Breaking News

ರಾಜ್ಯ

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.ಸೋಮವಾರ ಸಂಜೆ ಪುತ್ರಿ …

Read More »

ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಸಿಕ್ಕಿದೆ.

ಕೋಲ್ಕತ್ತಾ: ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಪಶ್ಚಿಮ ಬಂಗಾಳದ ದಿಘಾದಲ್ಲಿ ಸಿಕ್ಕಿದೆ. ಚಿಲ್‍ಶಂಕರ್ ಮೀನು ಎಂದು ಕರೆಯಲಾಗುತ್ತದೆ. ಇದು ಸುಮಾರು 780 ಕೆ.ಜಿ ತೂಕ ಇದೆ. ಚಿಲ್‍ಶಂಕರ್ ಮೀನು ಅಪರೂಪದ ಜಾತಿಯಾಗಿದ್ದು, ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸಿಕ್ಕಿದೆ. ಈ ಮೊದಲು ಇಂತಹ ಮೀನನ್ನು ನೋಡಿಲ್ಲ ಎಂದು ಮೀನುಗಾರರು ಹೇಳಿದ್ದಾರೆ. ಸೋಮವಾರ ಒರಿಸ್ಸಾದ ವ್ಯಕ್ತಿಯೊಬ್ಬನ ಒಡೆತನದ ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸೆರೆ ಸಿಕ್ಕಿದೆ. ಅದರಲ್ಲೂ ಪಶ್ಚಿಮ …

Read More »

800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್‌ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …

Read More »

ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನಿಮ್ಮ ನಿರಂತರ ಪ್ರಾರ್ಥನೆ …

Read More »