Breaking News

ರಾಜ್ಯ

ಬಿಗ್ ನ್ಯೂಸ್ : ಸೋನಿಯಾ ರಾಜೀನಾಮೆ ಮತ್ತು ರಾಹುಲ್ ಯಡವಟ್ಟಿನಿಂದ ಅಲ್ಲಾಡುತ್ತಿದೆ ಕಾಂಗ್ರೆಸ್ ಬುಡ….!

ಬೆಂಗಳೂರು, ಆ.24- ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ಸಾರಥ್ಯವನ್ನು ತ್ಯಜಿಸಿದ ಬೆನ್ನಲ್ಲೇ ಪಕ್ಷದಲ್ಲಿ ಹಿರಿಯ ನಾಯಕರ ಬಗ್ಗೆ ರಾಹುಲ್‍ಗಾಂ ನೀಡಿದ ಹೇಳಿಕೆ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಾಯಕತ್ವ ಬದಲಾವಣೆ ಹಾಗೂ ಗಾಂ ಕುಟುಂಬೇತರರಿಗೆ ನಾಯಕತ್ವ ನೀಡಬೇಕೆಂದು ಕಾಂಗ್ರೆಸ್‍ನ 23 ಹಿರಿಯ ಧುರೀಣರು ಬರೆದಿರುವ ಪತ್ರ ಕುರಿತು ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್‍ಗಾಂಧಿ ನೀಡಿದ ಹೇಳಿಕೆ ಹಿರಿಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿರುವುದರ ಜತೆಗೆ 130 ವರ್ಷಗಳ ಇತಿಹಾಸದ ಕಾಂಗ್ರೆಸ್‍ನಲ್ಲಿ …

Read More »

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ

ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ …

Read More »

ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಶಾಸಕ ಮಹೇಶ ಕುಮಟಳ್ಳಿ ಭರವಸೆ

ಅಥಣಿ:   ತಾಂತ್ರಿಕ ದೋಷದಿಂದಾಗಿ ಕೆಲವು ಪ್ರವಾಹ ಸಂತ್ರಸ್ತರಿಗೆ  ಪರಿಹಾರ ವಿತರಣೆ ವಿಳಂಬವಾಗಿದೆ.  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಾಗೂ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ  ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಎಂದು ಶಾಸಕ ಮಹೇಶ ಕುಮಟಳ್ಳಿ   ಭರವಸೆ ನೀಡಿದ್ದಾರೆ.  ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಬಾರ್ಡ25 ರಲ್ಲಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲಲೆ ನೀಡಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದಲ್ಲಿ …

Read More »

15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಯತ್ನದ ವೇಳೆ ಮಾಜಿ …

Read More »

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …

Read More »

ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ

ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …

Read More »

ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್‌ಡೌನ್‌ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್‌ಡೌನ್‌ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್‌ಡೌನ್‌ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …

Read More »

ರಾಜ್ಯದಲ್ಲಿ ಕಡಿಮೆಯಾಯ್ತಾ ಸೋಂಕಿತರು, ಸಾವಿನ ಸಂಖ್ಯೆ..?

ಬೆಂಗಳೂರು : ರಾಜ್ಯದಲ್ಲಿ ಭಾನುವಾರ 5,938 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 68 ಮಂದಿ ಸಾವನ್ನಪ್ಪಿದ್ದಾರೆ. 4,996 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 2.77 ಲಕ್ಷಕ್ಕೆ ಏರಿಕೆಯಾದರೆ, ಸಾವನ್ನಪ್ಪಿದವರ ಸಂಖ್ಯೆ 4,683 ತಲುಪಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1.89 ಲಕ್ಷಕ್ಕೇರಿದೆ. ಉಳಿದ 83,551 ಮಂದಿ ಸಕ್ರಿಯ ಸೋಂಕಿತರಿಗೆ ನಾನಾ ಆಸ್ಪತ್ರೆಗಳು, ಕೋವಿಡ್‌ ನಿಗಾ ಕೇಂದ್ರ ಮತ್ತು ಗೃಹ ಆರೈಕೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ …

Read More »

ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್

ಅಥಣಿ  : ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …

Read More »

ನಾನು ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಲ್ಲ: ರಂಜನ್ ಗೊಗೊಯ್

ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಶನಿವಾರ ಬೆಳಗ್ಗೆ ಹೇಳಿದ್ದರು. ಈ ವಿಚಾರವಾಗಿ ಇಂದು ಮಾತನಾಡಿರುವ …

Read More »