ಲಕ್ನೋ: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್ ತಲೆಗೆ 51 ಲಕ್ಷ ಘೋಷಣೆ ಮಾಡಿದ್ದ ಮುಸ್ಲಿಂ ನಾಯಕನನ್ನು ಮೀರತ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಶಹಜೀಬ್ ರಿಜ್ವಿ ಸಮಾಜವಾದಿ ಪಕ್ಷದ ಮಾಜಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತನಾಗಿದ್ದು, ಈತನನ್ನು ಮೀರತ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೀರತ್ ನ ಫಲ್ವಾಡಾ ಪಟ್ಟಣದ ರಸೂಲ್‍ಪುರ ಗ್ರಾಮದ ನಿವಾಸಿಯಾಗಿರುವ ರಿಜ್ವಿ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದನು. …
Read More »ಸ್ವಯಂಕೃತ ಅಪರಾಧದಿಂದ ‘ಕಾವೇರಿ’ ಕೋಪಕ್ಕೆ ತುತ್ತಾದರಾ ಕೊಡಗಿನ ಜನ?
ಮಡಿಕೇರಿ: ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಭಕ್ತರು ನಾಡಿನೆಲ್ಲೆಡೆ ಇದ್ದಾರೆ. ತಲಕಾವೇರಿಯಲ್ಲಿ ಹುಟ್ಟಿ ನಾಡಿನುದ್ದಕ್ಕೂ ಜೀವಕಳೆ ತುಂಬುವ ಜೀವನದಿ. ಆದರೆ ಕೊಡಗಿನ ಜನರಿಗೆ ಮಾತ್ರ ಕಣ್ಣೀರು ತರಿಸುತ್ತಿದ್ದಾಳೆ. ಕಾವೇರಿ ನದಿ ಹೀಗೆ ತನ್ನೊಡಲ ಜನರಿಗೆ ಸಂಕಷ್ಟ ತಂದಿಟ್ಟಿರುವುದಕ್ಕೆ ಜನರ ಸ್ವಯಂಕೃತ ಅಪರಾಧವೇ ಕಾರಣ ಎಂದು ತಲಕಾವೇರಿ ಮೂಲಸ್ವರೂಪ ರಕ್ಷಣಾ ಸಮಿತಿ ಆರೋಪ ಮಾಡಿದೆ. 2005 ರಲ್ಲಿ ತಲಕಾವೇರಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಹಲವು ಕಾಮಗಾರಿಗಳನ್ನು ಮಾಡಲಾಯಿತು. ಇದರ ಪರಿಣಾಮ ಬ್ರಹ್ಮಗಿರಿ ಬೆಟ್ಟದಲ್ಲಿ …
Read More »74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.: ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಸಚಿವರು.
Read More »ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ,
ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ಈ ಬಾರಿ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಇಗೆ ಲಭಿಸಿದೆ. ಅತ್ಯುತ್ತಮ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆಪ್ರಶಸ್ತಿ ಪುರಸ್ಕೃತರು : 1. ಹೇಮಂತ್ಕುಮಾರ್- ಉಪಪೊಲೀಸ್ ವರಿಷ್ಠಾಧಿಕಾರಿ, ಲೋಕಾಯುಕ್ತ, ಬೆಂಗಳೂರು 2. ಪರಮೇಶ್ವರ್ ಹೆಗ್ಡೆ -ಉಪಪೊಲೀಸ್ ವರಿಷ್ಠಾಧಿಕಾರಿ, ಆರ್ಥಿಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು 3. …
Read More »ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ
ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಗುಲಾಮಗಿರಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು, ದೇಶದ ಜನರನ್ನು ಒಂದು ಮಾಡಲು ಧ್ವಜದ ಅಗತ್ಯವುಂಟಾಗಿತ್ತು. ಈ ಧ್ವಜ ಈಗ ರಾಷ್ಟ್ರೀಯತೆಯ ಸಂಕೇತವಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರದ ಗುರುತು ಧ್ವಜವಾಗಿದೆ. ಇಡೀ …
Read More »ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ
ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …
Read More »ಕೃಷಿ ಇಲಾಖೆಯಿಂದ ಮೊಬೈಲ್ ಆಯಪ್ | ಬೆಳೆ ಸಮೀಕ್ಷೆ; ರೈತರಿಗೇ ಜವಾಬ್ದಾರಿ
ಚಾಮರಾಜನಗರ: ಕೃಷಿ ಇಲಾಖೆಯು 2020-21ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡುವ ಜಾವಾಬ್ದಾರಿಯನ್ನು ರೈತರಿಗೇ ನೀಡಿದೆ. ಇದೇ ಉದ್ದೇಶಕ್ಕಾಗಿ ಕೃಷಿ ಇಲಾಖೆಯು ಬೆಳೆ ‘ಸಮೀಕ್ಷೆ ಆಯಪ್ (farmers crop survey app 2020-21) ಅನ್ನು ಅಭಿವೃದ್ಧಿ ಪಡಿಸಿದ್ದು, ಆಯಂಡ್ರಾಯ್ಡ್ ಸ್ಮಾರ್ಟ್‌ಗಳಲ್ಲಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ರೈತರು, ಈ ಆಯಪ್ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿ, ಚಿತ್ರಗಳನ್ನು ಅಪ್‌ಲೋಡ್ ಮಾಡಬೇಕು. ಆಗಸ್ಟ್ 10ರಂದು ಈ ಯೋಜನೆಗೆ ಚಾಲನೆ ಸಿಕ್ಕಿದ್ದು, ಸಮೀಕ್ಷೆ …
Read More »ಚಾಮರಾಜನಗರ | ಕೊರೊನಾ ಸೈನಿಕ ಎಎಸ್‌ಐ ಸಾವು
ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್‌ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್‌ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್‌ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …
Read More »ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಬಿಮ್ಸ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »
Laxmi News 24×7