Breaking News

ರಾಜ್ಯ

18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್; ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್​​ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ 18 ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದ್ದು, ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ಭಾನುವಾರ ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್, ಸಭಾಪತಿ ರುದ್ರಪ್ಪ ಲಮಾಣಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು …

Read More »

ಮುಂಗಾರು ಮೊದಲೇ ತುಂಬಿದ ತುಂಗೆ

ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, 5 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ 7,500 ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್​ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಗರ್ಭಿಣಿ

ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್​​ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್​ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …

Read More »

ಮಂಗಳೂರಿನಲ್ಲಿ ಭಾರಿ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನ ಪಂಪ್​ವೆಲ್ ಸೇರಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರಾಶಾಹಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೀನುಗಾರರಿಗೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ …

Read More »

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…

ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜ‌ನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …

Read More »

ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ರೌಡಿಶೀಟರ್​ ಅರೆಸ್ಟ್​

ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ (Bengaluru) ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್​ ​ಬಂಧಿತ. ಬಂಧಿತ ಸಮೀರ್​ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು. ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್​ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್​ಗಳನ್ನು ವಶಕ್ಕೆ …

Read More »

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ ನಿಪ್ಪಾಣಿ ಮತಕ್ಷೇತ್ರದ ಬೇನಾಡಿ ಗ್ರಾಮದಲ್ಲಿ, ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 15 ಲಕ್ಷ ರೂ. ಮೊತ್ತದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ನೂತನ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಲಾಯಿತು. ಶಿಕ್ಷಣ ಮಾತ್ರದಿಂದಲೇ ಸದೃಢ ಸಮಾಜ‌ ನಿರ್ಮಿಸಲು ಸಾಧ್ಯ. ಆದ್ದರಿಂದ ಎಲ್ಲ‌ ಮಕ್ಕಳಿಗೂ ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗದಂತೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ …

Read More »

ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ

ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …

Read More »

ಮನೆಗೆ ಬಿಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ

ಚಿಕ್ಕೋಡಿ: ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ‌ ಗ್ರಾಮದ ಸ್ವಯಂ ಘೋಷಿತ ಮಠಾಧೀಶನಾದ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ನೀಡಿದ ವಿವರಣೆ ಹೀಗಿದೆ: ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ …

Read More »