Breaking News

ರಾಜ್ಯ

ನನ್ನ ಹೇಳಿಕೆಗೆ ನಾನು ಬದ್ಧ. ನನ್ನ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಲು ಸಿದ್ಧ

ಶಿವಮೊಗ್ಗ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಈಶ್ವರಪ್ಪನವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಈ ಈಶ್ವರಪ್ಪ, ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ …

Read More »

ಮದುಮಗಳ ಕೈ ಹಿಡಿಯಲು ಹೋಗಿ ಹೆಣವಾದ ರೌಡಿ ಶೀಟರ್

ಯಾದಗಿರಿ: ಮದುವೆ ಮನೆಗೆ ಹೋಗಿ ಮದುಮಗಳ ಕೈ ಹಿಡಿಯಲು ಮುಂದಾದ ರೌಡಿ ಶೀಟರ್, ಆಕೆಯ ತಂದೆ ಮತ್ತು ಸಹೋದರರಿಂದ ಕೊಲೆಯಾಗಿದ್ದಾನೆ. ಈ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಪರಮೇಶ್ವರಪಲ್ಲಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೊಹಮ್ಮದ್ ಹನೀಪ್ (34) ಕೊಲೆಯಾದವನಾಗಿದ್ದು, ಈತ ಚಿನ್ನಕಾರ ಗ್ರಾಮದ ರೌಡಿ ಶೀಟರ್. ಆರೋಪಿಗಳನ್ನು ಮದುಮಗಳ ತಂದೆ ತಂದೆ ರಸೂಲ್ ಮತ್ತು ಮಕ್ಕಳಾದ ಗುಲಾಮ್, ಇರ್ಫಾನ್, ಹಾರೂನ್ ಎಂದು ಗುರುತಿಸಲಾಗಿದೆ.   ಸೋಮವಾರ ಮಧ್ಯಾಹ್ನ …

Read More »

ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಓಡಾಟದ ಮೇಲಿನ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಓಡಾಟದ ಮೇಲಿನ ನಿಷೇಧವನ್ನು ಮುಂದುವರಿಸಲಾಗಿದೆ.ಆಗಸ್ಟ್ 31 ರವರೆಗೆ ಭಾರೀ ವಾಹನಗಳ ಓಡಾಟವನ್ನು ಮುಂದುವರಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ಕೂಡ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೇ ಜಿಲ್ಲೆಯಲ್ಲಿ ಭಾರೀ …

Read More »

ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು

ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ಪ್ರಣಬ್ ಮುಖರ್ಜಿ, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತಮಗೆ ಕೊರೊನಾ ಸೋಂಕು ತಗುಲಿದೆ ಎಂಬುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ …

Read More »

ಸಾಮಾಜಿಕ ಅಂತರ ಕಾಪಾಡಲು ಹೊಸ ಪ್ಲಾನ್ ಮಾಡಿದ ತುಮಕೂರು C.E,O.

ತುಮಕೂರು : ಸಾಮಾಜಿಕ ಅಂತರ ಕಾಪಾಡಿಕೊಂಡು ರಾಜ್ಯ ವಿಧಾನ ಸಭಾ ಅಧಿವೇಶನ ಹೇಗೆ ನಡೆಸೋದು? ಒಂದು ಆಸನ ಬಿಟ್ಟು ಇನ್ನೊಂದು ಆಸನದಲ್ಲಿ ಕುಂತರೂ ಕ್ರಮೇಣ ಅಂತರ ಮರೆಯಾಗುತ್ತದೆ. ಇದರಿಂದ ಮತ್ತೆ ಸೋಂಕು ಹರಡುವ ಭೀತಿ ಕಾಡುತ್ತದೆ. ಆದರೆ ತುಮಕೂರು ಜಿಲ್ಲಾ ಪಂಚಾಯತಿ ಸಿಇಒ ಶುಭಾ ಕಲ್ಯಾಣ್ ಸಭೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿಭಿನ್ನ ಆಲೋಚನೆಯೊಂದನ್ನು ಮಾಡಿದ್ದಾರೆ. ಸಾಮಾಜಿಕ ಅಂತರದಿಂದ ಕೊರೋನಾ ಮಟ್ಟ ಹಾಕಬಹುದು ಅಂತಾ ಸರ್ಕಾರ ಘೋಷಿಸಿದೆ. ಸಚಿವರು, ಶಾಸಕರು …

Read More »

ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಸಿಂಚನ ಭವನಕ್ಕೆ ಭೇಟಿ ನೀಡಿದಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೆಬ ಜೊಲ್ಲೆ

ಕೊಲ್ಲಾಪುರ –  ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೆಬ ಜೊಲ್ಲೆ  ಪ್ರವಾಹದ ಕುರಿತು ಚರ್ಚಿಸಿದರು. ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಸಿಂಚನ ಭವನಕ್ಕೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ಹೃತ್ಪೂರ್ವಕ ಸ್ವಾಗತಿಸಿದರು. ನಂತರ ಅಧಿಕಾರಿಗಳೊಂದಿಗೆ ಮಹಾಪುರದ ಕುರಿತು ಸುದೀರ್ಘ ಚರ್ಚೆನಡೆಸಿ, ಮುಖ್ಯವಾದ ಮಾಹಿತಿಗಳನ್ನು ಪಡೆದುಕೊಂಡು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಭಾರೀ ಮಳೆಯಿಂದ ಸಂಭವಿಸುತ್ತಿರುವ ಅನಾಹುತಗಳ ತೀವ್ರತೆಯನ್ನು ಮನಗಂಡು, ನಿತ್ಯ ಮಳೆಯ …

Read More »

ಅನಾಥಾಶ್ರಮದಲ್ಲೇ 14 ವರ್ಷದ ಬಾಲಕಿ ಮೇಲೆ ಅನಾಥಾಶ್ರಮದ ದಾನಿ ಒಂದು ವರ್ಷ ನಿರಂತರವಾಗಿ ಅತ್ಯಾಚಾರ

ಹೈದರಾಬಾದ್: ಅನಾಥಾಶ್ರಮದಲ್ಲೇ 14 ವರ್ಷದ ಬಾಲಕಿ ಮೇಲೆ ಅನಾಥಾಶ್ರಮದ ದಾನಿ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.ತೆಲಂಗಾಣದ ಮೆಡ್ಚಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅನಾಥಾಶ್ರಮದಲ್ಲಿದ್ದ ಬಾಲಕಿ ಮೇಲೆ ದಾನಿ ಸತತ ಒಂದು ವರ್ಷ ಕಾಲ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅನಾಥಾಶ್ರಮದ ಮಾಲೀಕನನ್ನು ಚೀಲುಕುರಿ ವಿಜಯ್ ಎಂದು ಗುರುತಿಸಲಾಗಿದ್ದು, ಈತ ಹಾಸ್ಟೆಲ್ ವಾರ್ಡನ್ ಸಹ ಆಗಿದ್ದಾನೆ. ಈತನ ಸಹೋದರ …

Read More »

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …

Read More »