ಗೋಕಾಕ: ಕೊರೊನಾ ಸೋಂಕಿನಿಂದ ಉಸಿರಾಟ ತೊಂದರೆ ಅನುಭವಿಸುತ್ತಿವವರಿಗೆ ಉಚಿತ ಆಕ್ಸಿಜನ್ ಸಿಲಿಂಡರ್ ವಿತರಿಸುವ ಮೂಲಕ ಸತೀಶ ಜಾರಕಿಹೊಳಿ ಫೌಂಡೇಶನ್ ಗಮನ ಸೆಳೆಯುತ್ತಿದೆ. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪುತ್ರ ರಾಹುಲ್, ಹಾಗೂ ಪುತ್ರಿ ಪ್ರಿಯಾಂಕಾ ಆಕ್ಸಿಜನ್ ಸಿಲಿಂಡರ್ ವಿತರಿಸಿದರು. ಕೋವಿಡ್ 19 ನಿಂದ ಬಳಲುತ್ತಿರುವ, ಕೆಲವರು ಹಣವಿಲ್ಲದೇ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರಿಗೆ ಗಿ ಸತೀಶ ಜಾರಕಿಹೊಳಿ ಪೌಂಡೇಶನ್ ಕೃತಕ …
Read More »ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು
ಬೆಳಗಾವಿ: ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ ಎಂಎಲ್ ಸಿ ವಿವೇಕರಾವ್ ಪಾಟೀಲ್, ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ ಒತ್ತಡ …
Read More »ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …
Read More »ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ
ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …
Read More »ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ
ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …
Read More »ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?
ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …
Read More »ಚತುರ್ಥಿ ಹಬ್ಬದಂದುಉಡುಪಿ ಡಿಸಿಐಬಿ ಪೊಲೀಸರು ಭರ್ಜರಿ ಬೇಟೆ
ಉಡುಪಿ: ಗಣೇಶ ಚತುರ್ಥಿ ಹಬ್ಬದಂದು ಕಡುಬು ತಿಂದು ವಿರಮಿಸದೆ, ಉಡುಪಿ ಡಿಸಿಐಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.ಉತ್ತರಪ್ರದೇಶ ರೆಜಿಸ್ಟ್ರೇಷನ್ ಲಾರಿಯಲ್ಲಿ ಕರಾವಳಿಗೆ ಬರುತ್ತಿದ್ದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉತ್ತರಪ್ರದೇಶ ರಿಜಿಸ್ಟ್ರೇಷನ್ ಲಾರಿ ಬಂದಿದೆ. ಕಂಟೇನರ್ ಲಾರಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಿದಿರಿನ ಕೋಲುಗಳು ಸಿಕ್ಕಿದೆ. ಕಂಟೇನರ್ ನಲ್ಲಿ ಬಿದಿರಾ ಅಂತ ಸಂಶಯಗೊಂಡ ಪೊಲೀಸರು …
Read More »ಹಬ್ಬದ ಸಂಭ್ರಮದ ಮಧ್ಯೆ ಊರಿನ ಹೊರಭಾಗದಲ್ಲಿ ಪತ್ತೆಯಾದ ಬ್ಯಾಗ್ ತೆರೆದ ಗ್ರಾಮಸ್ಥರಿಗೆ ಶಾಕ್!
ಕಲಬುರಗಿ: ಮಹಾಮಾರಿ ಕರೊನಾ ವೈರಸ್ ಭೀತಿಯ ನಡುವೆಯೂ ರಾಜ್ಯದೆಲ್ಲಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಸಮಯದಲ್ಲೇ ಕಲಬುರಗಿಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಕೋವಿಡ್ಗಿಂತಲೂ ಕ್ರೂರಿ ಎಂಬುದನ್ನು ನಿರೂಪಿಸಿದೆ. ಬಹುತೇಕರು ನಮಗೆ ಮಕ್ಕಳಾಗಿಲ್ಲವಲ್ಲ ಎಂದು ದಿನನಿತ್ಯ ಕೊರಗುತ್ತಿರುತ್ತಾರೆ. ಗಂಡಾಗಲಿ ಅಥವಾ ಹೆಣ್ಣಾಗಲಿ ನಮಗೊಂದು ಮಗು ಕರುಣಿಸಪ್ಪಾ ಎಂದು ದೇವರಲ್ಲಿ ಪ್ರಾರ್ಥಿಕೊಳ್ಳುವವರಿಗೇನು ಕಡಿಮೆಯಿಲ್ಲ. ಆದರೆ, ಇವೆಲ್ಲದರ ನಡುವೆ ಮಗು ಜನಿಸಿದರು ಅದು ಬೇಡವೆಂದು ರಸ್ತೆಯಲ್ಲಿ ಅನಾಥವಾಗಿ ಎಸೆದು ಹೋಗುವವರನ್ನು ಎಷ್ಟು ಬೈದರು ಕಡಿಮೆಯೇ. …
Read More »ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ
ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 …
Read More »ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?
ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ …
Read More »
Laxmi News 24×7