ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ …
Read More »ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು.
ಮೂಡಲಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿಯಮಾನುಸಾರ ನಡಿಯುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿ ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು. ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯಲ್ಲಿ ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳಲ್ಲಿ ಸರ್ಕಾರದ ನಿಯಮ ಪಾಲಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ, ಸ್ಕ್ರಿನಿಂಗ್, ಮಾಸ್ಕ್, ಸಿಸಿ …
Read More »ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.
ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.
Read More »ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.
ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …
Read More »ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತ
ಶಿವಮೊಗ್ಗ: ಮೈಸೂರು ದಿವಾನರಾಗಿದ್ದ ದಿವಂಗತ ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು. ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಸಾವಿರಾರು ಮಂದಿ ಕಾರ್ಮಿಕರು ಅತಂತ್ರರಾಗಿದ್ದರು. ಸರ್ಕಾರ ಕೂಡ ಈ ಹಿಂದೆ ಕಾರ್ಖಾನೆಗೆ ಮರುಜೀವ ನೀಡಲು ಹಲವು ಬಾರಿ ಪ್ರಯತ್ನ ನಡೆಸಿತ್ತು. ಕಾರ್ಖಾನೆ ಆರಂಭಿಸುವಂತೆ ಕಾರ್ಮಿಕರು ಸಹ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರು. ಆದರೂ ಕಾರ್ಖಾನೆ ಪುನರ್ ಆರಂಭವಾಗಲೇ ಇಲ್ಲ. ಜಿಲ್ಲೆಯ ಜನಪ್ರತಿನಿಧಿಗಳು …
Read More »ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..
ಅಥಣಿ: ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ 32 ವರ್ಷದ ವ್ಯಕ್ತಿ. ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …
Read More »ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ
ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Read More »ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ
ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕರನ್ನು ಮಾರ್ಗೊವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕು ತಗಲಿರುವುದು ಮಂಗಳವಾರ ನಡೆಸಲಾಗಿರುವ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್-19ರೋಗ ತಗಲಿದ್ದು, ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ತನಕ ಗೋವಾದಲ್ಲಿ 1,315 ಪ್ರಕರಣಗಳು ಪತ್ತೆಯಾಗಿದ್ದು ಮತ್ತು ಮೂರು ಸಾವುಗಳು …
Read More »ಗೌರವಧನ ಸೇರಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ
ಸುರಪುರ: ಕೊರೊನಾ ಸಂಕಷ್ಟದಲ್ಲಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದು, ಗೌರವಧನ ಸೇರಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ ತಹಸೀಲ್ದಾರ್ ಕಚೇರಿ ಎದುರು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರಿಗೆ ಸದ್ಯ ಸರ್ಕಾರ ನೀಡುತ್ತಿರುವ ಗೌರವಧನದಲ್ಲಿ ಜೀವನ ನಡೆಸುವುದು ಕಷ್ಟದ ಸಂಗತಿಯಾಗಿದ್ದು, ಕನಿಷ್ಠ 12 ಸಾವಿರ ರೂಪಾಯಿಗಳ ಗೌರವಧನ ನೀಡಬೇಕು. ಕೊರೊನಾ …
Read More »ಕಸ ಬಿಸಾಡುವಂತೆ ಗುಂಡಿಗೆ ಶವ ಬಿಸಾಕಿದ ಜೆಸಿಬಿ!ನಿನ್ನೆ ಬಳ್ಳಾರಿ, ಇಂದು ದಾವಣಗೆರೆ
ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ. ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರೂ ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಹೌದು. ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ …
Read More »
Laxmi News 24×7