Breaking News

ರಾಜ್ಯ

ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..

ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …

Read More »

ಆಟೋ ಚಾಲಕನಿಗೆ ವಕ್ಕರಿಸಿದ ವೈರಸ್…. be alert alll.

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸೋಂಕು ಆಟೋದಲ್ಲಿ ಸುತ್ತಾಡಿದ್ದು ಜನ ಭಯಭೀತಗೊಂಡಿದ್ದಾರೆ. ಆಟೋ ಚಾಲಕನಿಗೆ ಪಾಸಿಟಿವ್ ಬಂದಿದ್ದು, ಯಾರಿಗೆಲ್ಲಾ ಸೋಂಕು ಹಂಚಿದ್ದಾರೋ ಎಂಬ ಆತಂಕ ಮನೆ ಮಾಡಿದೆ. ಚಿತ್ರದುರ್ಗದ ಸ್ವಾಮಿವಿವೇಕಾನಂದ ನಗರದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಸೀಲ್‍ಡೌನ್‍ಗೆ ಒಳಗಾಗಿದೆ. 27 ವರ್ಷದ ಆಟೋ ಚಾಲಕನಿಗೆ ಸೋಂಕು ವಕ್ಕಿರಿಸಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಆಟೋ ಚಾಲಕ ತನ್ನ ಸಂಬಂಧಿಗಳ ಊರುಗಳಾದ ಕೊಪ್ಪಳದ ಗಂಗಾವತಿ ಹಾಗೂ ಸೊಂಡೂರಿನಲ್ಲಿ ಸುತ್ತಾಡಿದ್ದನು. ಕಳೆದ 15 …

Read More »

ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!

ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »

ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …

Read More »

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …

Read More »

ಬಳಕೆದಾರರ ಗೌಪ್ಯತೆ, ಭಾರತದ ಸಮಗ್ರತೆಗೆ ದಕ್ಕೆ ಉಂಟುಮಾಡಿಲ್ಲ – ಬ್ಯಾನ್ ಬಳಿಕ ಟಿಕ್‍ಟಾಕ್ ಪ್ರತಿಕ್ರಿಯೆ

ನವದೆಹಲಿ: ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭಾರತದ ಭದ್ರತೆ, ಸಮಗ್ರತೆಗೆ ದಕ್ಕೆ ಉಂಟು ಮಾಡುವುದಿಲ್ಲ ಎಂದು ಟಿಕ್ ಟಾಕ್ ಸ್ಪಷ್ಟನೆ ನೀಡಿದೆ. ಸೋಮವಾರ ಭಾರತದಲ್ಲಿ ಟಿಕ್‍ಟಾಕ್ ಸೇರಿ 59 ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಿದ ಬಳಿಕ ಇಂದು ಟಿಕ್‍ಟಾಕ್ ಮೊದಲ ಪ್ರತಿಕ್ರಿಯೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಎಂದು ಹೇಳಿದೆ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ …

Read More »

ಕೊರೊನಾ ವಾರಿಯರ್ಸ್‍ಗಳಾಗಿ50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಂಗಳೂರು, ಜೂ.30- ಕೊರೊನಾ ವಾರಿಯರ್ಸ್‍ಗಳಾಗಿ ಕೆಲಸ ಮಾಡುವ ಖಾಸಗಿ ಮತ್ತು ಅರೆಕಾಲಿಕ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿಗಳಿಗೂ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್‍ಗಳಾಗಿ ಕೆಲಸ ಮಾಡುವ ವೈದ್ಯಕೀಯ ಕ್ಷೇತ್ರದವರಿಗೆ 50 ಲಕ್ಷ …

Read More »

ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ

ನವದೆಹಲಿ/ಮುಂಬೈ, ಜೂ.30- ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಣಕ್ಕೆ ಬರದೇ ಆತಂಕಕಾರಿ ಮಟ್ಟದಲ್ಲೇ ಸಾಗಿದೆ. ಕಳೆದ 24 ತಾಸುಗಳಲ್ಲಿ ಆಘಾತಕಾರಿ ಮಟ್ಟದಲ್ಲಿ ಅಂದರೆ 18,522 ಸೋಂಕು ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 418 ಹೊಸ ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 18,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್‍ಗಳು ದಾಖಲಾಗಿರುವುದು ಇದು ಸತತ ಮೂರನೇ ದಿನ. ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ …

Read More »

ಅನ್‍ಲಾಕ್-2 ಮಾರ್ಗಸೂಚಿ ಕೇಂದ್ರ ಸರ್ಕಾರ ಪ್ರಕಟಿಸಿದೆ.ಜುಲೈ 31ರವರೆಗೆ ಶಾಲಾ, ಕಾಲೇಜುಗಳು ಇಲ್ಲ

ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್-2 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ. ಅನ್‍ಲಾಕ್-1 ಜೂನ್ 30ಕ್ಕೆ ಕೊನೆಗೊಳ್ಳುವ ಹಿನ್ನೆಲೆ ಇಂದು ಅನ್‍ಲಾಕ್-2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಮೆಟ್ರೋ ರೈಲು, ಸಿನಿಮಾ ಥೀಯೇಟರ್‍ಗಳು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್, ಎಂಟರ್‍ಟೈನ್ಮೆಂಟ್ ಪಾರ್ಕ್‍ಗಳು, ಬಾರ್, ಸಭಾ ಭವನಗಳು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಸಾಮಾಜಿಕ, …

Read More »