ಹುಬ್ಬಳ್ಳಿ; ಆಗಸ್ಟ್ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …
Read More »ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಕಂಗನಾ ರಾಣಾವತ್ ಅವರು, ಅನಧಿಕೃತವಾಗಿ ಕಚೇರಿ ನಿರ್ಮಿಸಿದ್ದಾರೆ ಎಂದು ಬೃಹತ್ ಮುಂಬೈ ಕಾರ್ಪೊರೇಷನ್ ನೋಟಿಸ್ ನೀಡಿತ್ತು. ಆ ಬೆನ್ನಲ್ಲೇ ಇಂದು ಕಚೇರಿ ನೆಲಸಮಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸದ್ಯ ಈ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದ್ದು, ಕಂಗನಾ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಬಿಎಂಸಿಗೆ ಹೇಳಿದೆ. ಈ ಜಾಗದಲ್ಲಿ ಅನಧಿಕೃತವಾಗಿ ಕಚೇರಿ ನಿರ್ಮಿಸಲಾಗಿದೆ ಎಂದು …
Read More »ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …
Read More »ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ
ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‍ಐ …
Read More »ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ
ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …
Read More »ನಟಿ ಕಂಗನಾ ಮುಂಬೈ ಭೇಟಿ : ಭಾರೀ ಬಿಗಿ ಭದ್ರತೆ………
ಮುಂಬೈ, ಸೆ.9-ವಿವಾದಿತ ಬಾಲಿವುಡ್ ಬೆಡಗಿ ಕಂಗನಾ ರನೌತ್ ಮುಂಬೈ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣ ಸೇರಿದಂತೆ ಅವರು ತೆರಳುವ ಮತ್ತು ವಾಸ್ತವ ಹೂಡುವ ಸ್ಥಳಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಪ್ರಕರಣದ ತನಿಖೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡಿರುವ ಕಂಗನಾ ಶಿವಸೇನೆ ಕೆಂಗಣ್ಣಿಗೆ ಗುರಿಯಾ ಮುಂಬೈನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಮುಂಬೈ …
Read More »ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್‍ಎಸ್‍ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ …
Read More »ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ
ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು. ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು …
Read More »ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ
ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …
Read More »ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ …
Read More »
Laxmi News 24×7