Breaking News

ರಾಜ್ಯ

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …

Read More »

ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ.

ಲಕ್ನೋ : ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ. ಆ 57 ಅಪ್ರಾಪ್ತರಲ್ಲಿ ಐವರು ಗರ್ಭಿಣಿಯಾಗಿದ್ದಾರೆ. ಕೊರೋನಾ ಸೋಂಕಿತರಲ್ಲದ ಇನ್ನಿಬ್ಬರು ಯುವತಿಯರು ಕೂಡ ಗರ್ಭಿಣಿಯಾಗಿದ್ದಾರೆ ಎಂಬ ಆತಂಕಕಾರಿ ಸಂಗತಿ ವೈದ್ಯಕೀಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.  ಸರ್ಕಾರಿ ಶೆಲ್ಟರ್​ ಹೋಂನಲ್ಲಿರುವ ಈ ಅಪ್ರಾಪ್ತ ಯುವತಿಯರಿಗೆ ಯಾರಿಂದ ಸಾಮೂಹಿಕವಾಗಿ ಕೊರೋನಾ ಸೋಂಕು ತಗುಲಿದೆ? ಅವರು …

Read More »

ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ

ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್‍ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..!

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..! ನವದೆಹಲಿ,ಜೂ.21-ಪೂರ್ವ ಲಡಾಕ್‍ನಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ಹಿಂಸಾತ್ಮಕ ಸಂಘರ್ಷದ ನಂತರ ಗಡಿಭಾಗದಲ್ಲಿ ಯುದ್ಧದ ಕಾರ್ಮೋಡಗಳು ದಟ್ಟವಾಗಿ ಕವಿದಿದ್ದು, ಉಭಯ ದೇಶಗಳ ಸೇನಾಪಡೆಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿವೆ. ಇದೇ ವೇಳೆ ಚೀನಾದಿಂದ ಎದುರಾಗಬಹುದಾದ ಯಾವುದೇ ದುಸ್ಸಾಹಸದ ಸನ್ನಿವೇಶ ಎದುರಿಸಲು ಭಾರತ ಸಂಪೂರ್ಣ ರೀತಿಯಲ್ಲಿ ಸಜ್ಜಾಗಿದೆ. ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ …

Read More »

ಮಳೆ ಮೋಡದ ಮರೆಯಲ್ಲಿ ವರ್ಷದ ಮೊದಲ ಕೌತುಕ- ಸೂರ್ಯಗ್ರಹಣ ದರ್ಶನ……..

ಉಡುಪಿ: ಜಿಲ್ಲೆಯಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗಿದೆ. ಬೆಳಗ್ಗೆ 10.04 ನಿಮಿಷಕ್ಕೆ ಸರಿಯಾಗಿ ಸೂರ್ಯಗ್ರಹಣ ಆರಂಭವಾಗಿದೆ. ಮಳೆ ಮೋಡದ ನಡುವೆ ಗ್ರಹಣದ ಸೂರ್ಯ ಆಗಾಗ ದರ್ಶನ ಕೊಟ್ಟಿದ್ದಾನೆ. ಈ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಆರಂಭವಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮುಂಗಾರು ಅಬ್ಬರಿಸುತ್ತಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇರುವುದರಿಂದ ಸೂರ್ಯ ಮೋಡದ ಮರೆಯಿಂದ ಆಗಾಗ ಹೊರಬಂದು ಕಾಣಿಸಿಕೊಳ್ಳುತ್ತಿದ್ದಾನೆ. ನಿಗದಿತ ಸಮಯಕ್ಕೆ ಅಂದರೆ 10.04ಕ್ಕೆ ಗ್ರಹಣ …

Read More »

ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …

Read More »

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …

Read More »