ನವದೆಹಲಿ: ಕೆಲವೇ ತಿಂಗಳಲ್ಲಿ ಕೋವಿಡ್19ಗೆ ಲಸಿಕೆ ಬರಬಹುದು ಎಂಬ ನಿರೀಕ್ಷೆಗಳ ನಡುವೆ ಕೇಂದ್ರ ಸರ್ಕಾರ 50 ಲಕ್ಷದಷ್ಟು ಕೊರೊನಾ ಲಸಿಕೆಯನ್ನು ಖರೀದಿಸಬಹುದು ಎಂದು ವರದಿಯಾಗಿದೆ.ಮೊದಲ ಹಂತದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಿಬ್ಬಂದಿಗೆ, ಸೈನಿಕರಿಗೆ ಲಸಿಕೆಯನ್ನ ನೀಡಲಾಗುತ್ತದೆ. ಹಿರಿಯ ನಾಗರಿಕರು, ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡುವ ನಿರೀಕ್ಷೆ ಇದೆ. ನೀತಿ ಆಯೋಗ, ಆರೋಗ್ಯ ಸಚಿವಾಲಯ ಮತ್ತು ಔಷಧ ಕಂಪನಿಗಳ ಜೊತೆಗೆ ಸೋಮವಾರ ಸಭೆ ನಡೆದಿತ್ತು. ಕೊರೊನಾ ಲಸಿಕೆಯ ಉತ್ಪಾದನಾ …
Read More »ಮಹಾರಾಷ್ಟ್ರದ ಖ್ಯಾತ ಚಿತ್ರಕಲಾವಿದ ಮತ್ತು ಫೋಟೋಗ್ರಾಫರ್ ರಾಮ್ ಇಂದ್ರನಿಲ್ ಕಾಮತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಲಾವಿದ ಮತ್ತು ಫೋಟೋಗ್ರಾಫರ್ ರಾಮ್ ಇಂದ್ರನಿಲ್ ಕಾಮತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮುಂಬೈ ಮೂಲದ ಪ್ರಸಿದ್ಧ ಕಲಾವಿದ ರಾಮ್ ಇಂದ್ರನಿಲ್ ಕಾಮತ್ (41) ಅವರು ತನ್ನ ತಾಯಿಯೊಂದಿಗೆ ಮುಂಬೈನ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಬುಧವಾರ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾಮತ್ ಅವರು ಜನಪ್ರಿಯ ವರ್ಣಚಿತ್ರಕಾರರಾಗಿದ್ದರು. ಜೊತೆಗೆ ಫೋಟೋಗ್ರಾಫರ್ ಆಗಿ ಕೂಡ ಕೆಲಸ ಮಾಡುತ್ತಿದ್ದರು. ಅವರು ಬುಧವಾರ ಮಧ್ಯಾಹ್ನ …
Read More »ಎಂಎಸ್ ಧೋನಿಯವರು, ಒಬ್ಬ ಕಲಾವಿದ, ಸೈನಿಕ ಮತ್ತು ಕ್ರೀಡಾಪಟು:ನರೇಂದ್ರ ಮೋದಿ
ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು, ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ. ಭಾರತದ ಕ್ರಿಕೆಟ್ ತಂಡಕ್ಕಾಗಿ 16 ವರ್ಷಗಳ ಕಾಲ ಆಡಿ, ದೇಶಕ್ಕೆ ಮೂರು ಪ್ರಮುಖ ಐಸಿಸಿ ಟ್ರೋಫಿಗಳನ್ನು ತಂದು ಕೊಟ್ಟ ಚಾಣಾಕ್ಷ ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …
Read More »ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ
ದಾವಣಗೆರೆ, ಆ.20- ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ ಕೂಲಿನಾಲಿ ಮಾಡಿ ತಮ್ಮನನ್ನು ಸಾಕಿ ಸಲಹುತ್ತಿದ್ದರೂ ನೆತ್ತಿಯ ಮೇಲೊಂದು ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಜಗಳೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗ್ರಾಮವೊಂದರ ಮಳೆ ಸೋರುವ ಹಾಳು ಮನೆಯಲ್ಲಿ ವಾಸಿಸುತ್ತಿರುವ ಮೇಘನಾ ಭವಿಷ್ಯದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿದ್ದಾಳೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘನಾ ಭವಿಷ್ಯದಲ್ಲಿ ಬ್ಯಾಂಕ್ ಅಕಾರಿಯಾಗುವ ಕನಸು ಕಂಡಿದ್ದಾಳೆ. ತನ್ನ ಓದಿನ ಜತೆಗೆ ಕೂಲಿನಾಲಿ ಮಾಡಿ ಜೀವನ …
Read More »ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಬೆಳಗಾವಿ: ಕೋವಿಡ್ ನಿರ್ವಹಣೆಯಲ್ಲಿ ವಿಫಲ ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ …
Read More »ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ:ಸಿಟಿ ರವಿ
ಬೆಂಗಳೂರು: ಎಸ್‍ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದರು.ವಿಧಾನಸೌಧದ ಬಳಿ ಮಾತನಾಡಿದ ಸಿಟಿ ರವಿ ಅವರು, ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ …
Read More »ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ …
Read More »ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಹಾರಕ್ಕೆ 1 ಕೋಟಿ ರೂ. ದೇಣಿಗೆಯನ್ನು ನೀಡುವ ಮೂಲಕ ಮಾನವೀಯತೆ ಮೆರೆದ ಅಕ್ಷಯ್ ಕುಮಾರ್
ಮುಂಬೈ, – ಕೊರೊನಾ ದಿಂದಾಗಿ ನಲುಗುತ್ತಿರುವ ಜನರ ನೆರವಿಗಾಗಿ 25 ಕೋಟಿ ನೆರವು ನೀಡಿದ್ದ ಬಾಲಿವುಡ್ ನಟ ಅಕ್ಷಯ್‍ಕುಮಾರ್ ಅವರು ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಹಾರಕ್ಕೆ 1 ಕೋಟಿ ರೂ. ದೇಣಿಗೆಯನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಸ್ಸಾಂನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನರು ಮನೆ, ಆಸ್ತಿ- ಪಾಸ್ತಿ, ಧವಸಧಾನ್ಯಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ, ಇದನ್ನು ಅರಿತ ಅಕ್ಕಿ ಸಂತ್ರಸ್ತರ ನೆರವಿಗೆ ಮುಂದಾಗಿದ್ದು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ, ಕಳೆದ …
Read More »ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!
ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …
Read More »ಪೊಲೀಸ್ ಠಾಣೆಯಿಂದ ಸಿನಿಮಾ ಸ್ಟೈಲಲ್ಲಿ ಎಸ್ಕೇಪ್ ಆಗಿದ್ದ ಸರಗಳ್ಳ ಕೊನೆಗೂ ಲಾಕ್..!
ತುಮಕೂರು, ಆ20- ಕೋರಾ ಠಾಣೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿ ಯಾಗಿದ್ದ ಖತರ್ನಾಕ್ ಸರಗಳ್ಳ ಮತ್ತೆ ಸಿಕ್ಕಿಬಿದ್ದಿದ್ದಾನೆ. ಮಧುಗಿರಿ ತಾಲ್ಲೂಕಿನ ಕಾಟ ಗೊಂಡನಹಳ್ಳಿ ನಿವಾಸಿ ರಂಗಪ್ಪ ರಾಜ ಪ್ರತಾಪ ಪ್ರಭು (38) ಸಿಕ್ಕಿಬಿದ್ದ ಸರಗಳ್ಳ. ಕೊರೊನಾ ಭೀತಿಯ ಹಿನ್ನೆಲೆ ಯಲ್ಲಿ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸುವ ವೇಳೆ ಊಟದ ಎಲೆ ಎಸೆಯುವ ನೆಪದಲ್ಲಿ ರಂಗಪ್ಪ ಸಿನಿಮೀಯ ರೀತಿಯಲ್ಲಿ ಕೋರಾ ಠಾಣೆಯಿಂದ ಪರಾರಿಯಾಗಿದ್ದ.ಘಟನೆ ಹಿನ್ನೆಲೆಯಲ್ಲಿ ಕೋರಾ …
Read More »
Laxmi News 24×7