಿದ್ದಾರೆ.
ಬೆಂಗಳೂರು: ಸ್ಯಾಂಡಲ್‍ವುಡ್ ನಶೆ ನಂಟಿನ ಘಾಟು ದಿನೇದಿನೇ ಹೆಚ್ಚಾಗ್ತಾ ಇದೆ. ಸಿಸಿಬಿ ವಿಚಾರಣೆ ವೇಳೆ ನಟಿಯರಾದ ಸಂಜನಾ ಮತ್ತು ನಟಿ ರಾಗಿಣಿ ದೊಡ್ಡದೊಡ್ಡವರ ಹೆಸರು, ರಾಜಕಾರಣಿಗಳ ಮಕ್ಕಳ ಹೆಸರು, ವಿವಿಐಪಿಗಳ ಹೆಸರುಗಳನ್ನ ಹೇಳಿದ್ದಾರೆ ಎನ್ನಲಾಗಿದೆ. ಇದೀಗ ಚಂದನವನದ ಮೂರು ಸ್ಟಾರ್ ನಟರು ಡ್ರಗ್ಸ್ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಒಂದ್ಕಡೆ ವಿಚಾರಣೆ ಎದುರಿಸುತ್ತಿದ್ದಾರೆ. ಇªಬ್ಬರ ಹೇಳಿಕೆಯಿಂದ ಸ್ಯಾಂಡಲ್‍ವುಡ್‍ನ …
Read More »ಸಂಜನಾ ಅವರೊಂದಿಗೆ ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಅವರೊಂದಿಗೆ ನಾನು ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸವಾಲು ಎಸೆದಿದ್ದಾರೆ. ನಟಿ ಸಂಜನಾ ಅವರ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳ ಕುರಿತು ಕೊನೆಗೂ ಮೌನ ಮುರಿದ ಜಮೀರ್ ಅವರು, ಸಂಜನಾ ಹಾಗೂ ನಾನು ಕೊಲಂಬೋಗೆ ಹೋಗಿರುವ ಬಗ್ಗೆ ಖುದ್ದು ಸಿಎಂ ತನಿಖೆ ಮಾಡಲಿ ಎಂದು …
Read More »ನಾನು ಪ್ರತಿನಿತ್ಯ ಗೋಮೂತ್ರ ಸೇವಿಸುತ್ತೇನೆ: ಅಕ್ಷಯ್ ಕುಮಾರ್
ಮುಂಬೈ: ನಾನು ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಹೇಳಿದ್ದಾರೆ.ವೈಲ್ಡ್ ಮ್ಯಾನ್ ಎಂದೇ ಖ್ಯಾತರಾಗಿರುವ ಬಿಯರ್ ಗ್ರಿಲ್ಸ್ ಹಾಗೂ ಹುಮಾ ಖುರೇಶಿ ನಡೆಸಿದ ಇನ್‍ಸ್ಟಾಗ್ರಾಮ್ ಲೈವ್‍ನಲ್ಲಿ ಭಾಗವಹಿಸಿದ ವೇಳೆ ಸ್ವತಃ ಅಕ್ಷಯ್ ಕುಮಾರ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆಯುರ್ವೇದ ಕಾರಣಗಳಿಂದಾಗಿ ಕಾಡಿನಲ್ಲಿ ಸ್ಟಂಟ್ ಮಾಡುವುದು ನನಗೆ ಸಮಸ್ಯೆ ಆಗಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ಪ್ರತಿ ನಿತ್ಯ ಗೋಮೂತ್ರವನ್ನು ಸೇವಿಸುತ್ತೇನೆ …
Read More »ಮೈಸೂರಿನ ಪ್ರತಿಷ್ಠಿತ ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ: ಮುತಾಲಿಕ್
ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ. ಆದ್ರೆ ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಹೇಳಿದರು. ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್‍ಗಳ …
Read More »ಇಡಿ ಅಧಿಕಾರಿಗಳ ಶಾಕ್ಆನಂದ್ ಅಪ್ಪುಗೋಳಆಸ್ತಿ ವಶಕ್ಕೆ
ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …
Read More »ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನ ಬಾಲಕಿಯೋರ್ವಳು ಭೇಟಿ ಮಾಡಿ ಬೇಗ ಶಾಲೆ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ
ಧಾರವಾಡ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನ ಬಾಲಕಿಯೋರ್ವಳು ಭೇಟಿ ಮಾಡಿ ಬೇಗ ಶಾಲೆ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ ಧಾರವಾಡದ ನಿಸರ್ಗ ಲೇಔಟ್‍ಗೆ ಆಗಮಿಸಿದ್ದ ಸಚಿವರಿಗೆ ಸೈಕಲ್‍ನಲ್ಲಿ ಬಂದು ಭೇಟಿ ಮಾಡಿದ ಬಾಲಕಿ ಶ್ರದ್ಧಾ, ಶಾಲೆ ಬೇಗ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ. ಈ ವೇಳೆ ಸಚಿವರು ನಿನ್ನ ನೋಡಿ ನಂಗೆ ಖುಷಿಯಾಯ್ತು ಎಂದರು ನಮಗೆ ಎಲ್ಲಿಯೂ ಶ್ರದ್ಧೆ ಸಿಗುವುದಿಲ್ಲ. ಆದರೆ ಶ್ರದ್ಧಾ ಭೇಟಿಯಾಗಿ ಖುಷಿಯಾದೆ. ಶಾಲೆ ಆರಂಭಿಸಿ ಕೊರೊನಾವನ್ನೇ …
Read More »ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ
ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …
Read More »ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ
ರಾಯಬಾಗ : ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ ಮೂರ್ನಾಲ್ಕು ವರ್ಷಗಳಿಂದ ಶಾಲೆ ಶೀತಿಲಗೊಂಡಿದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಕ್ಯಾರೆ ಎನ್ನದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶೀತಲ ಗೊಂಡಿದ್ದು ಸುಮಾರು ಮೂರ್ನಾಲ್ಕು ವರ್ಷಗಳಿಂದ ಹಂಚುಗಳು ಒಡೆದ …
Read More »
Laxmi News 24×7