Breaking News

ರಾಜ್ಯ

ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!

ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …

Read More »

ಸಚಿವರು ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್‌ವೈ ಹರ್ಷ

ಶ್ರೀರಂಗಪಟ್ಟಣ  : ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ …

Read More »

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …

Read More »

ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‌ಎಎಲ್‌ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …

Read More »

ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …

Read More »

ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್

ಪಾಟ್ನಾ: ಕೊರೊನಾ ಮಹಾಮಾರಿ ಸೃಷ್ಟಿಸಿರುವ ಸಂದಿಗ್ಧ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ನಟ ಸೋನು ಸೂದ್ ನೆರವಾಗುತ್ತಿದ್ದಾರೆ. ಸದ್ಯ ಪ್ರವಾಹದಲ್ಲಿ ಕುಟುಂಬದ ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್ ಧವಿಸಿದ್ದಾರೆ. ಬಿಹಾರದ ಚಂಪರನ್ ಪ್ರದೇಶದ ಭೋಲಾ ಗ್ರಾಮದ ಕುಟುಂಬ ಭೀಕರ ಪ್ರವಾಹದಲ್ಲಿ ಪುತ್ರ ಹಾಗೂ ಜೀವನಾಧರವಾಗಿದ್ದ ಎಮ್ಮೆಯನ್ನು ಕಳೆದುಕೊಂಡಿತ್ತು. ಈ ಕುರಿತ ಮಾಹಿತಿ ಪಡೆದ ಸೋನು ಸೂದ್ ಮತ್ತೊಂದು ಎಮ್ಮೆಯನ್ನು ಖರೀದಿ ಮಾಡಿ ಕುಟುಂಬಕ್ಕೆ …

Read More »

ಕ್ಷಣ ಕ್ಷಣಕ್ಕೂ ಕ್ಷೀಣಿಸ್ತಿದೆ ಎಸ್‍ಪಿಬಿ ಆರೋಗ್ಯರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ,

ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಅವರಿಗೆ ಅಂತಾರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತದೆ. ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡುತ್ತಿವೆ. ಕಳೆದ …

Read More »

ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ

ರಾಯಚೂರು: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬ ಬಂದಿದೆ. ಆದರೆ ಈ ಬಾರಿ ಸಾರ್ವಜನಿಕವಾಗಿ ಅದ್ಧೂರಿ ಗಣೇಶೋತ್ಸವ ಆಚರಿಸುವುದಕ್ಕೆ ಅವಕಾಶ ಇಲ್ಲ. ಕೊರೊನಾ ಮಹಾಮಾರಿ ಹಿನ್ನೆಲೆ ಬಹುತೇಕರು ಮನೆಯಲ್ಲಿ ಗಣೇಶನ ಪ್ರತಿಷ್ಠಾಪಿಸುತ್ತಾರೆ. ಹೀಗಾಗಿ ರಾಯಚೂರಿನ ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ ಬಂದಿದೆ. ನಗರದ ಜಯತೀರ್ಥದಾಸರ ಕುಟುಂಬ ಗೋಪಿ ಚಂದನದಿಂದ ಪರಿಸರ ಸ್ನೇಹಿ, ಸಾಂಪ್ರದಾಯಿಕ ಗಣೇಶನನ್ನ ಮಾಡಿ ಮಾರಾಟ ಮಾಡುತ್ತಿದ್ದಾರೆ. …

Read More »

ಲವರ್​ ಅನ್ನು ಮದುವೆ ಆಗೋಕೆ ಅದೇನೆಲ್ಲಾ ಡ್ರಾಮಾ ಮಾಡಿದ್ಳು ಕಿರಾತಕಿ!

ನವದೆಹಲಿ: ಆಕೆಗೆ ಮೂವತ್ತು ವರ್ಷ ವಯಸ್ಸು. ಆಕೆಯ ಗಂಡನ ವಯಸ್ಸು 50. ಅಬೋಧಾವಸ್ಥೆಯಲ್ಲಿದ್ದ ಪತಿಯನ್ನು ಮನೆಗೆಲಸದವನ ನೆರವಿನೊಂದಿಗೆ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಳು. ಪತಿ ಆತ್ಮಹತ್ಯೆಗೆ ಪ್ರಯತ್ನಿಸಿದ ಡಾಕ್ಟರ್ ಎಂದು ಹೇಳಿದ್ದಳು. ತುರ್ತು ಚಿಕಿತ್ಸೆಗಾಗಿ ಆತನನ್ನು ಪರಿಶೀಲಿಸಿದಾಗ ಪ್ರಾಣ ಹೋಗಿವುದು ಖಚಿತವಾಗಿದೆ. ಅದನ್ನು ಡಾಕ್ಟರ್ ಆ ಮಹಿಳೆಗೆ ತಿಳಿಸಿದ್ರು. ಇದೇ ವೇಳೆ, ಮಹಿಳೆಯ ನಡವಳಿಕೆಯಿಂದ ಸಂದೇಹಗೊಂಡ ಡಾಕ್ಟರ್ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಪೊಲೀಸರು ಕೂಡಲೇ ಆಸ್ಪತ್ರೆಗೆ ಆಗಮಿಸಿದ್ರು. ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ರು. ಆಕೆ …

Read More »

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ . ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ …

Read More »