ಬೆಂಗಳೂರು: ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ. ಏನು ಇರುತ್ತೆ? – ಆಸ್ಪತ್ರೆ ಸೇವೆಗಳು, ಮೆಡಿಕಲ್ …
Read More »ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.
ಜೇವರ್ಗಿ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕಾಲೇಜ್ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕ ಸದಸ್ಯರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕವೂ ಮಾಸ್ಕ್ , ಸ್ಯಾನಿಟೈಸರ್ ನೀಡಲಾಗುತ್ತಿದೆ ಎಂದು ಡಾ. ಈಶ್ವರ್ ಕರಿಘೋಳೇಶ್ವರ ಹೇಳಿದರು. ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಗಟ್ಟವಾಗಿದೆ. ಆದ ಕಾರಣ ಮಕ್ಕಳು ಧೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು ಎಂದು ಆತ್ಮಸ್ಥೈಯ ತುಂಬಿದರು. ಈ …
Read More »ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್‍ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.
ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …
Read More »ಎರಡೂವರೆ ವರ್ಷದ ಧಾರವಾಡದ ಪುಟಾಣಿ ಬಾಲಕಿ ತನ್ನ ವಿಶಿಷ್ಟ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ
ಧಾರವಾಡ: ಎರಡೂವರೆ ವರ್ಷದ ಧಾರವಾಡದ ಪುಟಾಣಿ ಬಾಲಕಿ ತನ್ನ ವಿಶಿಷ್ಟ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲ್ಲೂಕಿನಜೋಡಳ್ಳಿ ( ಜಿ.ಬಸವನಕೊಪ್ಪ) ಗ್ರಾಮದ ಉಮೇಶ ಮುತ್ತಗಿ, ಹಾಗೂ ಸಕ್ಕೂಬಾಯಿ ದಂಪತಿಗಳ ಮಗು ವೈಷ್ಣವಿ ಈ ಸಾಧನೆಗೈದಿದ್ದಾಳೆ. ತನ್ನ ತೊದಲುನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ, ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಬಾಲಕಿಯ ತಂದೆ ಉಮೇಶ …
Read More »ಹುಡುಗಿ ಕೈಕೊಟ್ಟಿದ್ದಕ್ಕೆನ ಟಿಕ್‍ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆ
ಹೈದರಾಬಾದ್: ಹುಡುಗಿ ಕೈಕೊಟ್ಟಿದ್ದಕ್ಕೆ ನೊಂದ 23 ವರ್ಷದ ಭಗ್ನ ಪ್ರೇಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾರೆಡ್ಡಿ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ. ಸಂತೋಷ್ ಆತ್ಮಹತ್ಯೆಗೆ ಶರಣಾದ ಯುವಕ. ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಯುವತಿಯನ್ನು ಪ್ರೀತಿಸುತ್ತಿದ್ದಳು. ಯುವತಿ ಇವನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾನೆ ಎಂದು ಸಂತೋಷ್ ಪೋಷಕರು ಹೇಳಿದ್ದಾರೆ. ಆತ್ಮಹತ್ಯೆಗೆ ಮುನ್ನ ಟಿಕ್‍ಟಾಕ್ ವಿಡಿಯೋ ಮಾಡಿ ಸ್ಟೇಟಸ್ ಸಹ ಹಾಕಿಕೊಂಡಿದ್ದಾನೆ. ಸಂತೋಷ್ ತಿಮ್ಮಕ್ಕಪಾಳ್ಯದ …
Read More »ಮಹಾರಾಷ್ಟ್ರದಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಕೊರೊನಾ
ಯಾದಗಿರಿ: ಮಹಾರಾಷ್ಟ್ರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಯಾದಗಿರಿಗೆ ಬಂದಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವಿದ್ಯಾರ್ಥಿ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾಗಿದ್ದಾನೆ. ಪಾಸಿಟಿವ್ ಬಂದ ವಿದ್ಯಾರ್ಥಿ ಮೂಲತಃ ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿಯಾಗಿದ್ದು, ಲಾಕ್‍ಡೌನ್‍ನಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸಿಲುಕಿದ್ದನು. ಇಷ್ಟು ದಿನ ಮಹಾರಾಷ್ಟ್ರದಲ್ಲಿಯೇ ಇದ್ದ ವಿದ್ಯಾರ್ಥಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಈ ತಿಂಗಳ 22ರಂದು ಜಿಲ್ಲೆಗೆ ಬಂದಿದ್ದನು. ವಿದ್ಯಾರ್ಥಿ ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗ್ರತೆ ವಹಿಸಿ …
Read More »ಅಬುಧಾಬಿಯಲ್ಲಿ ಮಂಗಳೂರಿನ ಅಡ್ಡೂರಿನ ಯುವಕ ಯಶವಂತ ಪೂಜಾರಿಗೆ ಅಪಘಾತ,ಮಂಗಳೂರಿನ ಯುವಕನ ಮೃತದೇಹ ತವರೂರಿಗೆ
ಮಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಮೆರೆದ, ಸೌಹಾರ್ದತೆಯನ್ನು ಎತ್ತಿಹಿಡಿಯುವಂತಹ ಶ್ಲಾಘನೀಯ ಕಾರ್ಯವನ್ನು ಯುಎಇಯ ಕನ್ನಡಿಗರು ನಡೆಸಿದ್ದು. ಅಬುಧಾಬಿಯಲ್ಲಿ ಮೃತರಾಗಿದ್ದ ಕರಾವಳಿಯ ಯುವಕ ಯಶವಂತ್ ಪೂಜಾರಿಯ ಮೃತದೇಹವನ್ನು ಯುಎಇ ಸರ್ಕಾರದ ಎಲ್ಲಾ ನಿಯಮ ಪಾಲಿಸಿ ತಾಯ್ನಾಡಿಗೆ ರವಾನಿಸಲು ಯಶಸ್ವಿಯಾಗಿದ್ದು. ಈ ಯಶಸ್ವಿಯ ಹಿಂದೆ ಸತತ 13 ದಿನಗಳು ನಡೆಸಿದ ಪರಿಶ್ರಮ ಎಲ್ಲರಿಗೂ ಮಾದರಿಯಾಗಿದೆ. ಅಬುಧಾಬಿಯಲ್ಲಿ ಮಂಗಳೂರಿನ ಅಡ್ಡೂರಿನ ಯುವಕ ಯಶವಂತ ಪೂಜಾರಿಗೆ ಅಪಘಾತವಾಗಿದೆ ಎಂದು ಮುಝಮ್ಮಿಲ್ ಎಂಬವರು ಕನ್ನಡಿಗಾಸ್ ಹೆಲ್ಪ್ …
Read More »ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆಮೊದಲ ಬಲಿ
ಕೋಲಾರ: ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುರಿಸಿದ್ದು, ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ 8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕಳೆದ ಒಂದು ವಾರದಿಂದ ಜಾಲಪ್ಪಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ದೆಹಲಿಯಿಂದ …
Read More »
Laxmi News 24×7