ಬೆಂಗಳೂರು, ಜೂನ್ 01: ವೈರಸ್ ಜೊತೆ ಬದುಕಲು ಕಲಿಯಬೇಕು ಎಂದು ಹೇಳುವ ವೈದ್ಯರ ಮಾತು ನಿಜವಾಗುತ್ತಿದೆ. ಎಡ್ಮೂರು ವರ್ಷಗಳ ಹಿಂದೆ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕೊರೊನಾ ವೈರಸ್ (Covid) ಮತ್ತೆ ಬಂದಿದೆ. ವೈರಲ್ ಫೀವರ್ ಹಾಗೂ ಸಾಂಕ್ರಾಮಿಕ ಖಾಯಿಲೆಗಳ ನಡುವೆ ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಕೊರೊನಾ ರೂಪಾಂತರ ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ವೈರಸ್ ರಾಜ್ಯಕ್ಕೆ ವಕ್ಕರಿಸಿದೆ. ಈ ನಡುವೆ ರಾಜ್ಯದಲ್ಲಿ ಜನವರಿಯಿಂದ ಈವರೆಗೆ 4536 ಸಾರಿ (SARI) ಹಾಗೂ …
Read More »‘ನನ್ನ ಸಿನಿಮಾ ತಡೆಯುವ ಮೂರ್ಖತನ ಬೇಡ’; ತಮಿಳು ನಟ ಧನುಷ್ ಎಚ್ಚರಿಸಿದ್ದು ಯಾರಿಗೆ?
ಕಾಲಿವುಡ್ ಸ್ಟಾರ್ ಹೀರೋ ಧನುಷ್ (Dhanush) ಅವರ ಇತ್ತೀಚಿನ ಸಿನಿಮಾ ‘ಕುಬೇರ’ ರಿಲೀಸ್ಗೆ ರೆಡಿ ಇದೆ. ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ಈ ಚಿತ್ರದಲ್ಲಿ ಟಾಲಿವುಡ್ ಹೀರೋ ಅಕ್ಕಿನೇನಿ ನಾಗಾರ್ಜುನ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸುತ್ತ ಈಗಾಗಲೇ ಒಳ್ಳೆಯ ಹೈಪ್ ಇದೆ. ಭಾರಿ ನಿರೀಕ್ಷೆಗಳ ನಡುವೆ ತಯಾರಾಗಿರುವ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ಬಗ್ಗೆ ಕೆಲವರು …
Read More »ಕಮಲ್ ಹಾಸನ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ನಟ ಕಿಶೋರ್
ಮೈಸೂರು: ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನು ಭಾಷೆಯಾಗಿ ನೋಡಬೇಕಿದೆ ಎಂದು ಹೇಳುವ ಮೂಲಕ ಕಮಲ್ ಹಾಸನ್ ಹೇಳಿಕೆಯನ್ನು ನಟ ಕಿಶೋರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು. ತುಂಬಾ ತಿಳಿದಂತಹ ಮನುಷ್ಯ ಏನೂ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು …
Read More »ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ಪ್ರತಿ ತಿಂಗಳಿನಂತೆ ಇಂದೂ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆಗೊಂಡಿದ್ದು, ವಾಣಿಜ್ಯ ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ. ದೇಶಾದ್ಯಂತ ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು, 19 ಕೆ.ಜಿ ವಾಣಿಜ್ಯ ಸಿಲಿಂಡರ್ ದರ ನವದೆಹಲಿಯಲ್ಲಿ 1723 ರೂ. ಆಗಿದೆ. ಗೃಹಬಳಕೆ ಸಿಲಿಂಡರ್ ದರ ಯಾವುದೇ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಗೃಹಬಳಕೆ ಸಿಲಿಂಡರ್ ದರ ಯಥಾವತ್ತಾಗಿ ಮುಂದುವರೆಯಲಿದೆ. ಕೆಲವೇ ದಿನಗಳ ಹಿಂದಷ್ಟೇ ಹೋಟೆಲ್ ಗಳು ಸಿಲಿಂಡರ್ ಮತ್ತು ಹಾಲಿನ …
Read More »ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025
ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …
Read More »ಬೆಳಗಾವಿಯಲ್ಲಿ ಮತ್ತೋರ್ವ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಅಪ್ರಾಪ್ತರು ಸೇರಿ ಐವರನ್ನು ಇಲ್ಲಿನ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಬೆಳಗಾವಿಯಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವಿದು. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಿರಾತಕರು, ಬಳಿಕ ಮತ್ತೆ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ನಿನ್ನೆ ಬೆಳಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ …
Read More »ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಜೂನ್ 13ರಿಂದ ಪಾಠ ನಿಲ್ಲಿಸಿ ಹೋರಾಟದ ಎಚ್ಚರಿಕೆ –
ಮೈಸೂರು: ರಾಜ್ಯ ಸರ್ಕಾರ ಕಳೆದ ಹಲವು ವರ್ಷಗಳಿಂದ ಸತತವಾಗಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ಸೌಲಭ್ಯವನ್ನೂ ನೀಡದೇ ವಂಚಿಸುತ್ತಿದೆ. ಹೀಗಾಗಿ ಜೂನ್ 13ರಿಂದ ಅತಿಥಿ ಶಿಕ್ಷಕರು ಶಾಲೆ ತೊರೆದು ಪ್ರತಿಭಟಿಸಲಿದ್ದಾರೆ ಎಂದು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಖಜಾಂಚಿ ಹೆಚ್.ಎಸ್.ಸೌಮ್ಯ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಾಲಾ ಶಿಕ್ಷಣ ಮತ್ತು ಪ್ರಾಥಮಿಕ ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇವರು ಅತಿಥಿ …
Read More »ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು
ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಿಂದ ಬಿದ್ದ ಕೂಡಲೇ ಕ್ಯಾಂಟರ್ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …
Read More »ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:
ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …
Read More »ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ.
ಚಿಕ್ಕಬಳ್ಳಾಪುರ : ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಶವ ಸಿಕ್ಕಿದೆ. ಮೃತ ಮಹಿಳೆ ಜಂಗಮಕೋಟೆ ಮೂಲದ ರೇಣುಕಾ (30) ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್ಐ ವೇಣುಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಧೈರ್ಯ ಮಾಡಿ ಶವ …
Read More »
Laxmi News 24×7